WTC Final Tickets: ನಾಳೆಯಿಂದ ವಿಶ್ವ ಟೆಸ್ಟ್ ಫೈನಲ್ ಪಂದ್ಯದ ಟಿಕೆಟ್ ಮಾರಾಟ ಆರಂಭ
ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯ ತಂಡವು 2023ರಲ್ಲಿ ದಿ ಓವಲ್‌ನಲ್ಲಿ ಭಾರತವನ್ನು ಮಣಿಸಿ ಗೆದ್ದಿರುವ ಡಬ್ಲ್ಯುಟಿಸಿ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಎದುರು ನೋಡುತ್ತಿದ್ದರೆ, ಅತ್ತ ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು ಚೊಚ್ಚಲ ಐಸಿಸಿ ಟ್ರೋಫಿಯೊಂದನ್ನು ಗೆಲ್ಲುವ ವಿಶ್ವಾಸದಲ್ಲಿದೆ.

WTC Final

ದುಬೈ: ಜೂನ್ 11ರಿಂದ ಪ್ರತಿಷ್ಠಿತ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯುಟಿಸಿ)ಫೈನಲ್ ಪಂದ್ಯದ ಟಿಕೆಟ್‌ಗಳ(WTC Final Tickets) ಮಾರಾಟ ನಾಳೆ(ಶುಕ್ರವಾರ)ಯಿಂದ ಆರಂಭಗೊಳ್ಳಲಿದೆ ಎಂದು ಅಂತಾರಾಷ್ಟ್ರಿಯ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿದೆ.
ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಹಾಲಿ ಚಾಂಪಿಯನ್ ಆಸ್ಟ್ರೇಲಿಯ ತಂಡಗು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಇತ್ತೀಚೆಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ತಂಡವನ್ನು 3-1 ಅಂತರದಿಂದ ಮಣಿಸಿ ಆಸ್ಟ್ರೇಲಿಯಾ ತಂಡ ಫೈನಲ್ ಪ್ರವೇಶಿಸಿತ್ತು. ದಕ್ಷಿಣ ಆಫ್ರಿಕಾ ತಂಡ ತವರಿನಲ್ಲಿ ಪಾಕಿಸ್ತಾನವನ್ನು 2-0 ಅಂತರದಿಂದ ಮಣಿಸಿ ಚೊಚ್ಚಲ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿತ್ತು.
ಡಬ್ಲ್ಯುಟಿಸಿ ಫೈನಲ್ ಪಂದ್ಯದ ಟಿಕೆಟ್‌ಗಳ ಮಾರಾಟ ಪ್ರಕ್ರಿಯೆಯು ಜನವರಿ 31ರಂದು ಭಾರತದ ಕಾಲಮಾನ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. ಈ ವರ್ಷದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಟಿಕೆಟ್ ದರವು ವಯಸ್ಕರಿಗೆ 45 ಪೌಂಡ್ ಹಾಗೂ 16 ವರ್ಷದೊಳಗಿನವರಿಗೆ 15 ಪೌಂಡ್‌ನಿಂದ ಆರಂಭವಾಗಲಿದೆ. ಟಿಕೆಟ್‌ಗಳನ್ನು 'ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಡಾಟ್‌ಕಾಮ್'ನಲ್ಲಿ ಖರೀದಿಸಬಹುದು.
ಇದನ್ನೂ ಓದಿ ಚಾಂಪಿಯನ್ಸ್ ಟ್ರೋಫಿಗೆ ಬುಮ್ರಾ ಅನುಮಾನ?; ಬದಲಿ ಬೌಲರ್ ಸಿದ್ಧಪಡಿಸಿದ ಬಿಸಿಸಿಐ!
ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯ ತಂಡವು 2023ರಲ್ಲಿ ದಿ ಓವಲ್‌ನಲ್ಲಿ ಭಾರತವನ್ನು ಮಣಿಸಿ ಗೆದ್ದಿರುವ ಡಬ್ಲ್ಯುಟಿಸಿ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಎದುರು ನೋಡುತ್ತಿದ್ದರೆ, ಅತ್ತ ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು ಚೊಚ್ಚಲ ಐಸಿಸಿ ಟ್ರೋಫಿಯೊಂದನ್ನು ಗೆಲ್ಲುವ ವಿಶ್ವಾಸದಲ್ಲಿದೆ.
Mark your calendars 🗓️
— ICC (@ICC) January 29, 2025
Ticket sale dates for the epic #WTC25 Final between Australia and South Africa are out 👀https://t.co/qZVkCX5YYJ
ಸ್ಮರಣೀಯ ನೆನಪುಗಳನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣಕ್ಕೆ ವಾಪಸಾಗಲು ನಮಗೆ ತುಂಬಾ ಸಂತೋಷವಾಗುತ್ತಿದೆ. ಕಳೆದ ಋತುವಿನಲ್ಲಿ ಲಂಡನ್‌ನಲ್ಲಿ ಪ್ರೇಕ್ಷಕರು ನಮಗೆ ಸಾಕಷ್ಟು ಬೆಂಬಲ ನೀಡಿದ್ದರು. ಈ ಬಾರಿಯೂ ಇದೇ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.