Crime News: ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ
Crime News: ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದಂತೆ ಮಹಿಳೆಗೂ ಪದ್ಮನಾಭ ಅವರಿಗೂ ವಿವಾದ ಇತ್ತು. ರಸ್ತೆಯ ಗೇಟಿಗೆ ಬೀಗ ಹಾಕಿದ್ದನ್ನು ವಿಚಾರಿಸಲು ಬಂದ ಮಹಿಳೆಯ ಮುಂದೆ ಈತ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ವೀಡಿಯೋ ವೈರಲ್ ಆಗಿದೆ.

ಆರೋಪಿ ಪದ್ಮನಾಭ

ಮಂಗಳೂರು: ಗ್ರಾಮ ಪಂಚಾಯತಿ ಉಪಾಧ್ಯಕ್ಷ ಹಾಗೂ ಬಿಜೆಪಿ ಸದಸ್ಯನೊಬ್ಬ ರಸ್ತೆಯ ವಿವಾದಕ್ಕೆ ವಾಗ್ಯುದ್ಧ ಆರಂಭಿಸಿ ಮಹಿಳೆಯ ಜೊತೆ ಅಸಭ್ಯ ವರ್ತನೆ (harassment) ತೋರಿದ್ದಾನೆ. ಈತನ ವಿರುದ್ಧ ಮಹಿಳೆ ದಕ್ಷಿಣ ಕನ್ನಡ (Dakshina Kannda news) ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರಿಗೆ ದೂರು (Crime News) ನೀಡಿದ್ದಾರೆ. ಆತನನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಡ್ಕಿದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಕೊಡೆಂಚರಪಾಲು ಎಂಬಾತ ಪ್ರಕರಣದ ಆರೋಪಿ.
ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದಂತೆ ಮಹಿಳೆಗೂ ಪದ್ಮನಾಭ ಅವರಿಗೂ ವಿವಾದ ಇತ್ತು. ರಸ್ತೆಯ ಗೇಟಿಗೆ ಬೀಗ ಹಾಕಿದ್ದನ್ನು ವಿಚಾರಿಸಲು ಬಂದ ಮಹಿಳೆಯ ಮುಂದೆ ಈತ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ವೀಡಿಯೋ ವೈರಲ್ ಆಗಿದೆ. ಮಹಿಳೆ ಪದ್ಮನಾಭ ಸಪಲ್ಯ ಅವರ ವಿರುದ್ಧ ವಿಟ್ಲ ಪೊಲೀಸರಿಗೆ ದೂರು ನೀಡಿದರು. ಘಟನೆಯ ಮಾಹಿತಿ ಪಡೆದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ತಕ್ಷಣದಿಂದ ಜಾರಿಗೆ ಬರುವಂತೆ ಪದ್ಮನಾಭ ಸಪಲ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಲ್ಲದೇ ಕೂಡಲೇ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.
ನೆಲ್ಯಾಡಿಯಲ್ಲಿ ಯುವಕನ ಬರ್ಬರ ಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಮಾದೇರಿ ಗ್ರಾಮದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಶರತ್ (35) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಮೃತ ಶರತ್‌ನ ಚಿಕ್ಕಪ್ಪನ ಮನೆಯ ಅಂಗಳದಲ್ಲೇ ನಡೆದಿದೆ ಎಂದು ತಿಳಿದುಬಂದಿದೆ. ಮೃತನ ಬಳಿ ಚಾಕು ಬಿದ್ದಿರುವುದು ಪತ್ತೆಯಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ನೆಲ್ಯಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Bengaluru Crime News: ಪಿಸ್ತೂಲು ಹಿಡಿದು ಕ್ಲಬ್‌ಗೆ ನುಗ್ಗಿದ ಅಪರಿಚಿತ ವ್ಯಕ್ತಿ: ಪೊಲೀಸ್ ಅಲರ್ಟ್