Young Woman Death: ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಸಾವಿನ ಹಿನ್ನೆಲೆಯಲ್ಲಿದ್ದಾನೆ ಇನ್ನೊಬ್ಬ ವ್ಯಕ್ತಿ
Young Woman Death: ಆಕಾಂಕ್ಷ ನಾಯರ್ ಅವರು ಬೋಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಮಗಳು. ಮೇ 18ರ ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು.

ಮೃತ ಆಕಾಂಕ್ಷಾ ನಾಯರ್

ಮಂಗಳೂರು: ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ (Dharmasthala) ಮೂಲದ ಏರೋನಾಟಿಕ್ಸ್ ಇಂಜಿನಿಯರ್ ಯುವತಿಯ ನಿಗೂಢ ಸಾವು (young woman death) ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಯುವತಿಯ ಸಾವಿಗೆ ಕಾರಣ ಬಯಲಾಗಿದೆ. ಇದು ಕೊಲೆಯೋ ಆತ್ಮಹತ್ಯೆಯೋ (Self harming) ಎನ್ನುವ ಅನುಮಾನ ಮೂಡಿತ್ತು. ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ (Akanksha S Nair) ಸಾವಿಗೆ ಪ್ರೇಮ ವೈಫಲ್ಯವೇ ಕಾರಣ ಎಂದು ತಿಳಿದುಬಂದಿದೆ.
ಆಕಾಂಕ್ಷ ಎಸ್ ನಾಯರ್ ಅವರು ಪ್ರೇಮವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಧರ್ಮಸ್ಥಳದ ಈ ಯುವತಿ ಕೇರಳ ಮೂಲದ ಎರಡು ಮಕ್ಕಳ ತಂದೆಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು ಎನ್ನಲಾಗ್ತಿದೆ. ಆಕಾಂಕ್ಷ ನಾಯರ್ ಅವರು ಬೋಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಮಗಳು. ಮೇ 18ರ ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು.
ಎಲ್ಪಿ ಯುನಿವರ್ಸಿಟಿಯ ಪ್ರೊಫೆಸರ್, ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಆಕಾಂಕ್ಷ ಎಸ್ ನಾಯರ್ ಪ್ರೀತಿಯಲ್ಲಿ ಬಿದ್ದಿದ್ದರು. ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದರು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿಕೊಂಡು ಕೋಪದಲ್ಲಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಪ್ರೇರಣೆ ಹಿನ್ನೆಲೆಯಲ್ಲಿ ಮ್ಯಾಥ್ಯೂ ವಿರುದ್ದ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಣೋತ್ತರ ಪರೀಕ್ಷೆ ಬಳಿಕ ಹೆತ್ತವರಿಗೆ ಆಕಾಂಕ್ಷ ಎಸ್ ನಾಯರ್ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಇಂದು ಧರ್ಮಸ್ಥಳ ಬೊಳಿಯೂರು ನಿವಾಸದ ಬಳಿಯೇ ಯುವತಿಯ ಅಂತ್ಯ ಸಂಸ್ಕಾರ ನಡೆಯಲಿದೆ. 6 ತಿಂಗಳಿಂದ ಆಕಾಂಕ್ಷಾ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಪಾನ್ಗೆ ಕೆಲಸಕ್ಕಾಗಿ ಹೋಗುವ ಯೋಜನೆ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ (ಮೇ.19) ಕಾಲೇಜಿಗೆ ತೆರಳಿ ಸರ್ಟಿಫಿಕೇಟ್ಗಳನ್ನು ತೆಗೆದುಕೊಂಡು ಬರಲು ಹೋಗಿದ್ದರು. ತಾನೇ ಹೋಗಿ ಸರ್ಟಿಫಿಕೇಟ್ಗಳನ್ನು ತೆಗೆದುಕೊಂಡು ಬರುವುದಾಗಿ ಪೋಷಕರಿಗೆ ಕರೆ ಮಾಡಿ ಹೇಳಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: Deadbody Found: ಪಂಜಾಬ್‌ನಲ್ಲಿ ಧರ್ಮಸ್ಥಳ ಮೂಲದ ಯುವತಿ ಶವ ಪತ್ತೆ; ಕೊಲೆ ಶಂಕೆ