Donald Trump: ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಪ್ರಧಾನಿ ಮೋದಿ ವಿಸಿಟ್? ಫೋನ್ ಕರೆ ಬಗ್ಗೆ ಟ್ರಂಪ್ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಫೋನ್ ಕರೆ ಮೂಲಕ ಮಾತನಾಡಿದ್ದಾರೆ. ಇದರ ಬೆನ್ನಲ್ಲೇ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಟ್ರಂಪ್, ಭಾರತ ಹಾಗೂ ಅಮೆರಿಕದ ಸಂಬಂಧದ ಬಗ್ಗೆ ಹೇಳಿದ್ದಾರೆ. ಅಲ್ಲದೇ ನರೇಂದ್ರ ಮೋದಿ ಅವರು ಫೆಬ್ರವರಿಯಲ್ಲಿ ಅಮೆರಿಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಟ್ರಂಪ್ ತಿಳಿಸಿದ್ದಾರೆ.

Trump- Modi

ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸೋಮವಾರ ಫೋನ್ ಕರೆ ಮೂಲಕ ಮಾತನಾಡಿದ್ದಾರೆ. ಅವರು ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ನರೇಂದ್ರ ಮೋದಿ ಅವರು ಫೆಬ್ರವರಿಯಲ್ಲಿ ಶ್ವೇತಭವನಕ್ಕೆ (Whit house) ಭೇಟಿ ನೀಡುವ ಸಾಧ್ಯತೆಯಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್ ‘ನಾನು ಮೋದಿ ಅವರ ಜೊತೆ ಸುದೀರ್ಘ ಚರ್ಚೆ ಮಾತುಕತೆ ನಡೆಸಿದ್ದೇನೆ. ಅವರು ಮುಂದಿನ ತಿಂಗಳು, ಫೆಬ್ರವರಿಯಲ್ಲಿ ಶ್ವೇತಭವನಕ್ಕೆ ಬರಲಿದ್ದಾರೆ. ನಾವು ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಎಂದು ಅವರು ಹೇಳಿದ್ದಾರೆ. ಈ ವೇಳೆ, ಅಕ್ರಮವಾಗಿ ಅಮೆರಿಕಕ್ಕೆ ಬಂದಿರುವ ಭಾರತೀಯ ವಲಸಿಗರನ್ನು ವಾಪಸ್ ಕರೆತರುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರು “ಸರಿಯಾದ ನಿರ್ಧಾರವನ್ನು ಮಾಡುತ್ತಾರೆ” ಎಂದು ಸುದ್ದಿಗಾರರಿಗೆ ಟ್ರಂಪ್ ತಿಳಿಸಿದರು.
ಅಮೆರಿಕದ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ನರೇಂದ್ರ ಮೋದಿ ಸೋಮವಾರ ಟ್ರಂಪ್ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಎರಡು ದೇಶಗಳ ನಡುವಿನ ನ್ಯಾಯಯುತ ವ್ಯಾಪಾರದ ಬಗ್ಗೆಯೂ ಟ್ರಂಪ್ ಮಾತನಾಡಿದ್ದಾರೆ. ಇಂಡೋ-ಪೆಸಿಫಿಕ್, ಮಧ್ಯಪ್ರಾಚ್ಯ ಮತ್ತು ಯುರೋಪ್‌ನಲ್ಲಿ ಭದ್ರತೆ ಸೇರಿದಂತೆ ಹಲವು ಪ್ರಾದೇಶಿಕ ವಿಷಯಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ : Donald Trump : ವಿದೇಶಗಳಿಗೆ ನೀಡುತ್ತಿದ್ದ ನೆರವು ಹಣಕ್ಕೆ ಬಿತ್ತು ಬ್ರೇಕ್ ; ಡೊನಾಲ್ಡ್ ಟ್ರಂಪ್ ಮಹತ್ವದ ಆದೇಶ
ಜ. 20 ರಂದು ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಿದ್ದರು. ಸಮಾರಂಭಕ್ಕೆ ಭಾರತೀಯ ವಿದೇಶಾಂಗ ಇಲಾಖೆಯ ಸಚಿವ ಎಸ್. ಜೈಶಂಕರ್ ಅವರು ಭಾಗವಹಿಸಿದ್ದರು. ಈ ವೇಳೆ ಅವರಿಗೆ ಮುಂದಿನ ಸಾಲಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿತ್ತು. ಮೋದಿ ಅವರು ವಿಶೇಷ ಪತ್ರವೊಂದನ್ನು ಟ್ರಂಪ್‌ಗೆ ನೀಡಿದ್ದರು. ಭಾರತ- ಅಮೆರಿಕದ ರಾಜತಾಂತ್ರಿಕತೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿತ್ತು.