Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್
Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.
ನವದೆಹಲಿ: ಫೆ. 11 ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ (Global Investors Meet) ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ (MB Patil) ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.
ಮೊದಲಿಗೆ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ಮಾಡಿದ ಸಚಿವರು, ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಅಲ್ಲಿಂದ ಜೋಶಿ ಅವರ ಸಂಸತ್ತಿನ ಕಚೇರಿಗೆ ತೆರಳಿದ ಸಚಿವ ಎಂ.ಬಿ. ಪಾಟೀಲ್ ಅವರು, ಅವರ ಕಚೇರಿಯಲ್ಲಿ ಸಮಾವೇಶ ಕುರಿತು ರಾಜ್ಯದ ನಾಯಕರೊಂದಿಗೆ ಸಭೆ ನಡೆಸಿದರು.
ಈ ಸುದ್ದಿಯನ್ನೂ ಓದಿ | Job Guide: ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್‌ನಲ್ಲಿದೆ 740 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು. ಸಚಿವ ಎಂ.ಬಿ. ಪಾಟೀಲ್ ಅವರು ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ, ಸಮಾವೇಶಕ್ಕೆ ಆಹ್ವಾನಿಸಲಿದ್ದಾರೆ.