Road Accident: ಪಾನಮತ್ತರಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸಾವು
ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಪಾನಮತ್ತರಾಗಿದ್ದರು ಎಂದು ಗೊತ್ತಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಾನಮತ್ತರಾಗಿ (drunk and drive) ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಕಾರು ಮರಕ್ಕೆ ಡಿಕ್ಕಿಯಾಗಿ (Road Accident) ಸ್ಥಳದಲ್ಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ (Students death) ಘಟನೆ ಬೆಂಗಳೂರಿನ (Bengaluru news) ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆ ಬಳಿ ತಡರಾತ್ರಿ ಸಂಭವಿಸಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ಗುರುತಿಸಲಾಗಿದೆ. ಗಾಯಗೊಂಡ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿಗಳು ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಮಗಳನ್ನು ಕೊಂದು ಪತ್ನಿ ಆತ್ಮಹತ್ಯೆ
ಬೆಂಗಳೂರು: ಪತಿಯ ಅನೈತಿಕ ಸಂಬಂಧದಿಂದ ಜೀವನದಲ್ಲಿ ಬೇಸತ್ತ 34 ವರ್ಷದ ಮಹಿಳೆಯೊಬ್ಬರು ತಮ್ಮ ನಾಲ್ಕು ವರ್ಷದ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ.
ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಶ್ರುತಿ, ಮೊದಲು ತಮ್ಮ ಮಗಳು ರೋಶಿನಿಯನ್ನು ದುಪ್ಪಟ್ಟಾ ಬಳಸಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗಸಂದ್ರದ ರಾಮಯ್ಯ ಲೇಔಟ್‌ನಲ್ಲಿ ಭಾನುವಾರ ಸಂಜೆ ಶ್ರುತಿಯ ಪತಿ ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ.
ಸ್ಥಳದಿಂದ ವಶಪಡಿಸಿಕೊಳ್ಳಲಾದ ಆತ್ಮಹತ್ಯೆ ಪತ್ರದಲ್ಲಿ ಆಕೆಯ ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಮತ್ತು ಅವರಿಗೆ ಇನ್ನೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿದೆ ಎಂದು ಬರೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಶೃತಿ 2014ರಲ್ಲಿ ಗೋಪಾಲಕೃಷ್ಣ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ದಂಪತಿಗಳ ನಡುವಿನ ಸಂಬಂಧ ಹದಗೆಟ್ಟಿದ್ದು, ಅವರ ಕುಟುಂಬ ನೀಡಿದ ದೂರಿನ ಪ್ರಕಾರ, ಆಡಿಟರ್ ಆಗಿ ಕೆಲಸ ಮಾಡುತ್ತಿರುವ ಗೋಪಾಲಕೃಷ್ಣ ಇನ್ನೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಗೋಪಾಲಕೃಷ್ಣ ಅವರ ಅಕ್ರಮ ಸಂಬಂಧವು ದಾಂಪತ್ಯದಲ್ಲಿ ಬಿರುಕು ಉಂಟುಮಾಡಿತ್ತು ಮತ್ತು ಇದು ಆಗಾಗ್ಗೆ ಜಗಳಗಳಿಗೆ ಕಾರಣವಾಗಿತ್ತು ಎಂದು ದೂರುದಾರರು ಆರೋಪಿಸಿದ್ದಾರೆ.
ಘಟನೆಯ ನಂತರ, ಮಹಿಳೆಯ ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Murder Case: ಬರ್ಬರ ಕೃತ್ಯ; ಅಪರಿಚಿತ ಮಹಿಳೆಯ ರೇಪ್ ಮಾಡಿ ಕೊಲೆ