ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KFD disease: ಮಂಗನಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ, ಮಹಿಳೆ ಸಾವು

ತೀರ್ಥಹಳ್ಳಿ ತಾಲೂಕನ ಕೊನೇರಿಪುರ ಗ್ರಾಮದ ಮಹಿಳೆಯೊಬ್ಬರು ಹಲವು ದಿನಗಳಿಂದ ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಂಗನ ಕಾಯಿಲೆ ಎಂದೇ ಕರೆಯಲಾಗುವ ಕ್ಯಾಸನೂರು ಕಾಡಿನ ಕಾಯಿಲೆ (KFD) ಈ ವರ್ಷದ ಮೊದಲ ಬಲಿ ಪಡೆದಿದೆ.

ಮಂಗನಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ, ಮಹಿಳೆ ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Feb 26, 2025 6:35 AM

ಶಿವಮೊಗ್ಗ: ಶಿವಮೊಗ್ಗ (Shivamogga news) ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ (KFD disease) ಈ ವರ್ಷದ ಮೊದಲ ಬಲಿ (Death) ಸಂಭವಿಸಿದೆ. 54 ವರ್ಷದ ಮಹಿಳೆ ಕೆಎಫ್‌ಡಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕನ ಕೊನೇರಿಪುರ ಗ್ರಾಮದ ಮಹಿಳೆಯೊಬ್ಬರು ಹಲವು ದಿನಗಳಿಂದ ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಜ.23ರಂದು ಮಹಿಳೆಗೆ ಕೆಎಫ್‌ಡಿ ಪಾಸಿಟಿವ್‌ ಬಂದಿತ್ತು. ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಸುಧಾರಣೆ ಕಾಣದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಜ.29ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕೆಎಫ್‌ಡಿ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆ ಫೆ.5ರಂದು ಪುನಃ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ. ಮಂಗನ ಕಾಯಿಲೆ ಎಂದೇ ಕರೆಯಲಾಗುವ ಕ್ಯಾಸನೂರು ಕಾಡಿನ ಕಾಯಿಲೆ (KFD) ಈ ವರ್ಷದ ಮೊದಲ ಬಲಿ ಪಡೆದಿದೆ.

ಸಾಲಿಗರ ಕಿರುಕುಳಕ್ಕೆ ಇನ್ನೊಂದು ಬಲಿ

ಕೊಪ್ಪಳ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ (Micro finance) ಸೇರಿದಂತೆ ಸಾಲ (Loan) ನೀಡಿದವರ ಕಿರುಕುಳಕ್ಕೆ (Harassment) ಮತ್ತೊಂದು ಬಲಿಯಾಗಿದ್ದು, ಕೊಪ್ಪಳ (Koppala News) ಜಿಲ್ಲೆಯಲ್ಲಿ ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಹಾಳ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯಂಕಪ್ಪ ಬಂಗಿ (38) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿನ್ನೆ ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿಗಳು. ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (14) ಎಂಬವರು ಮಂಡ್ಯ ತಾಲೂಕಿನ ವಿ ಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಮಾಸ್ತಪ್ಪ ವಿವಿಧಡೆ ಒಟ್ಟು 12 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಯಲು ಸುಗ್ರೀವಾಜ್ಞೆ ತಂದರೂ ಆತ್ಮಹತ್ಯೆಗಳು ನಿಂತಿಲ್ಲ.

ಇದನ್ನೂ ಓದಿ: Elephant Attack: ಬೇಲೂರಿನಲ್ಲಿ ಕಾಡಾನೆ ದಾಳಿಗೆ ಯುವಕ ಬಲಿ