viral video: ಮಹಾ ಕುಂಭಮೇಳದಲ್ಲೂ ಆರ್‌ಸಿಬಿಯದ್ದೇ ಹವಾ; ಕಪ್ ಗೆಲ್ಲಲು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಅಭಿಮಾನಿ
viral video: 18ನೇ ಆವೃತ್ತಿ ಆರಂಭಕ್ಕೂ ಮುನ್ನವೇ, ಬೆಂಗಳೂರು ಮೂಲದ ಅಭಿಮಾನಿಯೊಬ್ಬ ಆರ್‌ಸಿಬಿ ತಂಡಕ್ಕೆ ಒಳಿತಾಗಲಿ, ಈ ಬಾರಿ ತಂಡ ಕಪ್ ಗೆಲ್ಲುವಂತಾಗಲಿ ಎಂದು ಪ್ರಾರ್ಥಿಸಿ ಆರ್‌ಸಿಬಿ ಜೆರ್ಸಿಯನ್ನು ತ್ರಿವೇಣಿ ಸಂಗಮದಲ್ಲಿ 7 ಬಾರಿ ಮುಳುಗಿಸಿದ್ದಾರೆ.
ಪ್ರಯಾಗ್‌ರಾಜ್: 18ನೇ ಆವೃತ್ತಿಯ ಐಪಿಎಲ್(IPL 2025) ಟೂರ್ನಿ ಆರಂಭಕ್ಕೆ ಇನ್ನು ಕೇವಲ 2 ತಿಂಗಳು ಬಾಕಿ ಇದೆ. ಅಷ್ಟರಲ್ಲೇ ಆರ್‌ಸಿಬಿ(RCB) ಅಭಿಮಾನಿಯೊಬ್ಬ ಈ ಸಲವಾದರೂ ತಂಡ ಕಪ್ ಗೆಲ್ಲುವಂತಾಗಿ ಎಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಆರ್‌ಸಿಬಿ ಜರ್ಸಿ ತೊಟ್ಟು ತ್ರಿವೇಣಿ ಸಂಗಮದಲ್ಲಿ 7 ಬಾರಿ ಮಿಂದೆದ್ದಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video) ಆಗಿದೆ.
17 ಆವೃತ್ತಿ ಕಳೆದರೂ ಐಪಿಎಲ್‌ನಲ್ಲಿ ಆರ್‌ಸಿಬಿ ಇದುವರೆಗೂ ಒಂದೇ ಒಂದು ಕಪ್ ಗೆದಿಲ್ಲ. ಆದರೆ ತಂಡದ ಮೇಲೆ ಅಭಿಮಾನಿಗಳಿರುವ ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆಯಾಗಿಲ್ಲ. ಇಂದಲ್ಲದಿದ್ದರೂ ನಾಳೆ ಕಪ್ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸದಲ್ಲಿ ಪ್ರತಿ ಬಾರಿಯ ಆವೃತ್ತಿಯಲ್ಲಿಯೂ 'ಈ ಸಲ ಕಪ್ ನಮ್ದೇ' ಎಂಬ ಘೋಷಣೆಯೊಂದಿಗೆ ತಂಡಕ್ಕೆ ದೊಡ್ಡ ಮಟ್ಟದಲ್ಲಿ ಬೆಂಬಲ ಸೂಚಿಸುತ್ತಾರೆ.
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈಗಾಗಲೇ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಭಾಗವಹಿಸಿ ಪವಿತ್ರ ಸ್ನಾನ ಮಾಡಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ಎಂಬ ಮೂರು ನದಿಗಳ ಸಂಗಮವನ್ನು ತ್ರಿವೇಣಿ ಸಂಗಮ ಎಂದು ಕರೆಯಲಾಗುತ್ತದೆ. ಈ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರೆ ಪಾಪಗಳೆಲ್ಲಾ ತೊಳೆದು ಹೋಗಿ ಮೋಕ್ಷ ಪ್ರಾಪ್ತಿಯಾಗಲಿದೆ ಎಂಬ ನಂಬಿಕೆ ನೂರಾರು ವರ್ಷಗಳಿಂದ ಚಾಲ್ತಿಯಲ್ಲಿದೆ. ಇದೀಗ 18ನೇ ಆವೃತ್ತಿ ಆರಂಭಕ್ಕೂ ಮುನ್ನವೇ, ಬೆಂಗಳೂರು ಮೂಲದ ಅಭಿಮಾನಿಯೊಬ್ಬ ಆರ್‌ಸಿಬಿ ತಂಡಕ್ಕೆ ಒಳಿತಾಗಲಿ, ಈ ಬಾರಿ ತಂಡ ಕಪ್ ಗೆಲ್ಲುವಂತಾಗಲಿ ಎಂದು ಪ್ರಾರ್ಥಿಸಿ ಆರ್‌ಸಿಬಿ ಜೆರ್ಸಿಯನ್ನು ತ್ರಿವೇಣಿ ಸಂಗಮದಲ್ಲಿ 7 ಬಾರಿ ಮುಳುಗಿಸಿದ್ದಾರೆ.
ಆರ್‌ಸಿಬಿ ತಂಡ
ವಿರಾಟ್ ಕೊಹ್ಲಿ,ರಜತ್ ಪಾಟೀದಾರ್, ಯಶ್ ದಯಾಳ್,ಜೋಶ್ ಹ್ಯಾಸಲ್ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮ, ಲಿಯಾಮ್ ಲಿವಿಂಗ್ಸ್ಟೋನ್, ರಸಿಕ್ ಸಲಾಂ, ಸುಯಶ್ ಶರ್ಮ, ಭುವನೇಶ್ವರ್ ಕುಮಾರ್,ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ನುವಾನ್ ತುಷಾರ, ರೊಮಾರಿಯೊ ಶೆರ್ಡ್, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕರ, ಮೋಹಿತ್ ರಾಥೀ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ.