ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Accident at Chikkaballapur: ವಾಹನಗಳ ನಡುವೆ ಡಿಕ್ಕಿ: ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಾವು

ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರಸಿಂಹ ರೆಡ್ಡಿ ಚಿಂತಾಮಣಿ ಕಡೆಯಿಂದ ಮಿಟ್ಟಹಳ್ಳಿ ಕಡೆ ಹೋಗುತ್ತಿದ್ದ ವೇಳೆ ಮುಂದಗಡೆಯಿಂದ ಬಂದು ಗೌನೇನಹಳ್ಳಿ ಕಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ನರಸಿಂಹರೆಡ್ಡಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಾವು

Profile Ashok Nayak Jul 15, 2025 1:17 PM

ಚಿಂತಾಮಣಿ: ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಮೃತಪಟ್ಟಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮ ದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಿಟ್ಟಹಳ್ಳಿ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರಸಿಂಹ ರೆಡ್ಡಿ (58 ವರ್ಷ) ಎಂದು ಗುರುತಿಸಲಾಗಿದೆ.

ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರಸಿಂಹ ರೆಡ್ಡಿ ಚಿಂತಾಮಣಿ ಕಡೆಯಿಂದ ಮಿಟ್ಟಹಳ್ಳಿ ಕಡೆ ಹೋಗುತ್ತಿದ್ದ ವೇಳೆ ಮುಂದಗಡೆಯಿಂದ ಬಂದು ಗೌನೇನಹಳ್ಳಿ ಕಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ನರಸಿಂಹರೆಡ್ಡಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ವಿಷಯ ತಿಳಿದ ತಕ್ಷಣ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.