Karnataka High Court: ಕೈಗಾರಿಕೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯತ್‌ಗಳಿಗೆ ಅಧಿಕಾರವಿಲ್ಲ: ಹೈಕೋರ್ಟ್
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲವೆಂದು ಕರ್ನಾಟಕ ಹೈಕೋರ್ಟ್ (Karnataka high court) ಆದೇಶಿಸಿದೆ.

ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕೈಗಾರಿಕೆಗಳಿಂದ ಗ್ರಾಮ ಪಂಚಾಯಿತಿಗಳು (grama panchayat) ತೆರಿಗೆ (tax) ಸಂಗ್ರಹಿಸಲು ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka high court) ಮಹತ್ವದ ಆದೇಶ ಹೊರಡಿಸಿದೆ. ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಹಲವಾರು ಇತರೆ ಕೈಗಾರಿಕಾ ಸಂಸ್ಥೆಗಳಿಗೆ ಸೋಂಪುರ ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ಗ್ರಾಮ ಪಂಚಾಯತ್‌ಗೆ ವಿರುದ್ಧವಾಗಿ ಆದೇಶ ಬಂದಿದೆ.
ಗ್ರಾಮ ಪಂಚಾಯತ್ ನೋಟೀಸ್ ಅನ್ನು ಪ್ರಶ್ನಿಸಿ ಕಲ್ಪತರು ಬ್ರೀವರಿಸ್ ಮತ್ತು ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(KIADB) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲವೆಂದು ಹೈಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ: Bengaluru Techie: ಲಕ್ಷ ಲಕ್ಷ ತೆರಿಗೆ ಕಟ್ಟುತ್ತಿದ್ದ ವ್ಯಕ್ತಿ ಈಗ ನಿರುದ್ಯೋಗಿ; ಬೆಂಗಳೂರು ಟೆಕ್ಕಿಯ ಕರುಣಾಜನಕ ಸ್ಟೋರಿ!