Rcb New Jersey: ನೂತನ ಜೆರ್ಸಿಯ ಫಸ್ಟ್ ಲುಕ್ ರಿಲೀಸ್ ಮಾಡಿದ ಆರ್‌ಸಿಬಿ
IPL 2025: ಆರ್‌ಸಿಬಿ ಈ ಬಾರಿಯೂ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲೇ ಕಣಕ್ಕಿಳಿಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ತನ್ನ ಐಪಿಎಲ್ ಅಭಿಯಾನ ಆರಂಭಿಸಲಿದೆ. ಮಾರ್ಚ್ 22 ರಂದು ಈ ಪಂದ್ಯ ನಡೆಯಲಿದೆ.


ಬೆಂಗಳೂರು: ಮಾರ್ಚ್ 17ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮಕ್ಕೂ(RCB IPL 2025 Unbox Event) ಮುನ್ನವೇ ತಂಡದ ನೂತನ ಜೆರ್ಸಿಯ (Rcb New Jersey)ಫಸ್ಟ್ ಲುಕ್ ಅನ್ನು ಫ್ರಾಂಚೈಸಿ ಬಿಡುಗಡೆ ಮಾಡಿದೆ. ತನ್ನ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ ನೂತನ ನಾಯಕ ರಜತ್ ಪಾಟೀದಾರ್(Rajat Patidar) ಫೋಟೊ ಹಂಚಿಕೊಳ್ಳುವ ಮೂಲಕ ಈ ಸುಳಿವನ್ನು ನೀಡಿದೆ. 2024ರಲ್ಲಿ, ಆರ್‌ಸಿಬಿ ಆಟಗಾರರು ತಮ್ಮ ಜೆರ್ಸಿಯ ಮೇಲೆ ಕೆಂಪು ಮತ್ತು ನೀಲಿ ಛಾಯೆಯನ್ನು ಬಳಸಿದ್ದರು. ಇದು ಅಭಿಮಾನಿಗಳಿಗೆ ಅಷ್ಟಾಗಿ ಇಷ್ಟವಾಗಿರಲಿಲ್ಲ. ಆದರೆ ಈ ಬಾರಿ, ಫ್ರಾಂಚೈಸಿ ಅಭಿಮಾನಿಗಳಿಗೆ ಇಷ್ಟವಾಗುವಂತ ಕಪ್ಪು ಮತ್ತು ಕೆಂಪು ಬಣ್ಣವನ್ನು ಬಳಸಿದಂತಿದೆ.
ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ನೂತನ ಜೆರ್ಸಿಯನ್ನು ಅನಾವರಣಗೊಳಿಸುವ ನಿರೀಕ್ಷೆಯಿದೆ. ಇದುವರೆಗೂ ಕಪ್ ಗೆಲ್ಲದ ಆರ್‌ಸಿಬಿ ಈ ಬಾರಿ ನೂತನ ನಾಯಕ ಪಾಟೀದಾರ್ ನಾಯಕತ್ವದಲ್ಲಾದರೂ ಕಪ್ ಗೆದ್ದೀತೇ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ IPL 2025: ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ ರೇಸ್‌ನಲ್ಲಿ ಅಕ್ಷರ್ ಪಟೇಲ್-ಕೆಎಲ್ ರಾಹುಲ್
2022ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಮುನ್ನಡೆಸಿದ್ದರು. ಇವರ ನಾಯಕತ್ವದಲ್ಲಿ ಆರ್‌ಸಿಬಿ ಎರಡು ಬಾರಿ ಪ್ಲೇಆಫ್ಸ್‌ಗೆ ಲಗ್ಗೆ ಇಟ್ಟಿತ್ತು. ಆದರೆ, ಫಾಫ್ ನಾಯಕತ್ವದಲ್ಲಿ ಆರ್‌ಸಿಬಿ ಚೊಚ್ಚಲ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಟೀಮ್ ಮ್ಯಾನೇಜ್‌ಮೆಂಟ್ ಇಂದೋರ್ ಮೂಲದ ರಜತ್ ಪಾಟಿದಾರ್‌ಗೆ ನಾಯಕತ್ವದ ಹೊಣೆಯನ್ನು ನೀಡಿದೆ.
ಆರ್‌ಸಿಬಿ ಈ ಬಾರಿಯೂ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲೇ ಕಣಕ್ಕಿಳಿಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ತನ್ನ ಐಪಿಎಲ್ ಅಭಿಯಾನ ಆರಂಭಿಸಲಿದೆ.
ಆರ್‌ಸಿಬಿ ತಂಡ
ವಿರಾಟ್ ಕೊಹ್ಲಿ,ರಜತ್ ಪಾಟೀದಾರ್, ಯಶ್ ದಯಾಳ್,ಜೋಶ್ ಹ್ಯಾಸಲ್ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮ, ಲಿಯಾಮ್ ಲಿವಿಂಗ್ಸ್ಟೋನ್, ರಸಿಕ್ ಸಲಾಂ, ಸುಯಶ್ ಶರ್ಮ, ಭುವನೇಶ್ವರ್ ಕುಮಾರ್,ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ನುವಾನ್ ತುಷಾರ, ರೊಮಾರಿಯೊ ಶೆರ್ಡ್, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕರ, ಮೋಹಿತ್ ರಾಥೀ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ.