ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಕಾಧಿಕಾರಿಯಾಗಿ ಡಾ.ವೈ.ನವೀನ್ ಭಟ್ ಅಧಿಕಾರ ಸ್ವೀಕಾರ

ಡಾ. ವೈ ನವೀನ್ ಭಟ್ ಬುಧವಾರ ಜಿಲ್ಲಾ ಪಂಚಾಯತ್ ನ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಶ್ರೀಯುತರು ಈ ಹಿಂದೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ದ್ದಾರೆ. ನಿಕಟಪೂರ್ವ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರು ನೂತನ ಕಾರ್ಯನಿರ್ವಹಣಾಧಿ ಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಡಾ.ವೈ.ನವೀನ್ ಭಟ್ ಅಧಿಕಾರ ಸ್ವೀಕಾರ

Ashok Nayak Ashok Nayak Jun 18, 2025 10:25 PM

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಕಾಧಿಕಾರಿಯಾಗಿ ಡಾ. ವೈ ನವೀನ್ ಭಟ್ ಬುಧವಾರ ಜಿಲ್ಲಾ ಪಂಚಾಯತ್ ನ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿದರು.

ನಂತರ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ನಡೆದ ಸರಳ ಸ್ವಾಗತ ಕಾರ್ಯಕ್ರಮದಲ್ಲಿ  ಭಾಗವಹಿಸಿ ಜಿಲ್ಲೆಯ ಬಗ್ಗೆ ಮಾಹಿತಿ ಪಡೆದರು. ಶ್ರೀಯುತರು ಈ ಹಿಂದೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ನಿಕಟಪೂರ್ವ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರು ನೂತನ ಕಾರ್ಯನಿರ್ವಹಣಾಧಿ ಕಾರಿಗೆ ಅಧಿಕಾರ ಹಸ್ತಾಂತರಿಸಿದರು.  

ಇದನ್ನೂ ಓದಿ: Chikkanayakanahalli (Tumkur) News: ಜೂ.19ರಂದು ಚಿ.ನಾ.ಹಳ್ಳಿ ವಿಧಾನಸಭಾ ಕ್ಷೇತ್ರದ ಗರ್ಭಿಣಿಯರಿಗೆ ತವರಿನ ಮಡಿಲು ಕಾರ್ಯಕ್ರಮದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ,ಅಪರ ಜಿಲ್ಲಾಧಿಕಾರಿ ಡಾ.ಎನ್ ಭಾಸ್ಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ  ಅಧಿಕಾರಿಗಳುಸಿಬ್ಬಂದಿ ಉಪಸ್ಥಿತರಿದ್ದರು.