ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Corona Virus: ವೃದ್ಧರು, ಮಕ್ಕಳು, ಗರ್ಭಿಣಿಯರಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ಕಡ್ಡಾಯ ಪರೀಕ್ಷೆಗೆ ಸೂಚನೆ

Corona Virus: ಎಲ್ಲಾ SARI (ಉಸಿರಾಟದ ಸಮಸ್ಯೆ) ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು, ವಯೋವೃದ್ಧರಲ್ಲಿ, ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದನ್ನು ಆರೋಗ್ಯ ಇಲಾಖೆ ಸೂಚಿಸಿದೆ. ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಸರಕಾರ ಆರೋಗ್ಯ ಇಲಾಖೆಗೆ ಸೂಚಿಸಿದೆ.

ವೃದ್ಧರು, ಮಕ್ಕಳಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ಕಡ್ಡಾಯ ಪರೀಕ್ಷೆಗೆ ಸೂಚನೆ

ಹರೀಶ್‌ ಕೇರ ಹರೀಶ್‌ ಕೇರ May 27, 2025 8:05 AM

ಬೆಂಗಳೂರು: ವಯೋವೃದ್ಧರಲ್ಲಿ, ಮಕ್ಕಳಲ್ಲಿ ಹಾಗೂ ಗರ್ಭಿಣಿಯರಲ್ಲಿ ಕೊರೊನಾ ವೈರಸ್‌ (Corona Virus Symptoms) ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆಗೆ ಕರೆದೊಯ್ಯಬೇಕು ಎಂದು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕೋವಿಡ್-19 (Covid 19 test) ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಕೂಡ ಆರೋಗ್ಯ ಇಲಾಖೆ (Health Department) ಆದೇಶ ಹೊರಡಿಸಿದೆ.

ಸೂಚನೆ ಹೀಗಿದೆ: RT-PCR ಕೋವಿಡ್-19 ರ ಪರೀಕ್ಷೆ (RT-PCR test) ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ರಾಜ್ಯದಲ್ಲಿ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಲ್ಲಿ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗಾಗಿ ಮಾದರಿಯನ್ನು ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First-In-First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ /ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮ ವಹಿಸುವುದು.

ಎಲ್ಲಾ SARI (ಉಸಿರಾಟದ ಸಮಸ್ಯೆ) ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು. ವಯೋವೃದ್ಧರಲ್ಲಿ, ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು. ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು ಎಂದು ಮಾಹಿತಿ ನೀಡಲಾಗಿದೆ. ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಸರಕಾರ ಆರೋಗ್ಯ ಇಲಾಖೆಗೆ ಸೂಚಿಸಿದೆ.

ಇದನ್ನೂ ಓದಿ: Covid-19 cases: ಕೋವಿಡ್‌ ಆತಂಕ; ಜಿಲ್ಲಾ ಆಸ್ಪತ್ರೆಗಳು ಸರ್ವ ಸನ್ನದ್ಧವಾಗಿರಲು ಸಿಎಂ ಸೂಚನೆ