ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Delhi Riots Case: ದೆಹಲಿ ಗಲಭೆ ಪ್ರಕರಣ- ಉಮರ್ ಖಾಲಿದ್‌ಗೆ ಏಳು ದಿನಗಳ ಮಧ್ಯಂತರ ಜಾಮೀನು

Delhi Riots Case: ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಲ್ಲಿ ಬಂಧನಕ್ಕೊಳಗಾಗಿದ್ದ ಉಮರ್‌ ಖಾಲಿದ್‌ ಗೆ ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.

Profile Deekshith Nair Dec 18, 2024 5:00 PM
ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಎನ್‌ಯು ವಿಶ್ವ ವಿದ್ಯಾಲಯದ ಹಳೆಯ ವಿದ್ಯಾರ್ಥಿ ಉಮರ್ ಖಾಲಿದ್‌ಗೆ(Umar Khalid) ದೆಹಲಿ ಕರ್ಕರ್ಡೂಮಾ ನ್ಯಾಯಾಲಯವು(Delhi Court) ಬುಧವಾರ(ಡಿ.18) ಮಧ್ಯಂತರ ಜಾಮೀನು(Interim Bail) ನೀಡಿದೆ. ಕುಟುಂಬದಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಹಾಜರಾಗಲು ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದ್ದು, ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಾಲಯ ಖಾಲಿದ್‌ಗೆ ಹಲವು ಷರತ್ತುಗಳನ್ನು ವಿಧಿಸಿದೆ ಎಂದು ಮೂಲಗಳು ತಿಳಿಸಿವೆ. ( Delhi Riots Case)
In a relief to #UmarKhalid, a #DelhiCourt has granted him interim bail to attend a family function. Khalid has been granted interim bail for 7 days, from December 28 to January 3. pic.twitter.com/uskdSDpXRW— Titas (@Teetash_12) December 18, 2024
2022 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್‌ನಿಂದ ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಲಾಯಿತು. ನಂತರ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ, ನಂತರ ತಮ್ಮ ಅರ್ಜಿಯನ್ನು ಹಿಂತೆಗೆದುಕೊಂಡಿದ್ದರು. ಬಳಿಕ ಅವರು, ಎರಡನೇ ನಿಯಮಿತ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು. ಅದು ಕೂಡ ಈ ವರ್ಷದ ಆರಂಭದಲ್ಲಿ ತಿರಸ್ಕರಿಸಲ್ಪಟ್ಟಿತು. ತನ್ನ ಎರಡನೇ ಸಾಮಾನ್ಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಖಾಲಿದ್ ಸಲ್ಲಿಸಿರುವ ಮೇಲ್ಮನವಿ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಇದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು.‌
ಈ ಸುದ್ದಿಯನ್ನೂ ಓದಿ:Narendra Modi: ʼಅಂಬೇಡ್ಕರ್‌ಗೆ ನೀವು ಮಾಡಿದ ಅವಮಾನ ಮರೆಮಾಚಲು ಸಾಧ್ಯವಿಲ್ಲʼ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಫುಲ್‌ ಕ್ಲಾಸ್‌
ಏನಿದು ಪ್ರಕರಣ?
2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಖಾಲಿದ್‌ನಲ್ಲಿ ಬಂಧಿಸಲಾಗಿತ್ತು. ಸಿಎಎ ವಿರೋಧಿಸಿ 2020ರಲ್ಲಿ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದ್ದವು. ಅದೇ ರೀತಿ ದಿಲ್ಲಿಯಲ್ಲೂ ಹೋರಾಟಗಳು ಆರಂಭವಾಗಿದ್ದವು. ಜತೆಗೆ ಈಶಾನ್ಯ ದಿಲ್ಲಿಯಲ್ಲಿ ಭಾರೀ ಪ್ರಮಾಣದಲ್ಲಿ ದಂಗೆ ಸಂಭವಿಸಿತ್ತು. ಈ ದಂಗೆಗೆ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಪಿತೂರಿ ಕೂಡ ಪಿತೂರಿ ನಡೆಸಿದ್ದಾರೆಂಬ ಆರೋಪ ಇದೆ. ಉಮರ್ ಖಾಲಿದ್ ಜತೆಗೆ ಶರ್ಜೀಲ್ ಇಮಾಮ್ ಮತ್ತು ಹಲವರ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಹಲವಾರು ನಿಬಂಧನೆಗಳ ಅಡಿಯಲ್ಲಿ ‘ಮಾಸ್ಟರ್‌ ಮೈಂಡ್‌ಗಳು’ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ 53 ಜನರು ಸಾವಿಗೀಡಾಗಿ, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.