ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ನಾಳೆ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿಕೆ ಶಿವಕುಮಾರ್‌

"ಭಯೋತ್ಪಾದನೆ ವಿರುದ್ಧ ನಮ್ಮ ದೇಶದ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತಿದ್ದೇನೆ" ಎಂದಿದ್ದಾರೆ ಡಿಕೆ‌ ಶಿವಕುಮಾರ್ (DK Shivakumar).

ನಾಳೆ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿಕೆ ಶಿವಕುಮಾರ್‌

ಡಿಕೆ ಶಿವಕುಮಾರ್

ಹರೀಶ್‌ ಕೇರ ಹರೀಶ್‌ ಕೇರ May 14, 2025 12:09 PM

ಬೆಂಗಳೂರು: ನಾಳೆ (ಮೇ15) ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರ ಜನ್ಮದಿನ ಆಗಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಡಿಕೆಶಿ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ನಾಳೆ ಯಾರೂ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಬೇಡಿ (Birthday celebration) ಎಂದಿರುವ ಅವರು, ದೇಶ ಎದುರಿಸುತ್ತಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಡಿಕೆ ಶಿವಕುಮಾರ್ ಅವರು, "ಸ್ನೇಹಿತರು, ಹಿತೈಷಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರೇ, ಭಯೋತ್ಪಾದನೆ ವಿರುದ್ಧ ನಮ್ಮ ದೇಶದ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತಿದ್ದೇನೆ. ನಾನು ಮೇ 15ರಂದು ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸಕ್ಕಾಗಲಿ, ಕಚೇರಿಗಾಗಲಿ ಬರಬೇಡಿ. ಯಾರೂ ಅನ್ಯತಾ ಭಾವಿಸಬಾರದು. ಜನ್ಮದಿನದ ಪ್ರಯುಕ್ತ ಯಾವುದೇ ಪ್ಲೆಕ್ಸ್, ಬ್ಯಾನರ್ ಹಾಕಬೇಡಿ. ಜಾಹೀರಾತು ನೀಡಬೇಡಿ. ನಿಮ್ಮ ಆಶೀರ್ವಾದವೇ ನನಗೆ ಶ್ರೀ ರಕ್ಷೆ. ನೀವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ, ಆಶೀರ್ವದಿಸಿ" ಎಂದು ಹೇಳಿದ್ದಾರೆ.

ಮೂರು ತಿಂಗಳಲ್ಲಿ ಗುತ್ತಿಗೆದಾರರ ಬಿಲ್‌ ಪಾವತಿ: ಡಿಸಿಎಂ

ಸರ್ಕಾರದಿಂದ ಗುತ್ತಿಗೆದಾರರಿಗೆ ಬಾಕಿ ಇರುವ, 32,000 ಕೋಟಿ ರೂಪಾಯಿಯನ್ನು ಮುಂದಿನ ಎರಡು-ಮೂರು ತಿಂಗಳಲ್ಲಿ ಪಾವತಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಭರವಸೆ ನೀಡಿದ್ದಾರೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (KSCA) ಜೊತೆ ಮಂಗಳವಾರ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಮಂಜುನಾಥ್, ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಡಿಸಿಎಂಗೆ ವಿವರಿಸಿದ್ದೇವೆ. ಸಣ್ಣ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಬಿಡುಗಡೆ ಮಾಡಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು. ಸಣ್ಣ ಗುತ್ತಿಗೆದಾರರಲ್ಲಿ ಹಿರಿತನದ ಆಧಾರದ ಮೇಲೆ ಬಾಕಿ ಪಾವತಿಸುವುದಾಗಿ ಡಿಸಿಎಂ ಭರವಸೆ ನೀಡಿದ್ದಾರೆ. ಬಿಲ್‌ಗಳನ್ನು ತೆರವುಗೊಳಿಸುವಾಗ ಅಧಿಕಾರಿಗಳು ಮಾಡುವ ತಪ್ಪುಗಳು ಸಿಎಂ ಅಥವಾ ಸಚಿವರಿಗೆ ತಿಳಿದಿಲ್ಲ. ನಾವು ಇದನ್ನು ಉಪಮುಖ್ಯಮಂತ್ರಿಗಳಿಗೆ ವಿವರಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಾಕಿ ಬಿಲ್‌ಗಳನ್ನು ತೆರವುಗೊಳಿಸುವುದಾಗಿ ಶಿವಕುಮಾರ್ ಅವರು ಭರವಸೆ ನೀಡಿದ್ದಾರೆಂದು ತಿಳಿಸಿದರು.

ಈ ಸಭೆ ಫಲಪ್ರದವಾಗಿದೆ. ಯಾವುದೇ ಸಮಸ್ಯೆ ಇದ್ದರೆ ತಮ್ಮನ್ನು ಸಂಪರ್ಕಿಸುವಂತೆ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಅಧಿಕಾರಿಗಳು ಮಾಡಿದ ತಪ್ಪುಗಳು ಶಿವಕುಮಾರ್ ಅವರಿಗೆ ತಿಳಿದಿದೆ. ಇದನ್ನು ಸರಿಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಸಣ್ಣ ಗುತ್ತಿಗೆದಾರರಿಗೆ ಪರಿಹಾರ ಸಿಗಬೇಕೆಂದು ನಾವು ಬಯಸುತ್ತೇವೆಂದು ಹೇಳಿದರು.

ಇದನ್ನೂ ಓದಿ: Karnataka Congress: ಕಾಂಗ್ರೆಸ್‌ ನಕ್ಷೆಯಲ್ಲಿ ತಿರುಚಿದ ಕಾಶ್ಮೀರ; ಟೀಕೆ, ಡಿಕೆಶಿ ಕಠಿಣ ಕ್ರಮ