Crime News: ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪಾಪಿ ಪತಿ; ವೈರಲ್‌ ವಿಡಿಯೊ ಇಲ್ಲಿದೆ

Crime News: ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಗೆ ಪತಿಯೇ ಬೆಂಕಿ ಹಚ್ಚಿ ಆಕೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆರೋಪಿಯನ್ನು ಪರ್ಭಾನಿಯ 32 ವರ್ಷದ ಕುಂಡ್ಲಿಕ್‌ ಉತ್ತಮ್‌ ಕಾಳೆ ಎಂದು ಗುರುತಿಸಲಾಗಿದೆ.

Profile Ramesh B Dec 28, 2024 10:32 PM
ಮುಂಬೈ: ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಗೆ ಪತಿಯೇ ಬೆಂಕಿ ಹಚ್ಚಿ ಆಕೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆರೋಪಿಯನ್ನು ಪರ್ಭಾನಿಯ 32 ವರ್ಷದ ಕುಂಡ್ಲಿಕ್‌ ಉತ್ತಮ್‌ ಕಾಳೆ ಎಂದು ಗುರುತಿಸಲಾಗಿದೆ. ಮುಂಬೈಯಿಂದ 520 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದೆ. ಗಂಗಾಖೇಡ್ ನಾಕಾದ ಮೈನಾ ಮೃತ ಸಂತ್ರಸ್ತೆ. ಡಿ. 26ರ ರಾತ್ರಿ ಪತ್ನಿಯ ಮೈಮೇಲೆ ಪೆಟ್ರೋಲ್‌ ಸುರಿದು ಕುಂಡ್ಲಿಕ್‌ ಉತ್ತಮ್‌ ಕಾಳೆ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ (Crime News).
ಸಂತ್ರಸ್ತೆಯ ಸಹೋದರಿ ಈ ಬಗ್ಗೆ ಮುಂಬೈ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ʼʼಮೈನಾ ಅವರಿಗೆ 3ನೇ ಬಾರಿ ಹೆಣ್ಣು ಮಗು ಜನಿಸಿತ್ತು. ಇದರಿಂದ ಅಸಮಾಧಾನಗೊಂಡಿದ್ದಆಕೆಯ ಪತಿ ಕುಂಡ್ಲಿಕ್‌ ಉತ್ತಮ್‌ ಕಾಳೆ ಪ್ರತಿದಿನ ಪತ್ನಿಯನ್ನು ನಿಂದಿಸುತ್ತಿದ್ದ. ಅಲ್ಲದೆ ಈ ವಿಚಾರದಲ್ಲಿ ಪ್ರತಿದಿನ ಜಗಳವಾಡುತ್ತಿದ್ದʼʼ ಎಂದು ಅವರು ತಿಳಿಸಿದ್ದಾರೆ.
Horrific Incident in #Maharashtra: Man Sets Wife on Fire Over Birth of Third Daughter 📅 December 26, 2024 A shocking tragedy unfolded in the #GangakhedNaka area of #Parbhani district, Maharashtra, where a man allegedly set his wife ablaze, enraged over the birth of their… pic.twitter.com/qrTbkb90bJ— Clarity Toast (@ClarityToast) December 28, 2024
ಗುರುವಾರ ಜಗಳ ತಾರಕಕ್ಕೇರಿ ಆತ ಮೈನಾ ಅವರ ಮೈಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾನೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೈನಾ ಅಸುನೀಗಿದ್ದಾರೆ.
"ಗುರುವಾರ ರಾತ್ರಿ ಜಗಳವಾಡಿದ ನಂತರ ಆತ ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆ ಕಿರುಚುತ್ತಾ ಮನೆಯಿಂದ ಹೊರಗೆ ಓಡಿದ್ದಾಳೆ. ಅಲ್ಲಿ ನೆರೆದಿದ್ದವರು ಮೈಗೆ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಆಕೆಗೆ ತೀವ್ರ ಸುಟ್ಟ ಗಾಯಗಳಾಗಿದ್ದವು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆʼʼ ಎಂದು ಸಹೋದರಿ ಘಟನೆಯನ್ನು ವಿವರಿಸಿದ್ದಾರೆ. ಸದ್ಯ ಕಾಳೆಯನ್ನು ಗಂಗಾಖೇಡ್ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೆತ್ತಿಕೊಳ್ಳಲಾಗಿದೆ.
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ
ಕೆಲವು ದಿನಗಳ ಹಿಂದೆ ನಡೆದ ಇನ್ನೊಂದು ಆಘಾತಕಾರಿ ಪ್ರಕರಣದಲ್ಲಿ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತ ವಯಸ್ಸಿನ ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾನೆ. 8 ಮತ್ತು 9 ವರ್ಷ ವಯಸ್ಸಿನ ಬಾಲಕಿಯರು ಮೃತರು. ಆರೋಪಿಯನ್ನು ಪಶ್ಚಿಮ ಬಂಗಾಲ ಮೂಲದ ಅಜಯ್‌ ದಾಸ್‌ ಎಂದು ಗುರುತಿಸಲಾಗಿದೆ. ಆತ ರಾಜ್‌ಗುರುನಗರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಣಸಿಗನಾಗಿ ಕಾರ್ಯ ನಿರ್ವಹಿಸುತ್ತಿದ್ದ.
ʼʼದಾಸ್‌ ಸಂತ್ರಸ್ತೆಯರ ಮನೆ ಪಕ್ಕದಲ್ಲಿ ವಾಸವಾಗಿದ್ದ. ಡಿ. 25ರಂದು ಸಹೋದರಿಯರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ತೀವ್ರ ಹುಡುಕಾಟದ ಬಳಿಕ ಮನೆ ಪಕ್ಕದ ಟ್ಯಾಂಕ್‌ನಲ್ಲಿ ಸಹೋದರಿಯರ ಮೃತದೇಹ ಪತ್ತೆಯಾಗಿತ್ತುʼʼ ಎಂದು ಪೊಲೀಸರು ತಿಳಿಸಿದ್ದಾರೆ.
ʼʼದಾಸ್‌ ಮೊದಲಿಗೆ ಕಿರಿಯ ಸಹೋದರಿಯ ಮೇಲೆ ದೌರ್ಜನ್ಯ ಎಸಗಿದ್ದ. ಬಳಿಕ ಇದನ್ನು ಗಮನಿಸಿದ ಹಿರಿಯ ಸಹೋದರಿಯನ್ನೂ ಸೇರಿ ಇಬ್ಬರನ್ನೂ ಕೊಲೆ ಮಾಡಿದ್ದಾನೆ. ರೈಲು ಹತ್ತಿ ಪರಾರಿಯಾಗಲು ಮುಂದಾಗಿದ್ದ ದಾಸ್‌ನನ್ನು ಪುಣೆಯ ಬಳಿ ಸೆರೆ ಹಿಡಿಯಲಾಗಿದೆ. ಆತನ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣ ದಾಖಲಿಸಲಾಗಿದೆʼʼ ಎಂದು ಅದಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Punjab Serial Killer: 18 ತಿಂಗಳಲ್ಲಿ 11 ಕೊಲೆ; ಸರಣಿ ಹಂತಕನ ಕೃತ್ಯ ಬಯಲಾಗಿದ್ದು ಹೇಗೆ?
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?