ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Haveri University: ಏ.6ಕ್ಕೆ ಹಾವೇರಿ ವಿವಿ ಪ್ರಥಮ ಘಟಿಕೋತ್ಸವ; ಬಸವರಾಜ ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ

ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು ಏ.6 ರಂದು ನಡೆಯಲಿದೆ. ಈ ಬಾರಿ ಸಮಾಜ ಸೇವೆ ಕ್ಷೇತ್ರದಲ್ಲಿ ಮಾಜಿ ಸಿ.ಎಂ ಹಾಲಿ ಹಾವೇರಿ- ಗದಗ ಸಂಸದ ಬಸವರಾಜ ಬೊಮ್ಮಾಯಿ, ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಸತೀಶ ಕುಲಕರ್ಣಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಿಸಲಾಗಿದೆ.

ಹಾವೇರಿ ವಿವಿಯಿಂದ ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

ಸಂಸದ ಬಸವರಾಜ ಬೊಮ್ಮಾಯಿ, ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಸತೀಶ ಕುಲಕರ್ಣಿ -

Prabhakara R
Prabhakara R Apr 4, 2026 5:45 PM

ಹಾವೇರಿ: ಜಿಲ್ಲೆಯ ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ (Haveri University convocation) ಸಮಾರಂಭವು ಇದೇ ಏ.6 ರಂದು ಜರುಗಲಿದೆ. ಘನವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯವರೇ ಆದ ಮೂವರಿಗೆ ಗೌರವ ಡಾಕ್ಟರೇಟ್ (honorary doctorate) ಪದವಿ ಪ್ರದಾನ ಮಾಡಲಾಗುತ್ತದೆ.

ರಾಜ್ಯಪಾಲರು ನೇಮಿಸಿರುವ ಸಿಂಡಿಕೇಟ್ ಪರಿಶೀಲನಾ ಸಮಿತಿಯ ಸಭೆಯಲ್ಲಿ ಚರ್ಚಿಸಿ ಡಾಕ್ಟರೇಟ್ ಪದವಿಗೆ ಅರ್ಹರನ್ನು ಆಯ್ಕೆ ಮಾಡಲಾಗಿದೆ. ಸಮಾಜಕ್ಕೆ ವಿವಿಧ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದರುವ ಗೌರವ ಡಾಕ್ಟರೇಟ್ ಪದವಿ ಪ್ರದಾನ ನೀಡಲಾಗುತ್ತಿದೆ. ಸಮಾಜ ಸೇವೆಯಿಂದ ಮಾಜಿ ಸಿ.ಎಂ ಹಾಲಿ ಹಾವೇರಿ- ಗದಗ ಸಂಸದ ಬಸವರಾಜ ಬೊಮ್ಮಾಯಿ, ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಸಾಹಿತ್ಯ ಕ್ಷೇತ್ರದಲ್ಲಿ ಸಾಹಿತಿ ಸತೀಶ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ; ವಿಶ್ವವಾಣಿಯ ರಮೇಶ್‌ ಕುಮಾರ್‌ ನಾಯಕ್‌ ಸೇರಿ ಹಲವರಿಗೆ ಪುರಸ್ಕಾರ

ಏ. 6 ರಂದು ಹಾವೇರಿ ನಗರದ ಜೆ.ಎಚ್ ಕಾಲೇಜು ಆವರಣದ ಆಡಿಟೋರಿಯಂನಲ್ಲಿ ಸಮಾರಂಭ ನಡೆಯಲಿದ್ದು, ಈ ಮೂವರಿಗೆ ಹಾವೇರಿ ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನವನ್ನು ರಾಜ್ಯಪಾಲರು ಮಾಡಲಿದ್ದಾರೆ ಎಂದು ಹಾವೇರಿ ವಿವಿ ಕುಲಪತಿ ಡಾ. ಸುರೇಶ ಜಂಗಮಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.