ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಹೊಸ ಪ್ರವಾಸೋದ್ಯಮ ನೀತಿ; ಮೆಚ್ಚುಗೆ ಸೂಚಿಸಿ ಸಿಎಂಗೆ ವಾಣಿಜ್ಯೋದ್ಯಮಿಗಳ ಅಭಿನಂದನೆ

New tourism policy: 2025-26ನೇ ಸಾಲಿನ ರಾಜ್ಯ ಬಜೆಟ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದೀಗ ಹೊಸ ಪ್ರವಾಸೋದ್ಯಮ ನೀತಿಗೆ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಹೊಸ ಪ್ರವಾಸೋದ್ಯಮ ನೀತಿಗೆ ವಾಣಿಜ್ಯೋದ್ಯಮಿಗಳ ಮೆಚ್ಚುಗೆ

Profile Prabhakara R Feb 21, 2025 1:58 PM

ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿಗೆ (new tourism policy) ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೊರಲ ಮೆಚ್ಚುಗೆ ವ್ಯಕ್ತವಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದ್ದಾರೆ. ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜತೆಗೆ ಉದ್ಯಮಗಳ ಬೆಳವಣಿಗೆಗೂ ಪೂರಕವಾಗಿದೆ ಎಂದು ಸರ್ಕಾರದ ನಿಲುವು ಮತ್ತು ತೀರ್ಮಾನವನ್ನು ಶ್ಲಾಘಿಸಿದ್ದಾರೆ. 2025-26ನೇ ಸಾಲಿನ ರಾಜ್ಯ ಬಜೆಟ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದಾರೆ.

ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನ ಶೇ.24 ರಷ್ಟು ಹಣ

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.‌ ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಹೇಳಿದ್ದಾರೆ.



ಯುಪಿಐ ಮೂಲಕ ಬಸ್‌ ಟಿಕೆಟ್‌ ಖರೀದಿಗೆ ವ್ಯವಸ್ಥೆ‌

ಬೆಂಗಳೂರು: ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಪ್ರಯಾಣಿಕರು ಹಾಗೂ ನಿರ್ವಾಹಕರ ನಡುವಿನ ಚಿಲ್ಲರೆ ಸಮಸ್ಯೆ ಪರಿಹರಿಸಲು ಸಾರಿಗೆ ಬಸ್‌ಗಳಲ್ಲಿ ಯುಪಿಐ ಮೂಲಕ ಟಿಕೆಟ್‌ ಖರೀದಿಗೆ ಸರ್ಕಾರ ಅವಕಾಶ ಕಲ್ಪಸಿದೆ. ಇದರಿಂದ ಪ್ರಯಾಣಿಕರು ಫೋನ್‌ ಪೇ, ಗೂಗಲ್‌ ಪೇ ಇನ್ನಿತರ ಯುಪಿಐ ಆ್ಯಪ್‌ಗಳಿಂದ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಟಿಕೆಟ್‌ ಖರೀದಿಸಬಹುದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌ ಯುಗ ಆರಂಭಗೊಂಡಿದೆ. ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಸುಖಕರವಾಗಿರಿಸಲು ಕ್ಯಾಶ್‌ಲೆಸ್‌ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Cabinet meeting: ಎಪಿಎಂಸಿ ತಿದ್ದುಪಡಿ ಮಸೂದೆ, ಅಧಿಕ ಬಡ್ಡಿ ನಿಷೇಧ ವಿಧೇಯಕ 2025ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರಿಗೆ ಎದುರಾಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ರಾಜ್ಯ ಸರ್ಕಾರ ಮುಕ್ತಿ ಹಾಡಿದ್ದು, ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಸುಖಕರವಾಗಿರಿಸಲು ಕ್ಯಾಶ್‌ಲೆಸ್‌ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ನೀವು ಗೂಗಲ್‌ಪೇ, ಫೋನ್ ಪೇ ಅಥವಾ ಇತರೆ ಯಾವುದೇ ಯುಪಿಐ ಆ್ಯಪ್ ಬಳಕೆ ಮಾಡುತ್ತಿದ್ದಲ್ಲಿ ಕ್ಯಾಷ್‌ನ ಚಿಂತೆ ಮರೆತು ನಿಶ್ಚಿಂತರಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.