ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

DK Shivakumar: ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಕೆ ಶಿವಕುಮಾರ್‌ ಮೇಲೆ ಕೈ ಹೈಕಮಾಂಡ್‌ ಗರಂ

ಎಐಸಿಸಿ‌ ಕಾರ್ಯದರ್ಶಿ, ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಡಿಕೆ ಶಿವಕುಮಾರ್‌ಗೆ ಈ ಕುರಿತು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಪಕ್ಷದ ತತ್ವ ಸಿದ್ದಾಂತ ಹಾಗೂ ರಾಹುಲ್ ಗಾಂಧಿ ಅವರ ತತ್ವಕ್ಕೆ ವಿರುದ್ದವಾದ ನಡೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪಿವಿ ಮೋಹನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಕೆಶಿ ಮೇಲೆ ಕೈ ಹೈಕಮಾಂಡ್‌ ಗರಂ

ಸದ್ಗುರು ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌, ಅಮಿತ್‌ ಶಾ

ಹರೀಶ್‌ ಕೇರ ಹರೀಶ್‌ ಕೇರ Feb 27, 2025 8:19 AM

ಬೆಂಗಳೂರು: ಸದ್ಗುರು ಜಗ್ಗಿ ವಾಸುದೇವ (Sadguru Jaggi Vasudev) ಅವರ ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ (Isha Foundation) ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ (Shivaratri program) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ವೇದಿಕೆ ಹಂಚಿಕೊಂಡಿರುವುದು ಈಗ ದೇಶಾದ್ಯಂತ ಭಾರಿ ಸುದ್ದಿಯಾಗತೊಡಗಿದೆ. ಕಾಂಗ್ರೆಸ್ ಹೈಕಮಾಂಡ್ (Congress high command) ಕೆಂಗಣ್ಣಿಗೂ ಗುರಿಯಾಗಿದೆ. ಈ ಕುರಿತು ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್‌ ಟೀಕೆ ಮಾಡಿದ್ದಾರೆ.

ಎಐಸಿಸಿ‌ ಕಾರ್ಯದರ್ಶಿ, ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಡಿಕೆ ಶಿವಕುಮಾರ್‌ಗೆ ಈ ಕುರಿತು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಪಕ್ಷದ ತತ್ವ ಸಿದ್ದಾಂತ ಹಾಗೂ ರಾಹುಲ್ ಗಾಂಧಿ ಅವರ ತತ್ವಕ್ಕೆ ವಿರುದ್ದವಾದ ನಡೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪಿವಿ ಮೋಹನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅಮಿತ್ ಶಾ ಅವರೊಂದಿಗೆ ಭಾಗಿಯಾಗುತ್ತಿರುವುದನ್ನು ವಿರೋಧಿಸಿರುವ ಪಿವಿ ಮೋಹನ್, ನಮ್ಮ ನಾಯಕ ರಾಹುಲ್ ಗಾಂಧೀಜಿ ಅವರನ್ನು ಅಪಹಾಸ್ಯ ಮಾಡುವ, ಯಾವಾಗಲೂ ಆರ್‌ಎಸ್‌ಎಸ್‌ನ ನಿರೂಪಣೆಗಳೊಂದಿಗೆ ಹೊಂದಿಕೆಯಾಗುವ ವ್ಯಕ್ತಿಗೆ ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿದ್ದುಕೊಂಡು, ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ, ಇದೆಲ್ಲಾ ಸರಿ ಅಲ್ಲ ಎಂದು ಹೇಳಿದ್ದಾರೆ.



ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿಯಾಗಬಾರದು. ದೃಢನಿಶ್ಚಯಕ್ಕೆ ಬದ್ಧತೆ ಬಹಳ ಮುಖ್ಯ, ಇದನ್ನು ನಿರ್ಲಕ್ಷಿಸಿದರೆ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು ಎಂದು ಪಿವಿ ಮೋಹನ್ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ತಾವು ಕುಂಭಮೇಳಕ್ಕೆ ಹೋಗಿದ್ದನ್ನು ಡಿಕೆ ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಲ್ಲದೆ, ಇಶಾ ಫೌಂಡೇಶನ್‌ಗೆ ಹೋಗುತ್ತಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ. ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: DK Shivakumar: ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಸುಳ್ಳು: ಡಿಕೆಶಿ