ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಬಾಲ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಜಿಲ್ಲಾಡಳಿತ ಸದಾ ಕಾರ್ಯೋನ್ಮುಖ: ಜಿಲ್ಲಾಧಿಕಾರಿ ಪಿ,ಎನ್ ರವೀಂದ್ರ

ಜಿಲ್ಲೆಯಲ್ಲಿ ಬಾಲಕಾರ್ಮಿಕರು ಹಾಗೂ ಕಿಶೋರಕಾರ್ಮಿಕರ  ಪತ್ತೆ ಹಾಗೂ ಪುನರ್ವಸತಿ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, ದಿ:01-04-2024 ರಿಂದ ದಿ:31-03-2025 ರವರೆಗೆ ಜಿಲ್ಲೆಯಾದ್ಯಂತ ಹಲವು ತಪಾಸಣೆಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ 39 ಮಕ್ಕಳನ್ನು ಪತ್ತೆ ಹಚ್ಚಲಾಗಿರುತ್ತದೆ. ಸದರಿ ಮಕ್ಕಳಿಗೆ ಸರ್ಕಾರದ ವತಿಯಿಂದ ಪುನರ್ವಸತಿ ಕಲ್ಪಿಸಲಾಗಿರುತ್ತದೆ

ಬಾಲಕಾರ್ಮಿಕರ ರಕ್ಷಣೆ ಮಾಡುವ ದಾಳಿಗಳಿಗೆ ಇಲಾಖೆ ವಾಹನ ಬಳಸಿಕೊಳ್ಳಬಹುದು

ಬಾಲಕಾರ್ಮಿಕತೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯನ್ನು ಅನುಷ್ಠಾನ ಮಾಡಲು ನೇಮಕಗೊಂಡಿರುವ ಇಲಾಖೆಗಳು ಬಾಲಕಾರ್ಮಿಕರನ್ನು  ರಕ್ಷಣೆ ಮಾಡುವ ದಾಳಿಗಳಿಗೆ ತಮ್ಮ ಇಲಾಖೆಯ ವಾಹನಗಳನ್ನು  ಬಳಸಿಕೊಳ್ಳಬಹುದು ಹಾಗೂ ಪೊಲೀಸ್ ರಕ್ಷಣೆ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.

Profile Ashok Nayak Apr 9, 2025 10:41 AM

ಚಿಕ್ಕಬಳ್ಳಾಪುರ: ಬಾಲಕಾರ್ಮಿಕತೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯನ್ನು ಅನುಷ್ಠಾನ ಮಾಡಲು ನೇಮಕಗೊಂಡಿರುವ ಇಲಾಖೆಗಳು ಬಾಲಕಾರ್ಮಿಕರನ್ನು ರಕ್ಷಣೆ ಮಾಡುವ ದಾಳಿಗಳಿಗೆ ತಮ್ಮ ಇಲಾಖೆಯ ವಾಹನಗಳನ್ನು ಬಳಸಿಕೊಳ್ಳಬಹುದು ಹಾಗೂ ಪೊಲೀಸ್ ರಕ್ಷಣೆ ತೆಗೆದುಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯ ಕಾರಿ ಸಮಿತಿ ಸಭೆ ಮತ್ತು ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು.

ಜಿಲ್ಲೆಯಲ್ಲಿ ಬಾಲಕಾರ್ಮಿಕರು ಹಾಗೂ ಕಿಶೋರಕಾರ್ಮಿಕರ  ಪತ್ತೆ ಹಾಗೂ ಪುನರ್ವಸತಿ ಕಾರ್ಯ ವು ನಿರಂತರವಾಗಿ ನಡೆಯುತ್ತಿದ್ದು, ದಿ:೦೧-೦೪-೨೦೨೪ ರಿಂದ ದಿ:೩೧-೦೩-೨೦೨೫ ರವರೆಗೆ ಜಿಲ್ಲೆಯಾ ದ್ಯಂತ ಹಲವು ತಪಾಸಣೆಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ ೩೯ ಮಕ್ಕಳನ್ನು ಪತ್ತೆ ಹಚ್ಚಲಾ ಗಿರುತ್ತದೆ. ಸದರಿ ಮಕ್ಕಳಿಗೆ ಸರ್ಕಾರದ ವತಿಯಿಂದ ಪುನರ್ವಸತಿ ಕಲ್ಪಿಸಲಾಗಿರುತ್ತದೆ ಹಾಗೂ ತಪ್ಪಿತಸ್ಥ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur news: ಸಂವಿಧಾನವೇ ನಮ್ಮ ಧರ್ಮ ಗ್ರಂಥ : ಪ್ರೊ.ಬಿ.ರಾಮಚಂದ್ರಪ್ಪ

ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯವಾಗಿರುತ್ತದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ೧೯೮೬ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಕೆಲಸ ಪ್ರಕ್ರಿಯೆಗಳಲ್ಲಿ ೧೪ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳುವುದು ಹಾಗೂ ೧೮ ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ ಅಪರಾಧವಾಗಿರುತ್ತದೆ.

ಅಂತಹ ಅಪರಾಧಕ್ಕೆ ೦೬ ತಿಂಗಳಿAದ ೦೨ ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.೨೦,೦೦೦ ಗಳಿಂದ ರೂ.೫೦.೦೦೦ಗಳ ವರೆಗೆ ದಂಡ ಅಥವಾ ಎರಡು ಶಿಕ್ಷೆಗಳನ್ನು ವಿಧಿಸಲು ಅವಕಾಶ ವಿರುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ. ತಪ್ಪಿತಸ್ಥ ಮಾಲೀಕರು ಪ್ರತಿ ಮಗುವಿಗೆ ರೂ.೨೦,೦೦೦ ಗಳನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕು.

ಇಂತಹ ಕೃತ್ಯಗಳಲ್ಲಿ ಭಾಗಿ ಯಾಗುವ ಸಂಘಟನೆಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಗೆ ಕರೆಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯವಾಗಿರಬೇಕು ಎಂದು ತಿಳಿಸಿದರು.

ಈ ವೇಳೆ ಜಿಲ್ಲಾಧಿಕಾರಿಗಳು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನಾ ಆಂದೋಲನ ಭಿತ್ತಿಪತ್ರಗಳನ್ನು ಹಾಗೂ ಕರಪತ್ರಗಳನ್ನು ಬಿಡುಗಡೆಮಾಡಿದರು.

ಬಾಗೇಪಲ್ಲಿ ತಾಲೂಕಿನಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕೆ ೯ ಎಕರೆ ೩೮ ಗುಂಟೆ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ಈ ವೇಳೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾಪಂಚಾಯತ್  ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನಾ ಅಜ್ಜಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಅರ್.ಕೆ ವೆಂಕಟೇಗೌಡ,   ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಮುನಿಕೆಂಪೆಗೌಡ, ರಾಜ್ಯ ಸಂಯೋಜಕರು, ಬಚ್‌ಪನ್ ಬಚಾವೋ ಆಂದೋಲನಾ, ರೇಷ್ಮೆ ಇಲಾಖೆ ಉಪನಿರ್ದೇಶಕ ಎಸ್ ಬೋಜಣ್ಣ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

೮ಸಿಬಿಪಿಎಂ೪: