KS Eshwarappa: ಅಕ್ರಮ ಆಸ್ತಿ ಗಳಿಕೆ ಆರೋಪ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್‌ಐಆರ್ ದಾಖಲು
KS Eshwarappa: ಕೆ.ಎಸ್. ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ವೇಳೆ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು.


ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa), ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಸೂಚನೆ ಬಳಿಕ ಲೋಕಾಯುಕ್ತ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಚಾರಣೆಗಾಗಿ ಲೋಕಾಯುಕ್ತದ ಮುಂದೆ ಹಾಜರಾಗುವಂತೆ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕುಟುಂಬಸ್ಥರಿಗೆ ನೋಟಿಸ್ ನೀಡಲಾಗಿದೆ. ಇನ್ನು ದೂರು ನೀಡಿದ್ದ ವಕೀಲ ವಿನೋದ್‌ಗೆ ದಾಖಲಾತಿ ಸಲ್ಲಿಸಲು ನೋಟಿಸ್ ಕೊಡಲಾಗಿದೆ.
ಏನಿದು ಪ್ರಕರಣ
ಕೆ.ಎಸ್. ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ವೇಳೆ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(1)(ಡಿ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ 1860ರ ಕಲಂ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ದೂರುದಾರ ಬಿ. ವಿನೋದ್ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋಧ್ ಹೈಕೋರ್ಟ್ ಮೆಟ್ಟಿಲೇರಿದ್ದು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿನ ಮರು ಪರಿಗಣನೆಗೆ ಆದೇಶಿಸಿತ್ತು.
ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ವಿರುದ್ಧ ಕೇಸ್

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ (BJP MLC N Ravikumar) ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೆ.ಪಿ.ನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 351(3), 75(3), 79 ಅಡಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸಭಾಪತಿಗಳಿಗೂ ದೂರು
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ (Chief secretary) ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗ ಸಭಾಪತಿಗಳಿಗೆ ದೂರು ನೀಡಿದೆ. ರವಿಕುಮಾರ್ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳ ವಿರುದ್ಧವೂ ಇದೇ ರೀತಿ ಮಾತನಾಡಿದ್ದರು. ಅವರನ್ನು ಎಂಎಲ್ಸಿ ಸ್ಥಾನದಿಂದ ರವಿಕುಮಾರ್ ಅವರನ್ನು ವಜಾಗೊಳಿಸಿ ಎಂದು ಮನವಿ ಮಾಡಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ ನೇತೃತ್ವದ ನಿಯೋಗ ಸಭಾಪತಿಗಳನ್ನು ಭೇಟಿಯಾಗಿ ಮನವಿ ನೀಡಿದೆ. ಬಿಜೆಪಿ ಎಂಎಲ್‌ಸಿ ರವಿಕುಮಾರ್ ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ. ಇತ್ತೀಚೆಗೆ ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸರ್ಕಾರದ ಸಿಎಸ್ ಶಾಲಿನಿ ರಜನಿಶ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ.
ಈ ಸುದ್ದಿಯನ್ನೂ ಓದಿ | N Ravikumar: ಸಿಎಸ್ ಕುರಿತು ಅವಹೇಳನ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು
ಜೂನ್ 30ರಂದು ಪ್ರತಿಭಟನೆ ವೇಳೆ ಶಾಲಿನಿ ರಜನೀಶ್ ಅವರನ್ನು ರವಿಕುಮಾರ್ ನಿಂದಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಸ್‌ಗೆ ದೂರು ಕೊಡಲು ನಿಯೋಗ ತೆರಳಿತ್ತು. ಈ ವೇಳೆ ರವಿಕುಮಾರ್ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ಕಲಬುರಗಿ ಜಿಲ್ಲಾಧಿಕಾರಿಯ ವಿರುದ್ಧ ಅವರು ನಾಲಿಗೆ ಹರಿಬಿಟ್ಟಿದ್ದರು. ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರಾ ಎಂದು ಹೇಳಿಕೆ ನೀಡಿದ್ದರು. ಇದೀಗ ಸಿಎಸ್ ವಿರುದ್ಧ ಮಾತನಾಡಿರುವ ಹಿನ್ನೆಲೆಯಲ್ಲಿ ಸಭಾಪತಿಗೆ ರವಿಕುಮಾರ್ ವಿರುದ್ಧ ದೂರು ನೀಡಲಾಗಿದೆ.