N H Shivashankar Reddy : ಡಾ.ಹೆಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ನೇಮಕ
ಇದು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ ಸಂತಸದ ಸುದ್ದಿಯಾಗಿದೆ. 25 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ತೋರಿಸಿಕೊಳ್ಳದೆ ತಾಲ್ಲೂಕಿನ ಅಭಿವೃದ್ಧಿಗೆ ತಮ್ಮ ತನುಮನ ಧನವನ್ನು ಅರ್ಪಿಸಿ ತಾಲ್ಲೂಕಿನ್ನು ಅಭಿವೃದ್ಧಿ ಮಾಡಿದ್ದಾರೆ. ಇಂತಹ ಜನಪರ ನಾಯಕರಿಗೆ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಳಿದು ಬಂದಿರುವುದು ತಾಲೂಕಿನ ಕಾಂಗ್ರೆಸ್ ಪಾಳೆಯದಲ್ಲಿ ಸಂತೋಷ ತಂದಿದೆ

ಎಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ, ಮಾಜಿ ಸಚಿವ,ಎನ್.ಎಚ್. ಶಿವಶಂಕರ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿರುವ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಪಾಳೆಯದಲ್ಲಿ ಸಂಭ್ರಮ ಮನೆ ಮಾಡಿತು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು
ಗೌರಿಬಿದನೂರು: ಎಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ, ಮಾಜಿ ಸಚಿವ ಎನ್.ಎಚ್.ಶಿವಶಂಕರ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿರುವ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಪಾಳೆಯದಲ್ಲಿ ಸಂಭ್ರಮ ಮನೆ ಮಾಡಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಎನ್.ಎಚ್ ಶಿವಶಂಕರ್‌ರೆಡ್ಡಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ ತಾರಾನಾಥ್ ಮಾತನಾಡಿ ನಮ್ಮ ನಾಯಕರಾದ ಮಾಜಿ ಶಾಸಕರು ಹಾಗೂ ಮಾಜಿ ಕೃಷಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ಅವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿಕೆ ಶಿವಕುಮಾರ್ ಡಾ.ಎಚ್.ನರಸಿಂಹಯ್ಯ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ ಸಂತಸದ ಸುದ್ದಿಯಾಗಿದೆ. 25 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ತೋರಿಸಿಕೊಳ್ಳದೆ ತಾಲ್ಲೂಕಿನ ಅಭಿವೃದ್ಧಿಗೆ ತಮ್ಮ ತನುಮನ ಧನವನ್ನು ಅರ್ಪಿಸಿ ತಾಲ್ಲೂಕಿನ್ನು ಅಭಿವೃದ್ಧಿ ಮಾಡಿದ್ದಾರೆ. ಇಂತಹ ಜನಪರ ನಾಯಕರಿಗೆ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಳಿದು ಬಂದಿರುವುದು ತಾಲೂಕಿನ ಕಾಂಗ್ರೆಸ್ ಪಾಳೆಯದಲ್ಲಿ ಸಂತೋಷ ತಂದಿದೆ ಎಂದರು.
ಇದನ್ನೂ ಓದಿ: IAF Chief Amar Preet Singh: ಆಪರೇಶನ್ ಸಿಂದೂರ್ ಹಿಂದಿರುವ ಮಾಸ್ಟರ್ ಮೈಂಡ್ ಇವ್ರೇ ನೋಡಿ
ಶಿವಶAಕರರೆಡ್ಡಿ ಅವರು ತಮ್ಮ ಸುದೀರ್ಘವಾದ ರಾಜಕೀಯ ಜೀವನದಲ್ಲಿ ತಾಲ್ಲೂಕಿನ ಅಭಿವೃದ್ಧಿ ಮಾಡಿದ್ದಾರೆ. ಕೆಲವೊಂದಷ್ಟು ವಿಚಾರಗಳಿಂದ ಕಳೆದ ಚುನಾವಣೆಯಲ್ಲಿ ಸೋಲನ್ನು ಅನುಭವಿಸ ಲಾಯಿತು. ಅವರು ಸೋತಿದ್ದರೂ ತಾಲ್ಲೂಕಿನಲ್ಲಿ ಬಡವರ ಪರ, ದೀನ ದಲಿತರ ಪರ ಕೆಲಸ ಮಾಡು ತ್ತಿದ್ದಾರೆ, ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಇವರನ್ನು ಪ್ರಾಧಿಕಾರಕ್ಕೆ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಬ್ಲಾಕ್ ಕಾಂಗ್ರೆಸ್ ಮತ್ತು ಎಲ್ಲಾ ಘಟಕಗಳ ಪರವಾಗಿ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದರು.
ಗುರುವಾರ ತಾಲ್ಲೂಕಿನ ಗಡಿಭಾಗವಾದ ಗುಂಜೂರು ಟೋಲ್ ಗೇಟ್ ಬಳಿ ಬೈಕ್ರ‍್ಯಾಲಿ ಮೂಲಕ ನಗರ ಪ್ರವೇಶಿಸಿ ನಗರದ ಶನಿಮಹಾತ್ಮ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೇದಲವೇಣಿ ವೇಣು, ಹರ್ಷವರ್ಧನ್ ರೆಡ್ಡಿ, ಆರ್.ಪಿ ಗೋಪಿನಾಥ್ , ಸೋಮಯ್ಯ, ಮಿಲ್ ಬಾಬು, ಬಾಬಾಜಾನ್, ಕಲ್ಪನಾ ರಮೇಶ್, ಶ್ರೀನಿವಾಸ್ , ಹುಲಿಕುಂಟೆ ಅಶ್ವತ್ಥಪ್ಪ, ಕಂಬಕ್ಕರ ವೆಂಕಟೇಶ್, ಸುದರ್ಶನ್, ಇಂದ್ರಕುಮಾರ್, ಅಬ್ದುಲ್ಸತ್ತರ್, ಅರ್ಮಾನ್, ಮುನಿಸ್ವಾಮಿ, ಸೇರಿದಂತೆ ಮುಂತಾದವರು ಹಾಜರಿದ್ದರು.