ಬೆಂಗಳೂರು: ವಾಗ್ಮಿ, ಚಿಂತಕ, ಅಂಕಣಕಾರ, ಬರಹಹಾರ ಮತ್ತು ಯುವ ಬ್ರಿಗೇಡ್ ಸಂಘಟನೆಯ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ (Chakravarti Soolibele) ಅವರಿಗೆ ಪಿತೃವಿಯೋಗವಾಗಿದೆ. ತಂದೆ ದೇವದಾಸ್ ಸುಬ್ರಾಯ ಶೇಟ್ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆಯನ್ನು ಸಲ್ಲಿಸಿದ್ದರು. ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ರಾಷ್ಟ್ರವಾದಿ ಚಿಂತಕ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರ ನಿಧನಕ್ಕೆ ಸಂತಾಪ ಕೋರುವೆ. ಮಾನ್ಯ ಚಕ್ರವರ್ತಿ ಸೂಲಿಬೆಲೆ ಅವರ ಕುಟುಂಬ ವರ್ಗದವರಿಗೆ ಈ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಟ್ವೀಟ್ ಮಾಡಿ, ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರ ಪೂಜ್ಯ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಓಂ ಶಾಂತಿ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Chakravarthy sulibele: ಧರ್ಮಸ್ಥಳ ಟಾರ್ಗೆಟ್ ಆಗಿದ್ದು ಹೇಗೆ?; ರಹಸ್ಯ ಬಿಚ್ಚಿಟ್ಟ ಸೂಲಿಬೆಲೆ
ಬಿಜೆಪಿ ಮಾಧ್ಯಮ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರೂ ಸಂತಾಪ ಸೂಚಿಸಿದ್ದು, ಸೂಲಿಬೆಲೆ ಅವರ ಪೂಜ್ಯ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ಕೇಳಿ ದುಖಃವಾಯಿತು ಎಂದು ಹೇಳಿದ್ದಾರೆ.