Crime News: ಮತ್ತೊಮ್ಮೆ ಗೋವಿನ ಮೇಲೆ ವಿಕೃತಿ, ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ
ಚಿಕ್ಕಮಗಳೂರಿನ ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ಹಸು ಸಾವನ್ನಪ್ಪಿದೆ.

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಗೋವುಗಳ (cow) ಮೇಲಿನ ವಿಕೃತ ದೌರ್ಜನ್ಯ ಮುಂದುವರೆದಿದ್ದು, ಚಿಕ್ಕಮಗಳೂರು (Chikkamagaluru crime news) ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು (cutting cow's udder) ಕತ್ತರಿಸಿದ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬ ಹೀಗೆ ಮಾಡಿದ್ದ ಘಟನೆಯ ನೆನಪಿನ್ನೂ ಮಾಸುವ ಮೊದಲೇ ಮತ್ತೊಬ್ಬ ಇಂಥ ವಿಕೃತ ಮೆರೆದಿದ್ದಾನೆ.
ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ಹಸು ಸಾವನ್ನಪ್ಪಿದೆ. ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜನವರಿ 12ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಎಸಗಲಾಗಿತ್ತು. ಜನವರಿ 16ರಂದು ಮೈಸೂರು ಜಿಲ್ಲೆ ನಂಜನಗೂಡು ನಂಜುಂಡೇಶ್ವರ ದೇವಾಲಯದ ಬಳಿ ಕರುವಿನ ಬಾಲವನ್ನು ದುಷ್ಕರ್ಮಿಗಳು ಕತ್ತರಿಸಿದ್ದರು. ಜನವರಿ 20ರಂದು ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಂದು ಹಾಕಲಾಗಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಗೋವುಗಳ ಮೇಲೆ ದೌರ್ಜನ್ಯ ಮುಂದುವರಿದಿದೆ.
ಆಸ್ತಿಗಾಗಿ ತಾಯಿ- ಮಗನ ಕೊಂದು ಪರಾರಿ
ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಯಿ ಸಂಗಮ್ಮ ಗೋನಾಳ (45), ಮಗ ಸೋಮಪ್ಪ (26) ಎಂಬವರನ್ನು ಕೊಡಲಿಯಿಂದ ಕೊಚ್ಚಿ ಸಣ್ಣ ಸೋಮಪ್ಪ ಗೋನಾಳ ಎಂಬಾತ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಇಳಕಲ್ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ
ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: Self Harming: ತಂದೆಯ ಗನ್‌ನಿಂದ ಗುಂಡು ಸಿಡಿಸಿಕೊಂಡು ಮಗ ಆತ್ಮಹತ್ಯೆ