Double Murder Case: ಹುಣಸೂರಿನಲ್ಲಿ ಕಲ್ಲಿನಿಂದ ಜಜ್ಜಿ ವೃದ್ದ ದಂಪತಿ ಕೊಲೆ
ಕೆಲಸಗಾರ ಗಣೇಶ್ ಸಂಜೆ ತೋಟದ ಮನೆಗೆ ಬಂದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ಕಂಡು ಗಾಬರಿಗೊಂಡು ತಕ್ಷಣ ದಂಪತಿಯ ಮಗನಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮೈಸೂರು: ಹುಣಸೂರು (Hunsur) ತಾಲ್ಲೂಕಿನ ನಾಡಪ್ಪನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವೃದ್ಧ ದಂಪತಿಯನ್ನು (Senior couple) ಭೀಕರವಾಗಿ ಹತ್ಯೆ (Double murder Case) ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ದೊಡ್ಡ ಗಾತ್ರದ ಕಲ್ಲಿನಿಂದ ಹೊಡೆದು ಕೊಂದಿದ್ದಾರೆ. ಮೃತರನ್ನು ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ (52) ಎಂದು ಗುರುತಿಸಲಾಗಿದೆ.
ದಂಪತಿಗೆ ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಮತ್ತು ಒಬ್ಬ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಒಣಗಿದ ಶುಂಠಿಯನ್ನು ಸಂಗ್ರಹಿಸಲು ಕೆಲಸಗಾರ ಗಣೇಶ್ ಸಂಜೆ ತೋಟದ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಂಪತಿಗಳನ್ನು ಕಂಡು ಗಾಬರಿಗೊಂಡು ತಕ್ಷಣ ದೇವರಾಜ್‌ಗೆ ಮಾಹಿತಿ ನೀಡಿದರು.
ದೇವರಾಜ್ ಸ್ಥಳಕ್ಕೆ ಬರುವ ಹೊತ್ತಿಗೆ, ಅವರ ಪೋಷಕರಿಬ್ಬರೂ ಸಾವನ್ನಪ್ಪಿದ್ದರು. ದಕ್ಷಿಣ ವಲಯ ಐಜಿಪಿ ಡಾ. ಬೋರಲಿಂಗಯ್ಯ, ಎಸ್ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಸಬ್ ಇನ್ಸ್‌ಪೆಕ್ಟರ್ ಲೋಲಾಕ್ಷಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನಿಂದ ಬಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ವಿಧಿವಿಜ್ಞಾನ ತಂಡವನ್ನು ಸಹ ಸಾಕ್ಷ್ಯಗಳನ್ನು ಸಂಗ್ರಹಿಸಲು ನಿಯೋಜಿಸಲಾಗಿತ್ತು. ದುಷ್ಕರ್ಮಿಗಳು ದರೋಡೆ ಪ್ರಯತ್ನಿಸಿ ಅಥವಾ ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಮಂಗಳೂರಿನ ಲಾಡ್ಜ್‌ನಲ್ಲಿ ಉತ್ತರ ಪ್ರದೇಶದ ವ್ಯಕ್ತಿ ಆತ್ಮಹತ್ಯೆ
ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿ ತನ್ನನ್ನು ಪ್ರೀತಿಸಿ, ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಗಾಜಿಪುರ ನಿವಾಸಿ, ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್ ಸಿಂಗ್ (40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನ ರಾವ್ ಅಂಡ್ ರಾವ್ ಸರ್ಕಲ್‌ನಲ್ಲಿರುವ ಲಾಡ್ಜ್‌ನಲ್ಲಿ ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೃತ್ಯಕ್ಕೂ ಮುನ್ನ ಸುದೀರ್ಘ 20 ನಿಮಿಷಗಳ ವಿಡಿಯೊ ಮಾಡಿದ್ದು, ತನ್ನ ಸಾವಿಗೆ ಮಹಿಳಾ ಅಧಿಕಾರಿಯೇ ಕಾರಣ ಎಂದು ಹೇಳಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.
ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್‌ಗೆ ಈಗಾಗಲೇ ಮರುವೆಯಅಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಜತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ. ಪ್ರೀತಿಯ ನೆಪದಲ್ಲಿ ತನಗೆ ಮೋಸ ಮಾಡಿದ್ದಾಳೆ. ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಹಾಗಯೇ ಹಲವರ ಜತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ 8 ಲಕ್ಷದಷ್ಟು ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ ಎಂದು ವಿಡಿಯೊದಲ್ಲಿ ಆರೋಪಿಸಿದ್ದಾನೆ. ಮೋನಿಕಾ ಸಿಂಗ್, ಗುಜರಾತಿನ ಅಹಮದಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ಹೇಳಿದ್ದಾನೆ. ಘಟನೆ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Ranya Rao: ಅಕ್ರಮ ಚಿನ್ನ ಸಾಗಣೆ, ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್