GBS virus: ಜಿಬಿಎಸ್ ವೈರಸ್‌ಗೆ ಕರ್ನಾಟಕದಲ್ಲಿ ಮೊದಲ ಬಲಿ, ಬೆಳಗಾವಿಯಲ್ಲಿ ವೃದ್ಧ ಸಾವು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 64 ವರ್ಷದ ವೃದ್ದರೊಬ್ಬರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶನಿವಾರ ಗುಯಿಲೆನ್ ಬಾರ್ ಸಿಂಡ್ರೋಮ್ ವೈರಸ್‌ನಿಂದ ಸಾವಿಗೀಡಾಗಿದ್ದಾರೆ. ದೋನೆವಾಡಿ ಗ್ರಾಮದ ಯೆತಿಲ್ ಬಾಳಗೊಂಡ ಪಾಟೀಲ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಇದು ರಾಜ್ಯದಲ್ಲಿ ಈ ವೈರಸ್‌ಗೆ ಮೊದಲ ಬಲಿ ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ

ಬೆಳಗಾವಿ: ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಗುಯಿಲಿನ್ ಬಾರ್ ಸಿಂಡ್ರೋಮ್ (GBS virus)ಗೆ ಕರ್ನಾಟಕದಲ್ಲಿ (Karnataka) ಒಬ್ಬ ವ್ಯಕ್ತಿ (death) ಬಲಿಯಾಗಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿಯ 64 ವರ್ಷದ ವೃದ್ದರೊಬ್ಬರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶನಿವಾರ ಈ ವೈರಸ್ ನಿಂದ ಸಾವಿಗೀಡಾಗಿದ್ದಾರೆ. ದೋನೆವಾಡಿ ಗ್ರಾಮದ ಯೆತಿಲ್ ಬಾಳಗೊಂಡ ಪಾಟೀಲ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಇದು ಈ ಕಾಯಿಲೆಗೆ ರಾಜ್ಯದವರು ಬಲಿಯಾದ ಮೊದಲ ಪ್ರಕರಣ. ಇದರೊಂದಿಗೆ ಕರ್ನಾಟಕ ಅಕ್ಕಪಕ್ಕದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈಗಾಗಲೇ ಈ ವ್ಯಾಧಿ ಕಾಣಿಸಿಕೊಂಡಿದೆ.
ಇದು ಸಾಂಕ್ರಾಮಿಕ ಅಲ್ಲ, ಭಾರೀ ಪ್ರಮಾಣದಲ್ಲಿ ಮಾರಣಾಂತಿಕವೂ ಅಲ್ಲ. ಸೋಂಕಿಗೆ ನಿಖರ ಕಾರಣ ಏನೆಂಬುದು ಇದುವರೆಗೂ ಖಚಿತವಾಗದ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಈ ಕುರಿತು ಆತಂಕ ಉಂಟಾಗಿದೆ.ಈಗಾಗಲೇ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಹಾಗೂ ಮುಂಬೈನಲ್ಲಿ ಇಬ್ಬರು ವ್ಯಕ್ತಿಗಳು ಜಿಬಿಎಸ್ ವೈರಸ್‌ನಿಂದ ಸಾವನ್ನಪ್ಪಿದ್ದಾರೆ. ಇದೀಗ ಈ ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ 64 ವರ್ಷದ ವೃದ್ಧರ ಸಾವಾಗಿದೆ. ಹಾಗಾಗಿ ಜನರಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನೂ ಓದಿ: GBS Cases: ಮಹಾರಾಷ್ಟ್ರದಲ್ಲಿ ನಿಲ್ಲದ ಜಿಬಿಎಸ್ ಅಬ್ಬರ – ಇಲ್ಲಿಯವರೆಗೆ 167 ಪ್ರಕರಣ ಪತ್ತೆ