Road Accident: ಸುರಪುರದಲ್ಲಿ ಬಸ್-ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರ ಸಾವು
Road Accident: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳ್ಳಿ ಬುಧವಾರ ಭೀಕರ ಅಪಘಾತ ನಡೆದಿದೆ. ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಯಾದಗಿರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ (Road Accident) ಸುರಪುರ ತಾಲೂಕಿನ ತಿಂಥಣಿ ಬಳ್ಳಿ ಬುಧವಾರ ನಡೆದಿದೆ. ಹನುಮಂತ ಆಂಜನೇಯ (35), ಗಂಗಮ್ಮ (28), ಹಣಮಂತ (1), ಹನುಮಂತನ ಸಹೋದರನ ಮಕ್ಕಳಾದ ಪವಿತ್ರಾ (5) ಹಾಗೂ ರಾಯಪ್ಪ (3) ಮೃತರು. ಮೃತರೆಲ್ಲರೂ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದವರಾಗಿದ್ದಾರೆ.
ಘಟನೆ ವಿವರ
ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಗುದ್ದಿದ ರಭಸಕ್ಕೆ ಸ್ಥಳದಲ್ಲಿ ಮೂವರು ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಸುರಪುರ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಬೈಕ್ ಚಾಲಕ ಲಾರಿ ಹಿಂದಿಕ್ಕಲು ಹೋಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಘಟನಾ ಸ್ಥಳಕ್ಕೆ ಎಸ್ಪಿ, ಸುರಪುರ ಡಿವೈಎಸ್ಪಿ, ಸಿಪಿಐ, ಸುರಪುರ, ಪಿಐ ಭೇಟಿ ನೀಡಿ ಪರಿಶೀಲಿಸಿದರು.
ದೇವರ ಕಾರ್ಯಕ್ರಮಕ್ಕೆ ಹೊರಟ್ಟವರು ಮಸಣ ಸೇರಿದರು
ಮೃತ ಹಣಮಂತ ಅವರು ಗುರುಗುಂಟಾದಿಂದ ಹಲವಾರು ವರ್ಷಗಳಿಂದ ಶಹಾಪುರ ತಾಲೂಕಿನ ಹಳಿಸಗರ ಗ್ರಾಮಕ್ಕೆ ಬಂದು ಗಂಗಮ್ಮರನ್ನು ವಿವಾಹವಾಗಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿದ್ದ ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕೆಂದು ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಗುರುಗುಂಟಾ ಗ್ರಾಮಕ್ಕೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಮಸಣ ಸೇರಿದ್ದಾರೆ.
ಈ ಸುದ್ದಿಯನ್ನೂ ಓದಿ | Rahul Dravid: ಬೆಂಗಳೂರಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!
ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿ!
ಬೆಂಗಳೂರು: ಅನೈತಿಕ ಸಂಬಂಧ ಶಂಕೆಯಿಂದ ನಡುರಸ್ತೆಯಲ್ಲೇ ಪತ್ನಿಯನ್ನು ಪತಿ ಏಳೆಂಟು ಬಾರಿ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ (Murder Case) ಮಾಡಿರುವ ಘಟನೆ ಆನೇಕಲ್‌ನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಶ್ರೀಗಂಗಾಗೆ (29) ಕೊಲೆಯಾದವರು. ಮೋಹನ್ ರಾಜ್ (32) ಆರೋಪಿ. ಬೆಳಗ್ಗೆ ಮಗನನ್ನು ಶಾಲೆಗೆ ಬಿಡಲು ಬಂದಿದ್ದ ಪತ್ನಿಯನ್ನು ಮೋಹನ್ ರಾಜ್ ರಸ್ತೆ ಮಧ್ಯೆ ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ದಂಪತಿಗೆ 7 ವರ್ಷಗಳ ಹಿಂದೆ ಮದುವೆಯಾಗಿತ್ತು. ಆದರೆ ಶ್ರೀಗಂಗಾ ತನ್ನ ಸ್ನೇಹಿತನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂಬ ಶಂಕೆಯಿಂದಾಗಿ ಮೋಹನ್ ರಾಜ್ ಪದೇ ಪದೇ ಜಗಳ ತೆಗೆಯುತ್ತಿದ್ದ. ಹೀಗಾಗಿ ಶ್ರೀಗಂಗೆ 8 ತಿಂಗಳಿನಿಂದ ಪತಿಯಿಂದ ದೂರವಾಗಿದ್ದಳು. ಆದರೆ ನಿನ್ನೆ ರಾತ್ರಿ ಮೋಹನ್ ರಾಜ್ ತನ್ನ ಮಗುವನ್ನು ನೋಡಲು ಮನೆಗೆ ಬಂದಿದ್ದ. ಆಗ ಕೂಡ ಇಬ್ಬರ ಮಧ್ಯೆ ಜಗಳವಾಗಿತ್ತು.
ಈ ಸುದ್ದಿಯನ್ನೂ ಓದಿ | Assault Case: ಹೋಟೆಲ್‌ನಲ್ಲಿ ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಗ್ರಾಹಕನ ಮೇಲೆ ಹಿಂದಿ ಭಾಷಿಕರ ಹಲ್ಲೆ!
ಬುಧವಾರ ಪತ್ನಿಯನ್ನು ಕೊಲ್ಲಲೇಬೇಕೆಂಬ ಉದ್ದೇಶದಿಂದ ಮೋಹನ್ ರಾಜ್ ಚೂರಿ ಸಮೇತ ಹೋಗಿದ್ದಿ, ಪತ್ನಿಯ ಮೇಲೆ ಹಲ್ಲೆ ಮಾಡಿ ಕೊಂದಿದ್ದಾನೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಶ್ರೀಗಂಗಾಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಆರೋಪಿ ಮೋಹನ್ ರಾಜ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.