ಕರ್ನಾಟಕ ಬಜೆಟ್​ ವಿದೇಶ ಪುನೀತ್​ @ 50 ಫ್ಯಾಷನ್​ ಧಾರ್ಮಿಕ ಕ್ರೈಂ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

E-Prasad: ಮುಜರಾಯಿಯಿಂದ ಇ-ಪ್ರಸಾದ ಸೇವೆ: ಮನೆ ಬಾಗಿಲಿಗೆ ಬರಲಿದೆ ರಾಜ್ಯದ 400 ದೇಗುಲಗಳ ಪ್ರಸಾದ

ಮುಜರಾಯಿ ಇಲಾಖೆ ಈಗಾಗಲೇ ಇದರ ಪ್ರಯೋಗ ನಡೆಸುತ್ತಿದ್ದು, ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದವನ್ನು ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದುವರೆಗೂ ಅಂದಾಜು 25 ಸಾವಿರ ಭಕ್ತಾದಿಗಳು ಇ-ಪ್ರಸಾದ ಪಡೆದಿದ್ದಾರೆ.

ಮುಜರಾಯಿಯಿಂದ ಇ-ಪ್ರಸಾದ: ಮನೆ ಬಾಗಿಲಿಗೆ ಬರಲಿದೆ 400 ದೇಗುಲಗಳ ಪ್ರಸಾದ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 18, 2025 7:56 AM

ಬೆಂಗಳೂರು: ಮುಜರಾಯಿ ಇಲಾಖೆ (Muzrai Department) ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಿದೆ. ಇ-ಪ್ರಸಾದ (E-Prasad) ಸೇವೆ ಮೂಲಕ ರಾಜ್ಯದ 400 ದೇಗುಲಗಳ (Temples) ಪ್ರಸಾದ 15 ದಿನಗಳಲ್ಲಿ ಮನೆ ಬಾಗಿಲಿಗೆ ಬರಲಿದೆ. ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಈ ಹೊಸ ಪ್ರಯೋಗ ನಡೆಸಿದೆ. ಈ ಮೂಲಕ ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದ ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುವ ಪ್ರಯೋಗ ಆರಂಭಿಸಿತ್ತು. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

ಈಗ ಧನುರ್ಮಾಸ ಮುಗಿದು ಗೃಹಪ್ರವೇಶ, ನಾಮಕರಣ, ಮದುವೆ ಇತ್ಯಾದಿ ಶುಭ ಸಮಾರಂಭಗಳ ಸೀಸನ್ ಆರಂಭವಾಗಿದೆ. ಇಂತಹ ಶುಭ ಸಂದರ್ಭದಲ್ಲಿ ದೂರದ ಊರುಗಳಲ್ಲಿರುವ ದೇವಸ್ಥಾನಕ್ಕೆ ಹೋಗಿ ಪ್ರಸಾದ ತರುವುದು ಕಷ್ಟವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ದೂರದ ದೇವಸ್ಥಾನಗಳಿಗೆ ಹೋಗಿ, ಜನರ ದಟ್ಟಣೆಯ ನಡುವೆ ದೇವರ ದರ್ಶನ ಪಡೆಯುವುದು ಕಷ್ಟ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಮುಜರಾಯಿ ಸಿಹಿ ಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ದೇವರ ಪ್ರಸಾದ ತಲುಪಲಿದೆ.

ಮುಜರಾಯಿ ಇಲಾಖೆ ಈಗಾಗಲೇ ಇದರ ಪ್ರಯೋಗ ನಡೆಸುತ್ತಿದ್ದು, ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದವನ್ನು ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದುವರೆಗೂ ಅಂದಾಜು 25 ಸಾವಿರ ಭಕ್ತಾದಿಗಳು ಇ-ಪ್ರಸಾದ ಪಡೆದಿದ್ದಾರೆ. ಹೀಗಾಗಿ ಮುಂದಿನ 15 ದಿನಗಳಲ್ಲಿ ರಾಜ್ಯದ 400 ದೇವಾಲಯಗಳಲ್ಲಿ ಇ-ಪ್ರಸಾದ ಸೇವೆ ಆರಂಭಿಸುವ ಯೋಜನೆಯನ್ನು ಮುಜರಾಯಿ ಇಲಾಖೆ ಹಾಕಿಕೊಂಡಿದೆ.

ಇ-ಪ್ರಸಾದದ ಅನುಕೂಲಗಳು:

ವೃದ್ಧರು ಮನೆಯಲ್ಲೇ ಕುಳಿತು ತಮಗಿಷ್ಟವಾದ ದೇವಸ್ಥಾನದ ಪ್ರಸಾದ ತರಿಸಿಕೊಳ್ಳಬಹುದು.

ವಿಶೇಷಚೇತನರು, ಅಂಧರು ಹೀಗೆ ಹಲವರಿಗೆ ಈ ಸೇವೆ ತುಂಬಾ ಉಪಯೋಗವಾಗಲಿದೆ.

ವಿಶೇಷ ದಿನಗಳಲ್ಲಿ ದೇವಸ್ಥಾನಗಳಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ.

ಭಕ್ತರು ದೇವಸ್ಥಾನಕ್ಕೆ ಹೋದರೂ ಪ್ರಸಾದ ಸ್ವೀಕರಿಸುವುದು ಕಷ್ಟವಾಗುತ್ತದೆ

ಪುಟ್ಟ ಮಕ್ಕಳಿರುವ ಪೋಷಕರು, ಮನೆಯಿಂದ ಹೊರಬರಲಾಗದ ಗರ್ಭಿಣಿಯರು ಈ ಸೇವೆಯ ಮೂಲಕ ಪ್ರಸಾದ ಬುಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: Cauvery Aarti: ಗಂಗಾರತಿ ಮಾದರಿಯಲ್ಲಿ ಸ್ಯಾಂಕಿ ಕೆರೆಯಲ್ಲಿ 'ಕಾವೇರಿ ಆರತಿ'ಗೆ ಸಿದ್ದತೆ