Assault Case: ಟಿಕೆಟ್ ಬೆಲೆ ಏರಿಸಿದ್ದಕ್ಕೆ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಕುಡುಕ!
ಬಸ್ ಟಿಕೆಟ್ ದರ ಹೆಚ್ಚಾಗಿದ್ದಕ್ಕೆ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಕಂಡಕ್ಟರ್ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬುವರ ಮೇಲೆ ಹಲ್ಲೆಯಾಗಿದೆ.

ಹಲ್ಲೆಗೊಳಗಾದ ನಿರ್ವಾಹಕ

ಗಂಗಾವತಿ: ಬಸ್ ಟಿಕೆಟ್ ಬೆಲೆ (Bus ticket price hike) ಏರಿಸಿದ ಸರಕಾರದ ಮೇಲೆ ರಾಂಗ್ ಆಗುವ ಬದಲು ಕಂಡಕ್ಟರ್ (Bus conductor) ಮೇಲೆ ಸಿಟ್ಟಿಗೆದ್ದ ಕುಡುಕನೊಬ್ಬ ನಿರ್ವಾಹಕರ ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ ಘಟನೆ ಕೊಪ್ಪಳ (Koppala news) ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಇತ್ತೀಚೆಗೆ ತಾನೇ ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿ ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಮಹಾರಾಷ್ಟ್ರದ ಪುಂಡರು ಹಲ್ಲೆ ನಡೆಸಿದ ಘಟನೆ ನಡೆದಿತ್ತು.
ಬಸ್ ಟಿಕೆಟ್ ದರ ಹೆಚ್ಚಾಗಿದ್ದಕ್ಕೆ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಕಂಡಕ್ಟರ್ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬುವರ ಮೇಲೆ ಹಲ್ಲೆಯಾಗಿದೆ. ವಿಜಯನಗರ ಜಿಲ್ಲೆಯ ನಿವಾಸಿ ಶ್ರೀಧರ್ ಹಲ್ಲೆ ಮಾಡಿದ ವ್ಯಕ್ತಿ. ಮಂಗಳವಾರ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಿಂದ ಗಂಗಾವತಿಗೆ ಹೋಗುತ್ತಿದ್ದ ಬಸ್ ಅನ್ನು ಶ್ರೀಧರ್ ಕುಡಿದ ಮತ್ತಿನಲ್ಲಿ ಹುಲಗಿಯಲ್ಲಿ ಹತ್ತಿದ್ದಾನೆ. ಗಂಗಾವತಿ ತಾಲೂಕಿನ ಹನುಮನಹಳ್ಳಿಗೆ ಹೋಗಬೇಕು ಅಂತ ಹೇಳಿದ್ದರಿಂದ ಆತನಿಗೆ ನಿರ್ವಾಹಕ ಹನುಮಪ್ಪ 30 ರೂಪಾಯಿ ಟಿಕೆಟ್ ನೀಡಿದ್ದಾರೆ.
ಈ ಮೊದಲು ಹುಲಗಿಯಿಂದ ಗಂಗಾವತಿಗೆ 26 ರೂಪಾಯಿ ಇತ್ತು, ಇದೀಗ 30 ರೂಪಾಯಿ ಟಿಕೆಟ್ ಯಾಕೆ ಅಂತ ಕೇಳಿದ್ದಾನೆ. ಟಿಕೆಟ್ ದರ ಹೆಚ್ಚಳವಾಗಿದೆ ಅಂತ ನಿರ್ವಾಹಕ ಹೇಳಿದ್ದಾರೆ. ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಳ ಮಾಡಿದ್ದೀರಿ ಅಂತ ನಿರ್ವಾಹಕ ಹನುಮಂತಪ್ಪ ಅವರ ಜೊತೆ ಶ್ರೀಧರ್ ಜಗಳ ಆರಂಭಿಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿ ಬಳಿ ಬಸ್ ನಿಲ್ಲಿಸಿದಾಗ ಶ್ರೀಧರ್ ನಿರ್ವಾಹಕ ಹನುಮಂತರನ್ನು ಎಳೆದುಕೊಂಡು ಕೆಳಗೆ ಇಳಿದ್ದಾನೆ. ಬಳಿಕ ಕೈಗೆ ಸಿಕ್ಕ ಕಲ್ಲಿನಿಂದ ಹನಮಪ್ಪರ ಮೇಲೆ ಹಲ್ಲೆ ಮಾಡಿದ್ದಾನೆ.
ಘಟನೆಯಲ್ಲಿ ಹನಮಪ್ಪರ ಬಲಗಣ್ಣು ಮತ್ತು ಹಣೆಗೆ ತೀವ್ರ ಪೆಟ್ಟು ಬಿದ್ದಿದೆ. ರಕ್ತಸ್ರಾವವಾಗಿದ್ದರಿಂದ ಕೂಡಲೇ ಹನುಮಪ್ಪರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಹನುಮಪ್ಪ ಆರೋಪಿ ಶ್ರೀಧರ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಶ್ರೀಧರ್ನನ್ನು ವಶಕ್ಕೆ ಪಡೆದಿದ್ದಾರೆ.
ಬಸ್ ಟಿಕೆಟ್ ವಿಚಾರವಾಗಿ ಬೆಳಗಾವಿಯಲ್ಲಿ ನಿರ್ವಾಹಕನ ಮೇಲೆ ಘಟನೆ ಮಾಸುವ ಮುನ್ನವೇ ಕುಡಿತ ಮತ್ತಿನಲ್ಲಿ ಪ್ರಯಾಣಿಕ ಹನುಮಪ್ಪನ ಮೇಲೆ ಹಲ್ಲೆ ಮಾಡಿರುವುದನ್ನು ಸಾರಿಗೆ ಸಂಸ್ಥೆ ಸಿಬ್ಬಂದಿ ಖಂಡಿಸಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.
ಪತ್ನಿಯ ಶೀಲ ಶಂಕಿಸಿ ಕೊಂದು, ಸುಟ್ಟುಹಾಕಲು ಯತ್ನಿಸಿದ ದುರುಳ ಆರೆಸ್ಟ್
ಬೆಂಗಳೂರು: ಪತಿಯೊಬ್ಬ ತನ್ನ ಪತ್ನಿಯ ಶೀಲವನ್ನು ಶಂಕಿಸಿದ್ದಲ್ಲದೆ, ಕುಡಿದ ನಶೆಯಲ್ಲಿ ಆಕೆಯ ತಲೆಯನ್ನು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾನೆ. ಅಷ್ಟಕ್ಕೆ ಸುಮ್ಮನಿರದೇ ಪತ್ನಿಯ ಅಂತ್ಯಕ್ರಿಯೆಗೂ ಯತ್ನಿಸಿದ್ದಾನೆ. ಈ ವೇಳೆ ಸ್ಮಶಾನಕ್ಕೆ ಎಂಟ್ರಿ ಕೊಟ್ಟ ಪೊಲೀಸರು ಪತಿಯನ್ನು ಬಂಧಿಸಿ ಎಳೆದೊಯ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ನಡೆದಿದೆ.
ಕೊಲೆಗೈದು ಪತ್ನಿಯ ಅಂತ್ಯಕ್ರಿಯೆ ವೇಳೆ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದ ಲಕ್ಷ್ಮಯ್ಯ ಎಂಬಾತ ತನ್ನ ಪತ್ನಿ ರಾಧಮ್ಮ (45) ಳನ್ನು ಕೊಲೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಪತ್ನಿಯ ಜೊತೆಗೆ ಗಲಾಟೆ ಮಾಡಿದ್ದ ಲಕ್ಷ್ಮಯ್ಯ ಗಲಾಟೆಯ ವೇಳೆ ಪತ್ನಿಯ ತಲೆಯನ್ನು ಗೋಡೆಗೆ ಗುಡ್ಡಿ ಕೊಲೆ ಮಾಡಿದ್ದಾನೆ.
ಬಳಿಕ ಕುಟುಂಬಸ್ಥರು ಸೇರಿ ಕೊಲೆ ಕೇಸ್ ಅನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹತ್ಯೆ ಮಾಡಿ ದೂರು ದಾಖಲಿಸದೆ ಅಂತ್ಯಕ್ರಿಯೆಗೆ ಯತ್ನಿಸಿದ್ದಾರೆ. ಕೊನೆ ಕ್ಷಣದಲ್ಲಿ ಪೊಲೀಸರು ಸ್ಮಶಾನಕ್ಕೆ ಎಂಟ್ರಿ ನೀಡಿ ಆರೋಪಿ ಪತಿ ಲಕ್ಷ್ಮಯ್ಯನನ್ನು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Kerala Horror: ಯುವಕನಿಂದ ಬರ್ಬರ ಹತ್ಯಾಕಾಂಡ; ಪ್ರೇಯಸಿಯನ್ನೂ ಸೇರಿಸಿ ಕುಟುಂಬದ ಐವರ ಕೊಲೆ