ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Belagavi Accident: ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಕಾರು ಅಪ್ಪಚ್ಚಿ; ಪವಾಡಸದೃಶವಾಗಿ ಇಬ್ಬರು ಪಾರು

Belagavi Accident: ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಕಾಂಕ್ರೀಟ್ ಮಿಕ್ಸರ್ ವಾಹ‌ನ ಉರುಳಿದ್ದರಿಂದ ವ್ಯಾಗನರ್‌ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ.

ಬೆಳಗಾವಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಬಿದ್ದಿರುವ ಘಟನೆ ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಕಾಂಕ್ರೀಟ್ ಮಿಕ್ಸರ್ ವಾಹ‌ನ ಉರುಳಿದ್ದರಿಂದ ವ್ಯಾಗನರ್‌ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಧಾರವಾಡ ಮೂಲದ ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ.

ಕಾರಿನಲ್ಲಿ ಧಾರವಾಡದಿಂದ ಬೆಳಗಾವಿಗೆ ಇಬ್ಬರು ಬರುತ್ತಿದ್ದರು. ಸಂಬಂಧಿಗಳ ಆಗಮನಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ನಿಲ್ಲಿಸಿ ಕಾಯುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ವಾಹ‌ನ ಕಾರಿನ ಮೇಲೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಸುದ್ದಿಯನ್ನೂ ಓದಿ | Shocking news: ನಾಯಿಯನ್ನೂ ಬಿಡದ ಕಾಮುಕ, ಬೆಂಗಳೂರಿನಲ್ಲಿ ಲೈಂಗಿಕ ವಿಕೃತಿ

ಕಾರಿನ ಮೇಲೆ ವಾಹನ ಬಿದ್ದಿದ್ದರಿಂದ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿತ್ತು. ಇದರಿಂದಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಮಾಡಿ, ಕಾರಿನ ಕೆಳಭಾಗವನ್ನು ಕೊರೆದು ಇಬ್ಬರನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೀರು ಕುಡಿಯಲು ಹೋಗಿ ಬಾವಿಗೆ ಬಿದ್ದ ಬಾಲಕ, ರಕ್ಷಿಸಲು ಹೋದ ಅಜ್ಜಿಯೂ ನೀರುಪಾಲು!

ವಿಜಯಪುರ: ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಕಾಲು ಜಾರಿ ಮುಳುಗಿದ್ದು, ಬಾಲಕನ ರಕ್ಷಿಸಲು ಹೋದ ಅಜ್ಜಿಯೂ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ನಡೆದಿದೆ.

ಅಸಾದ್‌ ಮುಲ್ಲಾ (12) ಮೃತ ಬಾಲಕ, ಸಲೀಮಾ‌ ಮುಲ್ಲಾ (55) ಮೃತ ಅಜ್ಜಿ‌ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಹೊರ್ತಿ ಪೊಲೀಸರು ಬಾವಿಯೊಳಗಿದ್ದ ಇಬ್ಬರ ಶವವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಬಗ್ಗೆ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.