ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಡಿಸಿಎಂ ಡಿ.ಕೆ. ಶಿವಕುಮಾರ್ -

Profile
Siddalinga Swamy Feb 5, 2025 3:57 PM

ಬೆಂಗಳೂರು: ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು. ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಯಾರು ಏನಾದರೂ ಹೇಳಿಕೊಳ್ಳಲಿ, ನಮ್ಮ ಧರ್ಮ, ನಮ್ಮ ಕರ್ಮ, ಆಚಾರ ವಿಚಾರ ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ ಎಂದು ಹೇಳಿದರು.

ನನ್ನ ವೈಯಕ್ತಿಕ ನಂಬಿಕೆ ವಿಚಾರವಾಗಿ ಮಾತನಾಡಲು ಯಾರಿಗೂ ಹಕ್ಕಿಲ್ಲ

ʼಗಂಗೆಯಾಗಲಿ, ಕಾವೇರಿಯಾಗಲಿ, ಕೃಷ್ಣಾ, ಅರ್ಕಾವತಿಯಾಗಲಿ. ನೀರಿಗೆ ಬಣ್ಣ, ರುಚಿ, ಆಕಾರವಿಲ್ಲ. ನೀರು ಎಲ್ಲರಿಗೂ ಬೇಕು. ಅವರು ಅಶೋಕ ಎಂದು ಯಾಕೆ ಹೆಸರಿಟ್ಟುಕೊಂಡಿದ್ದಾರೆ, ಕಲ್ಲು ಎಂದು ಹೆಸರು ಇಟ್ಟುಕೊಳ್ಳಬಹುದಿತ್ತಲ್ಲವೇ? ಅವರಿಗೆ ಏನು ಹೆಚ್ಚುಕಮ್ಮಿಯಾಗಿದೆಯೋ? ಅವರಲ್ಲಿ ಏನೋ ಸಮಸ್ಯೆ ಇರಬೇಕು. ನನ್ನ ವೈಯಕ್ತಿಕ ನಂಬಿಕೆ ವಿಚಾರವಾಗಿ ಮಾತನಾಡಲು ಯಾರಿಗೂ ಹಕ್ಕಿಲ್ಲ. ನನ್ನ ಭಕ್ತಿ, ನಂಬಿಕೆ ನನಗೆ ಬಿಟ್ಟ ವಿಚಾರʼ ಎಂದು ತಿರುಗೇಟು ನೀಡಿದರು.

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದರು.

ಕುಂಭಮೇಳಕ್ಕೆ ಹೋಗುವ ವಿಚಾರವಾಗಿ ಕೇಳಿದಾಗ, ʼಆ ವಿಚಾರ ನನಗೆ ಬಿಟ್ಟದ್ದು, ನಾನು ಹೋಗುತ್ತೇನೋ, ಬಿಡುತ್ತೇನೋ ನನಗೆ ಬಿಟ್ಟ ವಿಚಾರ. ನಾನು ಪೂಜೆ ಮಾಡುವುದು, ಕುಂಕುಮ ಇಡುವುದು, ರುದ್ರಾಕ್ಷಿ ಧರಿಸುವುದು ನನ್ನ ಇಚ್ಛೆ. ಕೆಲವರು ಸೂಟು ಬೂಟು ಹಾಕಿದರೆ, ಮತ್ತೆ ಕೆಲವರು ಪಂಚೆ ಹಾಕುತ್ತಾರೆ. ಅವರವರ ಉಡುಗೆ ಅವರ ಇಚ್ಛೆʼ ಎಂದರು.

'ಜಿಮ್' ಬಳಿಕ 2ನೇ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ

ಎರಡನೇ ವಿಮಾನ ನಿಲ್ದಾಣದ ಬಗ್ಗೆ ಕೇಳಿದಾಗ, ʼಬೃಹತ್ ಕೈಗಾರಿಕೆ ಸಚಿವರು, ಎರಡನೇ ವಿಮಾನ ನಿಲ್ದಾಣದ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ. ಅಂತಿಮ ನಿರ್ಧಾರದ ಬಗ್ಗೆ ನನ್ನ ಬಳಿ, ಸಿಎಂ ಬಳಿ ಚರ್ಚೆ ಮಾಡಿಲ್ಲ. ಪ್ರಾಥಮಿಕ ಸಭೆ ಮಾತ್ರ ಆಗಿದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮುಗಿದ ನಂತರ ನಾವು ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ಸಂಪುಟ ಸಭೆಯಲ್ಲಿ ನೀರಿನ ದರ ಏರಿಕೆ ಚರ್ಚೆ

ನೀರಿನ ದರ ಏರಿಕೆ ಪ್ರಸ್ತಾವನೆ ಸಲ್ಲಿಕೆ ಬಗ್ಗೆ ಕೇಳಿದಾಗ, ʼಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಬೇಕುʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.