#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Gukesh D: ಫ್ರೀಸ್ಟೈಲ್‌ ಗ್ರ್ಯಾಂಡ್ ಸ್ಲಾಮ್‌ ಟೂರ್ನಿಯಿಂದ ಗುಕೇಶ್‌ ನಿರ್ಗಮನ

ಬಿಳಿಕಾಯಿಯೊಂದಿಗೆ ಮೊದಲ ಪಂದ್ಯ(Freestyle Grand Slam) ಸೋತಿದ್ದ ಡಿ. ಗುಕೇಶ್‌(Gukesh D) ಗೆಲ್ಲಲೇಬೇಕಾದ ನಿರ್ಣಾಯಕ ಪಂದ್ಯದಲ್ಲೂ ಹಿನ್ನಡೆ ಅನುಭವಿಸಿದರು. ಇದೇ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧವೂ ಗುಕೇಶ್ ಪರಾಭವಗೊಂಡಿದ್ದರು.

ಫ್ರೀಸ್ಟೈಲ್‌ ಗ್ರ್ಯಾಂಡ್ ಸ್ಲಾಮ್‌ ಟೂರ್ನಿಯಿಂದ ಗುಕೇಶ್‌ ನಿರ್ಗಮನ

Profile Abhilash BC Feb 11, 2025 10:22 AM

ಹ್ಯಾಂಬರ್ಗ್‌: 18ನೇ ವರ್ಷಕ್ಕೆ ಚೆಸ್‌ ವಿಶ್ವ ಚಾಂಪಿಯನ್‌ (Chess World Champion) ಆಗಿ ಇತಿಹಾಸ ನಿರ್ಮಿಸಿದ್ದ ಡಿ. ಗುಕೇಶ್‌(Gukesh D) ಅವರು ಫ್ರೀಸ್ಟೈಲ್‌ ಗ್ರ್ಯಾಂಡ್ ಸ್ಲಾಮ್‌(Freestyle Grand Slam) ಚೆಸ್‌ ಟೂರ್ನಿಯಲ್ಲಿ ನಿರಾಸೆ ಮೂಡಿಸಿದ್ದಾರೆ. ಸತತ ಎರಡು ಸೋಲುಗಳಿಂದ ಪ್ರಶಸ್ತಿ ಸುತ್ತಿನಿಂದ ಹೊರಬಿದ್ದಿದ್ದಾರೆ. ಕ್ವಾರ್ಟರ್ ಫೈನಲ್‌ನಲ್ಲಿ ಅಮೆರಿಕದ ಫ್ಯಾಬಿಯಾನೊ ಕರುವಾನಾ ವಿರುದ್ಧ ಸತತ ಎರಡನೇ ಬಾರಿ ಸೋಲು ಕಂಡಿದ್ದಾರೆ. ಗುಕೇಶ್ ಇದೀಗ ಕೊನೆಯ ನಾಲ್ಕು ಸ್ಥಾನಗಳಿಗಾಗಿ ಪೈಪೋಟಿ ನಡೆಸಲಿದ್ದಾರೆ.

ಬಿಳಿಕಾಯಿಯೊಂದಿಗೆ ಮೊದಲ ಪಂದ್ಯ ಸೋತಿದ್ದ ಗುಕೇಶ್, ಗೆಲ್ಲಲೇಬೇಕಾದ ನಿರ್ಣಾಯಕ ಪಂದ್ಯದಲ್ಲೂ ಹಿನ್ನಡೆ ಅನುಭವಿಸಿದರು. ಇದೇ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧವೂ ಗುಕೇಶ್ ಪರಾಭವಗೊಂಡಿದ್ದರು. ಗುಕೇಶ್ ಅವರು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿಂಗಪುರದಲ್ಲಿ ನಡೆದಿದ್ದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೇನ್ ವಿರುದ್ಧ ಗೆದ್ದು ದಾಖಲೆ ಬರೆದಿದ್ದರು.

ಗುಕೇಶ್​ 2006ರ ಮೇ 29ರಂದು ತಮಿಳುನಾಡಿನ ಚೆನ್ನೈನಲ್ಲಿ ಜನಿಸಿ ಅಲ್ಲೇ ಬೆಳೆದಿದ್ದರೂ, ಅವರ ಮಾತೃಭಾಷೆ ತೆಲುಗು. ಯಾಕೆಂದರೆ ಅವರ ಕುಟುಂಬದ ಮೂಲ ಆಂಧ್ರ ಪ್ರದೇಶದ ಗೋದಾವರಿ ಆಗಿದೆ. ತಮ್ಮ 12ನೇ ವಯಸ್ಸಿನಲ್ಲಿ ಗುಕೇಶ್‌ 2017ರಲ್ಲಿ 34ನೇ ಕ್ಯಾಪೆಲ್ಲೆ-ಲಾ-ಗ್ರ್ಯಾಂಡೆ ಓಪನ್‌ನಲ್ಲಿ ಇಂಟರ್‌ನ್ಯಾಷನಲ್‌ ಮಾಸ್ಟರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕಳೆದ ಏಪ್ರಿಲ್​ನಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನ ಅರ್ಹತಾ ಸ್ಪರ್ಧೆಯಾದ ಅಭ್ಯರ್ಥಿಗಳ ಪಂದ್ಯಾವಳಿಯಲ್ಲಿ ಭಾಗವಹಿಸಿದ ಮೂರನೇ ಕಿರಿಯ ಆಟಗಾರನೆನಿಸಿಕೊಂಡಿದ್ದರು. ಇದರ ಜತೆಗೆ ಈ ಪಂದ್ಯಾವಳಿಯಲ್ಲಿ 9 ಅಂಕ ಗಳಿಸಿ ಪಂದ್ಯಾವಳಿಯನ್ನು ಗೆದ್ದುಕೊಂಡಿದಲ್ಲದೆ, ಕೇವಲ 17ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಎನಿಸಿಕೊಂಡಿದ್ದರು.

ಇದನ್ನೂ ಓದಿ D Gukesh: ವಿಶ್ವ ಚೆಸ್‌ ಚಾಂಪಿಯನ್‌ ಡಿ ಗುಕೇಶ್‌ಗೆ 5 ಕೋಟಿ ರೂ ನಗದು ಬಹುಮಾನ ಘೋಷಿಸಿದ ಎಂಕೆ ಸ್ಟಾಲಿನ್‌!

ಫೆ.15ಕ್ಕೆ ಭಾರತದ ಆಟಗಾರರು ದುಬೈಗೆ

ನವದೆಹಲಿ: ಫೆ.19ರಿಂದ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ(Champions Trophy) ಆಡುವುದಕ್ಕಾಗಿ ಭಾರತ ತಂಡದ(Team India) ಆಟಗಾರರು ಫೆ.15ರಂದು ದುಬೈಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ. ಭಾರತ ಸದ್ಯ ಇಂಗ್ಲೆಂಡ್‌ ವಿರುದ್ಧ 3 ಪಂದ್ಯಗಳ ಸರಣಿಯಲ್ಲಿ ಆಡುತ್ತಿದೆ. ಅಲ್ಲದೆ, ಭಾರತ ತಂಡ ಈ ಬಾರಿ ಟೂರ್ನಿಗೂ ಮುನ್ನ ಯಾವುದೇ ಅಭ್ಯಾಸ ಪಂದ್ಯ ಆಡುವುದಿಲ್ಲ ಎಂದು ಹೇಳಲಾಗಿದೆ.

ಫೆ.12ರಂದು ಇಂಗ್ಲೆಂಡ್‌ ವಿರುದ್ಧದ ತವರಿನ ಏಕದಿನ ಸರಣಿ ಕೊನೆಗೊಳ್ಳಲಿದೆ. ಇದಾಗಿ 2 ದಿನಗಳ ವಿಶ್ರಾಂತಿ ಬಳಿಕ ಟೀಮ್‌ ಇಂಡಿಯಾ ಆಟಗಾರರು ದುಬೈ ವಿಮಾನ ಏರಲಿದ್ದಾರೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಐಸಿಸಿ ಟೂರ್ನಿಗೆ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯ ಆಡಲಿದೆ. ಆದರೆ ನಿರಂತರ ಕ್ರಿಕೆಟ್‌ನಿಂದಾಗಿ ಈ ಬಾರಿ ಭಾರತಕ್ಕೆ ಯಾವುದೇ ಅಭ್ಯಾಸ ಪಂದ್ಯ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.