Kannada Sahithya Sammelana: 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಂಟು ನಿರ್ಣಯಗಳ ಅಂಗೀಕಾರ
ಕನ್ನಡ ಭಾಷೆಯ ಉಳಿವು, ಬೆಳವಣಿಗೆ, ಕನ್ನಡ ಮಾಧ್ಯಮ ಶಿಕ್ಷಣದ ಬಲವರ್ಧನೆ ಹಾಗೂ ಸಾಹಿತ್ಯಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಆಶಯದೊಂದಿಗೆ ಈ ನಿರ್ಣಯಗಳನ್ನು ಸಮ್ಮೇಳನದಲ್ಲಿ ಅಂಗೀಕರಿಸಲಾಯಿತು. ಜಿಲ್ಲೆಯ ಕನ್ನಡಪರ ಬೇಡಿಕೆಗಳು ಮತ್ತು ಅಭಿವೃದ್ಧಿಯ ಆಶಯಗಳನ್ನು ಸರ್ಕಾರ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರುವ ಉದ್ದೇಶವನ್ನು ನಿರ್ಣಯಗಳು ಹೊಂದಿವೆ.
-
ಚಿಂತಾಮಣಿ: ನಗರದಲಿ ನಡೆದ 11ನೇ ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ(11th Kannada Sahithya Sammelana)ದ ಸಮಾರೋಪದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಶಿಕ್ಷಣ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಎಂಟು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸ ಲಾಯಿತು.
ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಗೋಲಗಲ್ಲು ಶಿವಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ನಿರ್ಣಯ ಮಂಡನೆ ಪ್ರಕ್ರಿಯೆಯಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಕನ್ನಡಿಗರ ಹಿತಾಸಕ್ತಿಗೆ ಪೂರಕವಾದ ಹಲವು ಮಹತ್ವದ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲು ನಿರ್ಧರಿಸ ಲಾಯಿತು.
ಸಮ್ಮೇಳನದಲ್ಲಿ ಅಂಗೀಕರಿಸಲಾದ ನಿರ್ಣಯಗಳು ಹೀಗಿವೆ:
1\. ಚಿಕ್ಕಬಳ್ಳಾಪುರ ಜಿಲ್ಲೆಯ ಗಡಿಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
2\. ಜಿಲ್ಲೆಯ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕು.
3\. ಶಾಲಾ-ಕಾಲೇಜುಗಳ ಪಠ್ಯಕ್ರಮ ಹಾಗೂ ಪಠ್ಯಪೂರಕ ಚಟುವಟಿಕೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಕಾರ್ಯಕ್ರಮಗಳನ್ನು ಸೇರ್ಪಡೆಗೊಳಿಸಬೇಕು.
4\. ಜಿಲ್ಲಾ ಕೇಂದ್ರ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮಗಳ ಪ್ರವೇಶ ದ್ವಾರಗಳಲ್ಲಿ ಕನ್ನಡ ಧ್ವಜ ಸ್ತಂಭಗಳನ್ನು ನಿರ್ಮಿಸಬೇಕು.
5\. ಎಚ್.ಎನ್. ವ್ಯಾಲಿಯಿಂದ ಬರುವ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣಗೊಳಿಸುವ ಕ್ರಮ ಕೈಗೊಳ್ಳುವುದರ ಜತೆಗೆ ಸಮಗ್ರ ನೀರಾವರಿ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಬೇಕು.
6\. ರಾಜ್ಯೀಯ ಹಾಗೂ ನಾಡಹಬ್ಬಗಳ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರ ಹೆಸರುಗಳನ್ನು ನಿಯಮಾನುಸಾರ ಆಹ್ವಾನ ಪತ್ರಿಕೆಗಳಲ್ಲಿ ನಮೂದಿಸಬೇಕು.
7\. ಮಾನವ ಸಂಬಂಧಗಳನ್ನು ಬೆಸೆಯುವಂತಹ ಅಂತರಂಗ ಚಟುವಟಿಕೆಗಳನ್ನು ಶಾಲಾ ಶಿಕ್ಷಣ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಮನ್ವಯಗೊಳಿಸಬೇಕು.
8\. ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಭವನ ಮತ್ತು ಸಾಹಿತ್ಯ ಅಧ್ಯಯನ ಕೇಂದ್ರಗಳನ್ನು ನಿರ್ಮಿಸಲು ಜಿಲ್ಲಾಡಳಿತವನ್ನು ಮನವಿ ಮಾಡಬೇಕು.
ಕನ್ನಡ ಭಾಷೆಯ ಉಳಿವು, ಬೆಳವಣಿಗೆ, ಕನ್ನಡ ಮಾಧ್ಯಮ ಶಿಕ್ಷಣದ ಬಲವರ್ಧನೆ ಹಾಗೂ ಸಾಹಿತ್ಯಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಆಶಯದೊಂದಿಗೆ ಈ ನಿರ್ಣಯಗಳನ್ನು ಸಮ್ಮೇಳನದಲ್ಲಿ ಅಂಗೀಕರಿಸಲಾಯಿತು. ಜಿಲ್ಲೆಯ ಕನ್ನಡಪರ ಬೇಡಿಕೆಗಳು ಮತ್ತು ಅಭಿವೃದ್ಧಿಯ ಆಶಯಗಳನ್ನು ಸರ್ಕಾರ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರುವ ಉದ್ದೇಶವನ್ನು ನಿರ್ಣಯಗಳು ಹೊಂದಿವೆ.