DK Shivakumar: ಡಿಕೆಶಿಗೆ ʼಶಿವಕುಮಾರʼ ಎಂಬ ಹೆಸರೇಕೆ? ಸದ್ಗುರು ಕಾರ್ಯಕ್ರಮದ ಬಳಿಕ ರಹಸ್ಯ ಬಿಚ್ಚಿಟ್ಟ ಡಿಸಿಎಂ
ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ. ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ ಎಂದು ಡಿಕೆಶಿ ಹೇಳಿದ್ದಾರೆ.

ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್

ಕೊಯಮತ್ತೂರು: ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರು ಸದ್ಗುರು ಜಗ್ಗಿ ವಾಸುದೇವ್ (Sadguru Jaggi Vasudev) ಅವರ ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ (Isha foundation) ನಡೆದ ಶಿವರಾತ್ರಿ (Shivaratri) ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಅದರಲ್ಲಿ ಪಾಲ್ಗೊಂಡ ನಂತರ ಈಕಾರ್ಯಕ್ರಮವನ್ನು ಸೋಶಿಯಲ್ ಮೀಡಿಯಾದಲ್ಲಿ ಶ್ಲಾಘಿಸಿದ್ದಾರೆ. ಜೊತೆಗೆ ತಮಗೆ ಶಿವಕುಮಾರ ಎಂದು ಹೆಸರು ಬರಲು ಕಾರಣವನ್ನೂ ಇದೇ ಸಂದರ್ಭದಲ್ಲಿ ಬಿಚ್ಚಿಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ. ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ ಎಂದು ಹೇಳಿದ್ದಾರೆ.
ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಮೊದಲು ಹೆಣ್ಮಕ್ಕಳಿಗೆ ಕೆಂಪಮ್ಮ ಅಂತ ಹೆಸರಿಡುತ್ತಾರೆ. ಗಂಡು ಮಕ್ಕಳಿಗೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಅದು ಪದ್ದತಿ. ಶಿವಾಲ್ದಪ್ಪನಿಗೆ ನನ್ನ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ನನಗೆ ಮೊದಲು ಕೆಂಪರಾಜ್ ಅಂತ ಹೆಸರಿಟ್ಟು, ಆನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್ ಅಂತ ಹೆಸರಿಟ್ಟರು ಎಂದು ತಿಳಿಸಿದ್ದಾರೆ.
ಶಿವಭಕ್ತಿಯ ಶಿಖರ!
— DK Shivakumar (@DKShivakumar) February 26, 2025
ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ. @SadhguruJV ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ.
ದೊಡ್ಡ… pic.twitter.com/HqSnWVXNF8
ಹೈಕಮಾಂಡ್ ಗರಂ
ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದು ದೇಶಾದ್ಯಂತ ಭಾರಿ ಸುದ್ದಿಯಾಗತೊಡಗಿದೆ. ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೂ ಗುರಿಯಾಗಿದೆ. ಈ ಕುರಿತು ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಟೀಕೆ ಮಾಡಿದ್ದಾರೆ.
ಎಐಸಿಸಿ ಕಾರ್ಯದರ್ಶಿ, ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಡಿಕೆ ಶಿವಕುಮಾರ್‌ಗೆ ಈ ಕುರಿತು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಪಕ್ಷದ ತತ್ವ ಸಿದ್ದಾಂತ ಹಾಗೂ ರಾಹುಲ್ ಗಾಂಧಿ ಅವರ ತತ್ವಕ್ಕೆ ವಿರುದ್ದವಾದ ನಡೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪಿವಿ ಮೋಹನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅಮಿತ್ ಶಾ ಅವರೊಂದಿಗೆ ಭಾಗಿಯಾಗುತ್ತಿರುವುದನ್ನು ವಿರೋಧಿಸಿರುವ ಪಿವಿ ಮೋಹನ್, ನಮ್ಮ ನಾಯಕ ರಾಹುಲ್ ಗಾಂಧೀಜಿ ಅವರನ್ನು ಅಪಹಾಸ್ಯ ಮಾಡುವ, ಯಾವಾಗಲೂ ಆರ್‌ಎಸ್‌ಎಸ್‌ನ ನಿರೂಪಣೆಗಳೊಂದಿಗೆ ಹೊಂದಿಕೆಯಾಗುವ ವ್ಯಕ್ತಿಗೆ ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿದ್ದುಕೊಂಡು, ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ, ಇದೆಲ್ಲಾ ಸರಿ ಅಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: DK Shivakumar: ಸದ್ಗುರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಕೆ ಶಿವಕುಮಾರ್ ಮೇಲೆ ಕೈ ಹೈಕಮಾಂಡ್ ಗರಂ