ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Corona virus‌: ಮಕ್ಕಳಲ್ಲಿ ಶೀತ ಜ್ವರ ಇದ್ದರೆ ಶಾಲೆಗೆ ಕಳಿಸಬೇಡಿ! ಆರೋಗ್ಯ ಇಲಾಖೆಯಿಂದ ಕೋವಿಡ್‌ ಸೂಚನೆ

ರಾಜ್ಯದಲ್ಲಿ ಕೊರೊನಾ ಸೋಂಕಿನ (Corona Virus) ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಈ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಹಾಗೆಯೇ ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಮಕ್ಕಳಲ್ಲಿ ಶೀತ ಜ್ವರ ಇದ್ದರೆ ಶಾಲೆಗೆ ಕಳಿಸಬೇಡಿ! ಆರೋಗ್ಯ ಇಲಾಖೆಯಿಂದ ಸೂಚನೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 31, 2025 12:39 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ (Corona virus) ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ (covid alert) ಹಿನ್ನೆಲೆಯಲ್ಲಿ ರಾಜ್ಯದ (Karnataka) ಎಲ್ಲಾ ಶಾಲೆಗಳಿಗೆ ಆರೋಗ್ಯ ಇಲಾಖೆ (Health Department) ಕೋವಿಡ್‌ ಮಾರ್ಗಸೂಚಿ (Covid guidelines) ಬಿಡುಗಡೆ ಮಾಡಿದೆ. ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಜ್ವರ ಇದ್ದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗೆ ಕಳುಹಿಸಬೇಕು. ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಕೋವಿಡ್ ಲಕ್ಷಣ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಈ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಹಾಗೆಯೇ ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಕೊರೊನಾ ಸೋಂಕಿನ ಲಕ್ಷಣಗಳು

ಶೀತ, ನೆಗಡಿ,ಕೆಮ್ಮು, ಜ್ವರ, ಮೈಕೈ ನೋವು, ತೀವ್ರ ಆಯಾಸ ಕೊರೊನಾ ಸೋಂಕಿನ ಲಕ್ಷಣಗಳಾಗಿವೆ. ಕೊರೊನಾ ಸೋಂಕು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರದಿಯಾಗಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾಗೆ ಸಂಬಂಧಿಸಿ ಮೂರು ಸಾವುಗಳು ವರದಿಯಾಗಿವೆ. ಜತೆಗೆ ಮುಂಗಾರು ಆರಂಭವಾಗಿದ್ದು, ಶೀತ ಗಾಳಿಯ ವಾತಾರಣ ಹೆಚ್ಚಿದೆ. ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಒಂದೇ ಕಡೆ ಸೇರುವ ಕಾರಣ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‌ ಹಾಕಿಸಿ ಕಳುಹಿಸಿಕೊಡುವುದು ಉತ್ತಮ. ಜತೆಗೆ ಸೋಂಕಿನ ಲಕ್ಷಣಗಳು ಇದ್ದರೆ ಸ್ವಯಂ ಪ್ರೇರಿತವಾಗಿ ಶಾಲೆಗೆ ಕಳಸಬಾರದು ಎಂದು ಮಕ್ಕಳ ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Covid Case: ದೇಶದಲ್ಲಿ 2,700 ದಾಟಿದ ಕೋವಿಡ್ ಪ್ರಕರಣಗಳು; ಟೆಸ್ಟಿಂಗ್‌ ಹೆಚ್ಚಳಕ್ಕೆ ಸೂಚನೆ