ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Child trafficking racket: ಅವಿವಾಹಿತೆಗೆ ಜನಿಸಿದ ಮಗು 60 ಸಾವಿರಕ್ಕೆ ಮಾರಾಟ; ಅಂಗನವಾಡಿ ಕಾರ್ಯಕರ್ತೆ ಸೇರಿ ಐವರ ಬಂಧನ

Kunigal News: ಮಾಗಡಿಯ 21 ವರ್ಷದ ಅವಿವಾಹಿತೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿ, ಮಗುವನ್ನು ಕರೆದೊಯ್ಯಲು ನಿರಾಕರಿಸಿದ್ದಳು. ಆಕೆಯ ಪ್ರಿಯಕರ ಅಂಗನವಾಡಿ ಕಾರ್ಯಕರ್ತೆ ಮೂಲಕ ಮಗುವನ್ನು ಮಾರಾಟ ಮಾಡಿದ್ದ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ.

60 ಸಾವಿರಕ್ಕೆ ನವಜಾತ ಶಿಶು ಮಾರಾಟ; ಅಂಗನವಾಡಿ ಕಾರ್ಯಕರ್ತೆ ಸೇರಿ ಐವರ ಬಂಧನ

Profile Prabhakara R Feb 25, 2025 10:26 PM

ಕುಣಿಗಲ್: ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ 60 ಸಾವಿರಕ್ಕೆ ನವಜಾತ ಶಿಶು ಮಾರಾಟಕ್ಕೆ (Child trafficking racket) ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಫೆ. 20ರಂದು ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ರಾಮನಗರ ಜಿಲ್ಲೆಯ ಮಾಗಡಿಯ 21 ವರ್ಷದ ಅವಿವಾಹಿತೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿ, ಮಗುವನ್ನು ಕರೆದೊಯ್ಯಲು ನಿರಾಕರಿಸಿದ್ದಳು. ಆಕೆಯ ಪ್ರಿಯಕರ ಅಂಗನವಾಡಿ ಕಾರ್ಯಕರ್ತೆ ಮೂಲಕ ಮಗುವನ್ನು ಮಾರಾಟ ಮಾಡಿದ್ದ. ಈ ವಿಚಾರ ತಿಳಿದ ಕೂಡಲೇ ಯುವತಿಯ ಪೋಷಕರು ಮಗು ವಾಪಸ್ ಪಡೆಯಲು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಶಿಶು ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ.

ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಹಾಗೂ ಆಕೆಯ ಪ್ರಿಯಕರ ಶ್ರೀನಂದ ಎಂಬಾತ ಮಗುವನ್ನು ಮಾರಾಟ ಮಾಡೋಣ ಎಂದು ನಿರ್ಧರಿಸಿದ್ದರು. ಆದರಂತೆ ಶ್ರೀನಂದ ಮಾಗಡಿಯ ಜ್ಯೋತಿ ಎಂಬುವವರನ್ನು ಸಂಪರ್ಕಿಸಿ ನಡೆದ ವಿಚಾರವನ್ನು ತಿಳಿಸಿದ್ದ. ಬಳಿಕ ಮಾಗಡಿಯ ಜ್ಯೋತಿ ಕುಣಿಗಲ್‌ನ ಕೊತ್ತಗೆರೆ ಅಂಗನವಾಡಿ ಕಾರ್ಯಕರ್ತೆ ಎನ್.ಜ್ಯೋತಿಯನ್ನು ಶಿಶು ಮಾರಾಟಕ್ಕೆ ಸಂಪರ್ಕಿಸಿದ್ದಾರೆ. ನಂತರ ಎನ್‌.ಜ್ಯೋತಿ ಕೊತ್ತಗೆರೆಯ ಮುಭಾರಕ್ ಪಾಷಾನನ್ನು ಸಂಪರ್ಕಿಸಿ ಮಗುವನ್ನು 60 ಸಾವಿರಕ್ಕೆ ಮಾರಾಟ ಮಾಡಲು ಡೀಲ್ ಮಾಡಿಕೊಂಡಿದ್ದರು.

ಇತ್ತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಯುವತಿ ಮನೆಗೆ ತೆರಳಿದ್ದ ವೇಳೆ ಹೆರಿಗೆ ವಿಚಾರವನ್ನು ಪಾಲಕರ ಮುಂದೆ ಬಾಯಿಬಿಟ್ಟಿದ್ದಾಳೆ. ಈ ವೇಳೆ ಸಿಟ್ಟಾದ ಪೋಷಕರು ಮಗುವನ್ನು ಮರಳಿ ಕರೆದುಕೊಂಡು ಬಾ ಎಂದು ತಿಳಿಸಿದ್ದಾರೆ. ಆದರೆ ಯುವತಿಗೆ ಮಾರಾಟ ಜಾಲದ ಬಗ್ಗೆ ಗೊತ್ತಿದ್ದ ಹಿನ್ನೆಲೆಯಲ್ಲಿ ಆಕೆ ಹಿಂದೇಟು ಹಾಕಿದ್ದಾಳೆ.

ಕೂಡಲೇ ಯುವತಿಯ ಪೋಷಕರು ಮಗು ವಾಪಸ್ ಪಡೆಯಲು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ವೇಳೆ ಶಿಶು ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಹುಚ್ಚರಂಗಮ್ಮ ದೂರು ನೀಡಿದ್ದರು. ಅದರಂತೆ ಇದೀಗ ಕುಣಿಗಲ್ ಪೊಲೀಸರು ಮಗುವಿನ ತಾಯಿ, ಆಕೆಯ ಪ್ರಿಯಕರ ಶ್ರೀನಂದ, ಕುಣಿಗಲ್‌ನ ಅಂಗನವಾಡಿ ಕಾರ್ಯಕರ್ತೆ ಎನ್. ಜ್ಯೋತಿ, ಮುಭಾರಕ್ ಪಾಷಾ, ಮಾಗಡಿಯ ಜ್ಯೋತಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ | Denotification case: ಡಿನೋಟಿಫಿಕೇಷನ್ ಪ್ರಕರಣದಲ್ಲಿ ಎಚ್‌ಡಿಕೆಗೆ ಸಂಕಷ್ಟ; ಬಿ ರಿಪೋರ್ಟ್‌ ರದ್ದು ಆದೇಶ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಇನ್ನು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಸಕ್ರಿಯವಾಗಿದ್ದರೂ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕರ್ತವ್ಯಲೋಪ ಹಿನ್ನೆಲೆ ಮಾರಿಹಾಳ ಠಾಣೆ ಇನ್ಸ್ಪೆಕ್ಟರ್ ವರ್ಗಾವಣೆ

ಬೆಳಗಾವಿ: ಕಂಡಕ್ಟರ್ ಮೇಲೆ ಮರಾಠಿ ಪುಂಡರಿಂದ ಹಲ್ಲೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದ ಆರೋಪದಲ್ಲಿ ಮಾರಿಹಾಳ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜೆ.ಐ. ಕಲ್ಯಾಣಶೆಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿದೆ.‌ ಬಾಳೇಕುಂದ್ರಿ ಗ್ರಾಮದಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ನಂತರ ಹಲ್ಲೆಗೊಳಗಾದ ನಿರ್ವಾಹಕ ಮಹಾದೇವ ಹುಕ್ಕೇರಿ ಬಸ್ ಸಮೇತವಾಗಿ ಮಾರಿಹಾಳ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಲು‌ ಮುಂದಾಗಿದ್ದರು. ಆದರೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೂರು ದಾಖಲಿಸಿಕೊಳ್ಳದೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಮಾರಿಹಾಳ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜೆ.ಐ. ಕಲ್ಯಾಣಶೆಟ್ಟಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇನ್ನೂ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಕಿಚ್ಚಿಗೆ ಮತ್ತಷ್ಟು ಬೆಂಕಿ ಹಚ್ಚಿದ್ದು ಪೋಕ್ಸೊ ಪ್ರಕರಣ. ಹಲ್ಲೆ ಮಾಡಿದ್ದ ಪುಂಡರು ಪ್ರಕರಣದ ದಿಕ್ಕು ತಪ್ಪಿಸಲು ಯುವತಿ ಕಡೆಯಿಂದ ಪೋಕ್ಸೊ ಪ್ರಕರಣ ದಾಖಲಿಸಿದ್ದು ಸೇರಿದಂತೆ ಇನ್ಸ್ಪೆಕ್ಟರ್ ಕಲ್ಯಾಣಶೆಟ್ಟಿ ಅವರ ಕರ್ತವ್ಯಲೋಪದ ಕುರಿತು ವಿಶ್ವವಾಣಿ ನಿರಂತರ ವರದಿ ಪ್ರಕಟಿಸಿತ್ತು.

ಈ ಸುದ್ದಿಯನ್ನೂ ಓದಿ | Sajjan Kumar : 1984ರ ಸಿಖ್ ವಿರೋಧಿ ಗಲಭೆ ಕೇಸ್‌- ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿ.ಐ ಕಲ್ಯಾಣಶೆಟ್ಟಿ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸಿಸಿಆರ್ ಬಿ ಘಟಕದ ಇನ್ಸ್ಪೆಕ್ಟರ್ ಮಂಜುನಾಥ ನಾಯಕ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.