ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basangouda Patil Yatnal: ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ: ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್‌

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಶಾಸಕ ಯತ್ನಾಳ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ನಟಿ ರನ್ಯಾ ಬಗ್ಗೆ ಅವಾಚ್ಯ ಪದ ಬಳಕೆ: ಯತ್ನಾಳ್ ವಿರುದ್ಧ ಎಫ್‌ಐಆರ್‌

Profile Prabhakara R Mar 18, 2025 9:50 PM

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ (Ranya Rao) ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda R Patil) ಅವರು ನಟಿ ರನ್ಯಾ ರಾವ್ ಕುರಿತು ಅವಾಚ್ಯ ಪದ ಬಳಸಿದ್ದು, ಅವರ ತೇಜೋವಧೆ ಮಾಡಿದ್ದಾರೆ ಎಂದು ಅಕುಲ ಅನುರಾಧ ಎನ್ನುವವರು ದೂರು ನೀಡಿದ್ದರು. ಹೀಗಾಗಿ ಬೆಂಗಳೂರಿನ ಹೈ ಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಯತ್ನಾಳ್‌ ವಿರುದ್ಧ ಬಿಎನ್‌ಎಸ್ ಸೆಕ್ಷನ್ 79ರ ಅಡಿ ದೂರು ದಾಖಲಾಗಿತ್ತು. ಅಕುಲ ಅನುರಾಧ ಅವರ ದೂರಿನ ಅನ್ವಯ ಹೈ ಗೌಂಡ್ಸ್ ಠಾಣೆಯ ಪೊಲೀಸರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ | Namma Metro: ನಮ್ಮ ಮೆಟ್ರೋದಲ್ಲಿ ಕನ್ನಡೇತರರ ನೇಮಕಾತಿ, ಸೂಚನೆ ಹಿಂಪಡೆದ ಬಿಎಂಆರ್‌ಸಿಎಲ್‌

ರನ್ಯಾ ರಾವ್‌ ಪ್ರಕರಣ; ಡಿಜಿಪಿ ರಾಮಚಂದ್ರರಾವ್‌ಗೆ ಕಡ್ಡಾಯ ರಜೆ ನೀಡಿದ ಸರ್ಕಾರ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮಲ ಮಗಳು ರನ್ಯಾ ರಾವ್‌ಗೆ ( Ranya Rao case) ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ (DGP Ramachandra Rao) ಅವರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ರಾಜ್ಯ ಸರ್ಕಾರ ಇತ್ತೀಚೆಗೆ ಸೂಚಿಸಿತ್ತು.

ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡದೇ ರಾಜ್ಯ ಸರ್ಕಾರ ಶನಿವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕೆ. ರಾಮಚಂದ್ರರಾವ್ ಅವರು ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಗೃಹ ನಿರ್ಮಾಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಹಿರಿಯ ಪೊಲೀಸ್ ಅಧಿಕಾರಿ ಕೆ. ವಿ. ಶರತ್ ಚಂದ್ರ ಅವರನ್ನು ನೇಮಿಸಲಾಗಿತ್ತು. ಶರತ್ ಚಂದ್ರ ಅವರು ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಡಿಐಜಿಯಾಗಿದ್ದು, ಪೊಲೀಸ್ ಹೌಸಿಂಗ್ ಕಾರ್ಪೊರೇಶನ್ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಗೆ ಕಾನೂನು ಬಾಹಿರವಾಗಿ ಶಿಷ್ಟಾಚಾರ (ಪ್ರೋಟೋಕಾಲ್‌) ಸೌಲಭ್ಯ ಸಿಕ್ಕ ವಿಚಾರ ಬಯಲಾಗಿ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಡಿಜಿಪಿ ರಾಮಚಂದ್ರರಾವ್ ವಿರುದ್ಧ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಈ ಮಧ್ಯೆ ಅವರ ಮಲ ಮಗಳ ಮನೆ ಮೇಲೆ ಇ.ಡಿ ಕೂಡ ದಾಳಿ ನಡೆಸಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಡಿಜಿಪಿ ಅವರನ್ನು ಸರ್ಕಾರ ರಜೆ ಮೇಲೆ ಕಳುಹಿಸಿದೆ.