ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಅದ್ಧೂರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಸರ್ಕಾರಿ ಕಚೇರಿ ಗಳ ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ಸಂಭ್ರಮದಿಂದ ಆಚರಿಸಲು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗು ವುದು. ಕಾರ್ಯಕ್ರಮದಂದು ರಕ್ತದಾನ ಶಿಬಿರವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಆಯೋ ಜಿಸಲು ನಿರ್ಧರಿಸಲಾಗಿದೆ

ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕವಾಗಿ, ಸರಳವಾಗಿ ಆಚರಣೆ

ಅದ್ಧೂರಿಯಾಗಿ ಡಾ. ಬಿ.ಆರ್. ಅಂಬೇಡ್ಕರ್, ಡಾ ಬಾಬು ಜಗಜೀವನರಾಂ  ಜಯಂತಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.

Profile Ashok Nayak Mar 30, 2025 11:13 PM

ಚಿಕ್ಕಬಳ್ಳಾಪುರ: ಏಪ್ರಿಲ್ ೫ ರಂದು ಡಾ.ಬಾಬು ಜಗಜೀವನರಾಂ ರವರ 118ನೇ ಜಯಂತಿ ಯನ್ನು ಮತ್ತು ಏಪ್ರಿಲ್ ೧೪ ರಂದು ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ವಿಜೃಂಭಣೆ  ಹಾಗೂ ಅರ್ಥಪೂರ್ಣವಾಗಿ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು. ಜಿಲ್ಲಾ ಡಳಿತ ಭವನದ, ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ "ಡಾ. ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್” ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯ ಕ್ಷತೆ ವಹಿಸಿ ಮಾತನಾಡಿದರು. ಡಾ.ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ 5 ರಂದು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕವಾಗಿ, ಸರಳವಾಗಿ ಆಚರಿಸ ಲಾಗುವುದು. ಏಪ್ರಿಲ್ ೧೪ ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Chikkaballapur(Chinthamani) News: ಮರುಗಮಲ್ಲ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಗುರುವಂದನಾ ಕಾರ್ಯಕ್ರಮ

ಕಾರ್ಯಕ್ರಮದಂದು ಜೈ ಭೀಮ್ ಮೆಮೋರಿಯಲ್ ಹಾಸ್ಟೆಲ್ ಮುಂಭಾಗದಿಂದ ಮೆರವಣಿಗೆ ಚಾಲನೆಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸ್ಥಬ್ದಚಿತ್ರಗಳು, ಪಲ್ಲಕ್ಕಿಗಳು ಹಾಗೂ ಕಲಾತಂಡ ಗಳೊಂದಿಗೆ ಶಿಡ್ಲಘಟ್ಟ ವೃತ್ತ ಮುಖಾಂತರ ಜಿಲ್ಲಾಡಳಿತ ಭವನದವರೆಗೆ ಸಾಗಲಿದೆ. ಸರ್ಕಾರಿ ಕಚೇರಿ ಗಳ ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ಸಂಭ್ರಮದಿಂದ ಆಚರಿಸಲು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗು ವುದು. ಕಾರ್ಯಕ್ರಮದಂದು ರಕ್ತದಾನ ಶಿಬಿರವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಆಯೋ ಜಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನರಾಂ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ರವರ ವಿಚಾರದಾರೆಗಳ ಕುರಿತು ಭಾಷಣ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು. ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ಧತೆ ಮತ್ತು ಅಲಂಕಾರ, ಶೌಚಾಲಯ ವ್ಯವಸ್ಥೆ, ಮಜ್ಜಿಗೆ ವ್ಯವಸ್ಥೆ, ಕುಡಿಯುವ ನೀರು, ಊಟದ ವ್ಯವಸ್ಥೆ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಶಿಷ್ಟಚಾರದಂತೆ ಅಗತ್ಯ ಸಕಲ ಸಿದ್ಧತೆಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಬೇಕು. ಈ ಸಂಬಂಧ ಇಲಾಖಾವಾರು ಸಮಿತಿಗಳನ್ನು ರಚಿಸಿ ಕಾರ್ಯಕ್ರಮವನ್ನು ಸಮರ್ಪಕವಾಗಿ ಆಯೋಜಿಸಲು ಹಾಗೂ ಯಶಸ್ವಿ ಗೊಳಿಸಲು ಸೂಚನೆಗಳನ್ನು ನೀಡಲಾಯಿತು.

ಈಗಾಗಲೇ ರಚಿಸಲಾಗಿರುವ ಆಹಾರ ಸಮಿತಿ, ಸ್ವಾಗತ ಸಮಿತಿ, ಪ್ರಚಾರ ಸಮಿತಿ, ವೇದಿಕೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ಪೂರ್ವ ಸಿದ್ಧತೆಗಳನ್ನು ಸಮರೋಪಾದಿಯಲ್ಲಿ ಮಾಡಿಕೊಳ್ಳಲು ಸೂಚಿಸಲಾಯಿತು. ಚಿಕ್ಕಬಳ್ಳಾಪುರ ಜಿಲ್ಲೆಯ ಸಮಸ್ತ ನಾಗರಿಕರು, ಸರ್ಕಾರೇತರ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಆಗಮಿಸಲು ಈ ವೇಳೆ ಜಿಲ್ಲಾಧಿಕಾರಿಗಳು ಆಹ್ವಾನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ನ  ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜ ರಿದ್ದರು.