Donald Trump: ಅಮೆರಿಕದ ನೂತನ ಅಧ್ಯಕ್ಷರಿಗೆ ಪಿಎಂ ಮೋದಿಯ ಪತ್ರ ನೀಡಲಿರುವ ಜೈಶಂಕರ್!
ಡೊನಾಲ್ಡ್ ಟ್ರಂಪ್ ಸೋಮವಾರ (ಜನವರಿ 20) ಎರಡನೇ ಬಾರಿ ಅಮೆರಿಕ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಸಿಕೊಳ್ಳಲು ವಿಶ್ವದಾದ್ಯಂತ ನಾಯಕರು ಅಮೆರಿಕಕ್ಕೆ ತೆರಳಿದ್ದಾರೆ. ಅದರಂತೆ ಕೇಂದ್ರ ಸಚಿವ ಎಸ್ ಜೈಶಂಕರ್ ಅವರು ಭಾರತದ ಪರವಾಗಿ ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಬರೆದಿರುವ ಪತ್ರವನ್ನು ಡೊನಾಲ್ಡ್ ಟ್ರಂಪ್‌ಗೆ ಜೈಶಂಕರ್ ನೀಡಲಿದ್ದಾರೆಂದು ವರದಿಯಾಗಿದೆ.
ನವದೆಹಲಿ: ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ (Donald Trump inauguration) ಕ್ಷಣಗಣನೆ ಶುರುವಾಗಿದೆ. ಸೋಮವಾರ ಕ್ಯಾಪಿಟಲ್ ರೊಟುಂಡಾ ಕಟ್ಟಡದ ಹೊರಗೆ ಲಕ್ಷಾಂತರ ಜನರು ಜಮಾಯಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರ ನಡುವೆ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರ (PM Modi) ಪತ್ರದೊಂದಿಗೆ ತೆರಳಿದ್ದಾರೆಂದು ಮೂಲಗಳು ತಿಳಿಸಿವೆ.
ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭದಲ್ಲಿ ಕೇಂದ್ರ ಸಚಿವ ಎಸ್ ಜೈಶಂಕರ್ ಪ್ರಧಾನಿ ಮೋದಿಯನ್ನು ಪ್ರತಿನಿಧಿಸುತ್ತಿದ್ದಾರೆ. ನಾಲ್ಕು ವರ್ಷಗಳ ನಂತರ ಟ್ರಂಪ್ ಎರಡನೇ ಬಾರಿ ಅಮೆರಿಕದಲ್ಲಿ ಅಧಿಕಾರಕ್ಕೆ ಮರಳುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ಕೇಂದ್ರ ಸಚಿವರು ಪ್ರತಿನಿಧಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ನಡೆದಿದೆ.
Donald Trump : ಡೊನಾಲ್ಡ್ ಟ್ರಂಪ್ ಪದಗ್ರಹಣ;ಔತಣಕೂಟದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ ದಂಪತಿ
2023ರ ಹಿಂದೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೈಜೀರಿಯಾ ಅಧ್ಯಕ್ಷರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರೆ, ಆಗಿನ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರು 2023ರ ನವೆಂಬರ್‌ನಲ್ಲಿ ಮಾಲ್ಡೀವ್ಸ್ ಅಧ್ಯಕ್ಷರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಜುಲೈನಲ್ಲಿ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇರಾನ್ ಅಧ್ಯಕ್ಷರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿ ಭಾರತವನ್ನು ಪ್ರತಿನಿಧಿಸಿದ್ದರು.
ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭವು ಯುಎಸ್ ಕ್ಯಾಪಿಟಲ್‌ನಲ್ಲಿ ಭಾರತೀಯ ಕಾಲಮಾನ ರಾತ್ರಿ 10:30 ಕ್ಕೆ ಪ್ರಾರಂಭವಾಗಲಿದೆ. ಮೊದಲಿಗೆ, ಹೊಸದಾಗಿ ಚುನಾಯಿತ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಪ್ರಮಾಣವಚನ ಸ್ವೀಕರಿಸುತ್ತಾರೆ, ಇದನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬ್ರೆಟ್ ಕವನಾಗ್ ಅವರು ನಿರ್ವಹಿಸುತ್ತಾರೆ. ಇದಾದ ನಂತರ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಟ್ರಂಪ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದೇ ವೇಳೆ ಟ್ರಂಪ್ ಭಾಷಣದೊಂದಿಗೆ ಸಮಾರಂಭ ಮುಕ್ತಾಯವಾಗಲಿದೆ.
Donald Trump: ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ: ವಿದೇಶಾಂಗ ಸಚಿವ ಜೈ ಶಂಕರ್ ಭಾಗಿ
.ಅಂದ ಹಾಗೆ ಇದಕ್ಕೂ ಮೊಪದಲು ಬೈಡೆನ್ ಮತ್ತು ಕಮಲಾ ಹ್ಯಾರಿಸ್‌ಗೆ ಔಪಚಾರಿಕ ವಿದಾಯ ಸಮಾರಂಭವೂ ನಡೆಯಲಿದೆ. ನಂತರ ಡೊನಾಲ್ಡ್ ಟ್ರಂಪ್ ಮತ್ತು ಜೆಡಿ ವ್ಯಾನ್ಸ್ ಸಹಿ ಹಾಕಲಿದ್ದಾರೆ. ಸಹಿ ಮಾಡುವ ಸಮಾರಂಭವು ಯುನೈಟೆಡ್ ಸ್ಟೇಟ್ಸ್‌ನ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಅಧ್ಯಕ್ಷರು ತೆಗೆದುಕೊಂಡ ಮೊದಲ ಅಧಿಕೃತ ಕ್ರಮಗಳಲ್ಲಿ ಒಂದಾಗಿದೆ. ಇದು ಯುಎಸ್ ಕ್ಯಾಪಿಟಲ್‌ನಲ್ಲಿರುವ ಸೆನೆಟ್ ಚೇಂಬರ್‌ನ ಹೊರಗೆ ಅಧ್ಯಕ್ಷರ ಕೊಠಡಿಯಲ್ಲಿ ನಡೆಯಲಿದೆ.