Dasoha Day: ಶಿವಕುಮಾರ ಶ್ರೀಗಳು ಸರಳ ಜೀವನ, ಉನ್ನತ ಚಿಂತನೆ ಅಳವಡಿ‌ಸಿಕೊಂಡಿದ್ದರು: ರಾಜ್ಯಪಾಲ ಗೆಹ್ಲೋಟ್

Dasoha Day: ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಮಂಗಳವಾರ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 6ನೇ ಪುಣ್ಯ ಸಂಸ್ಮರಣೋತ್ಸವವನ್ನು ಉದ್ಘಾಟಿಸಿ ಗವರ್ನರ್‌ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮಾತನಾಡಿದರು.

Thawar Chand Gehlot
Profile Prabhakara R January 21, 2025 136

ತುಮಕೂರು: ಶ್ರೀ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ (Dasoha Day) ಡಾ. ಶಿವಕುಮಾರ ಮಹಾಶಿವಯೋಗಿಗಳ (dr shivakumara swamiji) ಜೀವನ ಪಯಣ, ಸೇವೆ, ಸಮರ್ಪಣಾ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸಿಸಿದರು.

ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಮಂಗಳವಾರ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 6ನೇ ಪುಣ್ಯ ಸಂಸ್ಮರಣೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಳ ಜೀವನ ಮತ್ತು ಉನ್ನತ ಚಿಂತನೆಯ ತತ್ವವನ್ನು ಅನುಸರಿಸಿದ್ದರು ಎಂದರು.

ತ್ರಿವಿಧ ದಾಸೋಹದ ಮೂಲಕ 111 ವರ್ಷಗಳ ಕಾಲ ಮಾನವೀಯತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಪರಮ ಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆರನೇ ಪುಣ್ಯತಿಥಿಗೆ ಆಗಮಿಸುವ ಮೂಲಕ ಪೂಜ್ಯರ ದರ್ಶನ ಮತ್ತು ಆಶೀರ್ವಾದ ಪಡೆಯುವ ಅವಕಾಶ ನನಗೆ ದೊರತಿರುವುದು ಸಂತಸ ತಂದಿದೆ. ಧಾರ್ಮಿಕತೆ, ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ಪುಣ್ಯ ಭೂಮಿಯಾಗಿರುವ ಶ್ರೀ ಸಿದ್ದಗಂಗಾ ಮಠವು ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣವನ್ನು ಸಮಾಜದ ಬದಲಾವಣೆಯ ಪ್ರಮುಖ ಸಾಧನವೆಂದು ಪರಿಗಣಿಸಿ ಶಾಲಾ-ಕಾಲೇಜು, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳನ್ನೊಳಗೊಂಡಂತೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. ಮಠದ ಅಡಿಯಲ್ಲಿ ನಡೆಯುವ ಶಿಕ್ಷಣ ಸಂಸ್ಥೆಗಳು ಜಾತಿ, ಧರ್ಮ ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಶಿಕ್ಷಣವನ್ನು ನೀಡುತ್ತಿವೆ. ಲಕ್ಷಾಂತರ ಬಡ ಮತ್ತು ಹಿಂದುಳಿದ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.

Dasoha dina 2

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಕವನ ವಾಚನ ಮಾಡುವ ಮೂಲಕ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಕ್ತಿ ಸಮರ್ಪಣೆ ಮಾಡಿ ಮಾತನಾಡಿ, ಮನುಕುಲದ ಸಾರ್ಥಕ ಬದುಕಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಅವರು ದುಡಿದು ತಿನ್ನಬೇಕೆಂಬ ತತ್ವವನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದ್ದರು. ಅನ್ನ ಪ್ರಸಾದ, ಅಕ್ಷರ ಪ್ರಸಾದ ಇಲ್ಲವೆಂದು ಯಾವೊಬ್ಬ ವ್ಯಕ್ತಿಯೂ ಮಠದಿಂದ ಹಿಂದಿರುಗಿದವರಿಲ್ಲ. ಮಠದ ಆಶ್ರಯ ಪಡೆದು ಉನ್ನತ ಸ್ಥಾನಕ್ಕೆ ತಲುಪಿ ಜಗತ್ತಿನ ಎಲ್ಲಾ ಭಾಗದಲ್ಲಿ ನೆಲೆಸಿರುವವರು ಮಠವನ್ನು ಸ್ಮರಿಸದ ದಿನಗಳಿಲ್ಲ. ಶುದ್ಧ ಬದುಕನ್ನು ಬದುಕಿ ಸಿದ್ಧ ಪುರುಷರಾಗಿ ಸಾರ್ಥಕ ಜೀವನವನ್ನು ನಡೆಸಿದ ಶ್ರೀಗಳ ವ್ಯಕ್ತಿತ್ವಕ್ಕೆ ಯಾರೂ ಸಾಟಿಯಿಲ್ಲವೆಂದು ಬಣ್ಣಿಸಿದರು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಶ್ರೀ ಮಠದ ಸಾಧನೆಯ ಹಿಂದೆ ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದದ ಶ್ರಮವಿದೆ. ಗಂಧದಂತೆ ತಮ್ಮ ಜೀವನವನ್ನು ಇತರರಿಗಾಗಿ ತೇಯ್ದು ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿ ನಾಡಿನ ಜನರ ಮನ ಗೆದ್ದಿದ್ದರು. ಜಂಗಮರಾಗಿ ನಾಡನ್ನು ಸುತ್ತಿ, ಪೀಠಾಧ್ಯಕ್ಷರಾಗಿ ಇಡೀ ರಾಷ್ಟ್ರದ ಮಣ್ಣಿನ ಸ್ಪರ್ಶ ಮಾಡಿದ ಶ್ರೀಗಳು ಗ್ರಾಮೀಣ ಭಾಗದ ಮಕ್ಕಳಿಗಾಗಿ ಶಾಲೆ-ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ಅಕ್ಷರ ದಾಸೋಹಿ ಎನಿಸಿಕೊಂಡಿದ್ದರು ಎಂದು ತಿಳಿಸಿದರು.

Dasoha dina

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಶ್ರೀ ಶಿವಕುಮಾರ ಸ್ವಾಮೀಜಿಗಳು ಅವತರಿಸಿದ ಈ ಸಿದ್ಧಗಂಗಾ ಕ್ಷೇತ್ರವು ಅವರ ದೂರದೃಷ್ಟಿತ್ವ ಸೇವೆಗಳಿಂದ ಪುನೀತವಾಗಿದೆ. ಶ್ರೀ ಉದ್ದಾನ ಶಿವಯೋಗಿ ಸ್ವಾಮೀಜಿ ಅವರ ಅಪೇಕ್ಷೆಯಿಂದ ಮಠದ ಅಧಿಕಾರವನ್ನು ವಹಿಸಿಕೊಂಡು ಮುನ್ನಡೆಸಿದ ಮಹಾನ್ ಶಿವಯೋಗಿಯಾಗಿದ್ದರು. ಕಠಿಣ ಜೀವನ ಪರಿಕ್ರಮಗಳನ್ನು ಅಳವಡಿಸಿಕೊಂಡಿದ್ದ ಶ್ರೀಗಳ ದಿನಚರಿಯನ್ನು ಪಾಲಿಸಲು ಅಸಾಧ್ಯ. ಪೂಜೆಯು ವೈಯಕ್ತಿಕ. ಪೂಜೆಯ ಫಲಾಫಲಗಳು ಸಾರ್ವತ್ರಿಕವೆಂದು ಭಾವಿಸಿದ್ದ ಶಿವಕುಮಾರ ಸ್ವಾಮೀಜಿ ಅವರ ಜ್ಞಾನದ ಜ್ಯೋತಿಯಿಂದ ಸಿದ್ಧಗಂಗಾ ಕ್ಷೇತ್ರವು ಪ್ರಕಾಶಮಾನವಾಗಿ ಬೆಳಗುತ್ತಲೇ ಇರುತ್ತದೆ ಎಂದು ಭಾವಿಸಿದರು.

ಶ್ರವಣಬೆಳಗೊಳ ಜೈನಮಠದ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ಜನಸೇವೆಯಿಂದ ಶಿವಕುಮಾರ ಸ್ವಾಮೀಜಿ ಅವರು ಭಾರತದ ಶ್ರೇಷ್ಠ ಸಂತರಲ್ಲೊಬ್ಬರಾಗಿದ್ದಾರೆ. ತಮ್ಮ ಪಂಚೇಂದ್ರಿಯಗಳ ಬಯಕೆಗಳನ್ನು ನಿಗ್ರಹಿಸುವ ಮೂಲಕ ಜೀವನದಲ್ಲಿ ಸಾರ್ಥಕತೆಯನ್ನು ಪಡೆದುಕೊಂಡಿದ್ದರು. ಇವರ ತತ್ವಾದರ್ಶಗಳು ತುಮಕೂರನ್ನು ಸಮೃದ್ಧಿಗೊಳಿಸುವ ಮೂಲಕ ಇಂದಿನ ಯುವ ಜನಾಂಗಕ್ಕೆ ಆದರ್ಶಪ್ರಾಯವಾಗಿವೆ ಎಂದು ತಿಳಿಸಿದರು.

ಶ್ರೀ ಸಿದ್ಧಗಂಗಾ ಮಠದ ಉತ್ತಾಧಿಕಾರಿ ಶ್ರೀ ಶಿವಸಿದ್ಧೇಶ್ವರಸ್ವಾಮಿ ತಮ್ಮ ನುಡಿ ನಮನದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಸಾಧನೆ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಕನ್ನಡ ನಾಡು-ನುಡಿಯ ಬಗ್ಗೆ ಅಪಾರ ಸೇವೆ ಸಲ್ಲಿಸಿರುವ ಜಾನಪದ ಜಂಗಮ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾಡೋಜ ಡಾ. ಗೊ.ರು.ಚನ್ನಬಸಪ್ಪ ಅವರಿಗೆ ಸಿದ್ಧಗಂಗಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸುದ್ದಿಯನ್ನೂ ಓದಿ | Dasoha Day: ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಸಚಿವ ಸೋಮಣ್ಣ

ಕಾರ್ಯಕ್ರಮದಲ್ಲಿ ಸಚಿವ ವಿ.ಸೋಮಣ್ಣ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಸಂಸದ ಬಸವರಾಜು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಹಾಗೂ ಬಿ. ಸುರೇಶ್ ಗೌಡ, ಮಾಜಿ ಶಾಸಕ ಗೌರಿಶಂಕರ್, ನಿವೃತ್ತ ಜಿಲ್ಲಾಧಿಕಾರಿ ಸಿ.ಸೋಮಶೇಖರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಮೇಘಾಲಯದ ಹಿರಿಯ ಅಧಿಕಾರಿ ಬ್ರಹ್ಮದತ್ ಉಪಸ್ಥಿತರಿದ್ದರು.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ