ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur Crime: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಬಳಿ ಮಂಗಳ ವಾರ ನಡೆದಿದೆ. ಬಾಗೇಪಲ್ಲಿ ಕಡೆಯಿಂದ ಚಿಂತಾಮಣಿಗೆ ತೇರುಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮಿಟ್ಟೇಮರಿ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಬಳಿ ಅಪಘಾತ ನಡೆದಿದೆ

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

Profile Ashok Nayak Mar 11, 2025 10:13 PM

ಬಾಗೇಪಲ್ಲಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಬಳಿ ಮಂಗಳ ವಾರ ನಡೆದಿದೆ. ಬಾಗೇಪಲ್ಲಿ ಕಡೆಯಿಂದ ಚಿಂತಾಮಣಿಗೆ ತೇರುಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮಿಟ್ಟೇಮರಿ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಬಳಿ ಅಪಘಾತ ನಡೆದಿದೆ.ಅಪಘಾದ ರಭಸಕ್ಕೆ  ಬೈಕ್ ಸಂಪೂರ್ಣ ಜಖಂಗೊಂಡಿದೆ. ಬಸ್ಸಿಗೆ ಅಂಟಿಕೊಂಡಿದೆ.

ಇದನ್ನೂ ಓದಿ: Crime News: ಕೃಷಿ ಹೊಂಡದಲ್ಲಿ ಕರೆಂಟ್‌ ಶಾಕ್‌ ಹೊಡೆದು ಮೂವರು ಸಾವು

ಈ ಘಟನೆಯಲ್ಲಿ ಮಿಟ್ಟೇಮರಿಯ ವೆಂಕಟಾಚಲಪತಿಯವರ ಮಗ ರಂಜಿತ ಕುಮಾರ್ (28) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪಟ್ಟಣದ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಪ್ರಶಾಂತ್ ವರ್ಣಿ ಮತ್ತಿತರರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ದೇಹವನ್ನು ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದರಿಂದಾಗಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.