HD Kumaraswamy: ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ; ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ

ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Profile Vishwavani News Dec 24, 2024 7:07 PM
ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಅವರು, 2006 ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಅನೇಕ ಜನಪರ ಕಾರ್ಯಕ್ರಮಗಳ ಜಾರಿ ಬಾಕಿ ಉಳಿದಿದೆ. ಅವೆಲ್ಲವನ್ನೂ ಅನುಷ್ಠಾನಕ್ಕೆ ತರಬೇಕಾದರೆ ಮತ್ತೊಮ್ಮೆ ಮೈತ್ರಿ ಸರ್ಕಾರ ಬರಬೇಕಿದೆ. ಶೀಘ್ರದಲ್ಲಿಯೇ ಬಂದೇ ಬರುತ್ತದೆ ಎಂದು ಹೇಳಿದರು.
ಮುಂದೆ ನಿಮ್ಮೆಲ್ಲರ ಆಶೀರ್ವಾದದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರುವ ಆಶಯವಿದೆ. ನನ್ನ ಕನಸಿನ ಕೆಲವು ಶಾಶ್ವತ ಯೋಜನೆಗಳು ಹಾಗೆಯೇ ಉಳಿದಿವೆ. ಅವುಗಳನ್ನೆಲ್ಲಾ ಸಾಕಾರಗೊಳಿಸಬೇಕಿದೆ. ರೈತರ ಬದುಕನ್ನು ಕಟ್ಟಿಕೊಡುತ್ತೇವೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | Narendra Modi: ರೋಜ್‌ಗಾರ್ ಮೇಳ ಯೋಜನೆಯಡಿಯಲ್ಲಿ 71 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ
ಕಾಫಿ ಬೆಳೆಗಾರರಿಗೆ ಸಚಿವರ ಅಭಯ
ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು ಮಾತ್ರ. ಅದಕ್ಕಾಗಿ ನಾನು ಗೋಯಲ್ ಅವರಿಗೆ ಆಭಾರಿ ಆಗಿದ್ದೇನೆ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಪಿಯೂಷ್ ಗೋಯಲ್ ಅವರು ಸಕಲೇಶಪುರಕ್ಕೆ ಬಂದಿರುವ ಕಾರಣಕ್ಕೆ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಕಲೇಶಪುರ ಜನರು ಆನೆ ಹಾವಳಿಗೆ ತುತ್ತಾಗಿ ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ನಾನೂ ಮನವಿ ಮಾಡಿದ್ದೇನೆ. ಕೇಂದ್ರದಲ್ಲಿ ಪರಿಸರ ಇಲಾಖೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತರುತ್ತೇನೆ. ಪಿಯೂಷ್ ಗೋಯಲ್ ಮತ್ತು ನಾನು ಭೇಟಿ ಮಾಡಿ ಮನವಿ ಮಾಡುತ್ತೇವೆ. ಆನೆ ಕಾರಿಡಾರ್ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹದಿನೈದು ಸಾವಿರ ಎಕರೆ ಗುರುತಿಸಿದೆ. ರೈತರು ಮೂರು ಸಾವಿರ ಎಕರೆ ಬಿಟ್ಟುಕೊಡಲು ಸಿದ್ದರಿದ್ದಾರೆ. ಆದರೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ. ನಾನು ಮುಖ್ಯಮಂತ್ರಿಯಾದಾಗ ತಡೆಗೋಡೆ ನಿರ್ಮಾಣ ಮಾಡಲು ನೂರು ಕೋಟಿ ಬಿಡುಗಡೆ ಮಾಡಿದ್ದೆ ಎಂದು ಅವರು ಮಾಹಿತಿ ನೀಡಿದರು.
ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲರಲ್ಲೂ ಆತಂಕ ಇದೆ
ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲರಲ್ಲೂ ಆತಂಕ ಇದೆ. ಹೇಮಾವತಿ ನದಿಯ ನೀರು ಮಲೆನಾಡು ಭಾಗದ ಜನರ ತ್ಯಾಗದ ಫಲ. ಎತ್ತಿನಹೊಳೆ ಯೋಜನೆ ಹೆಸರಿನಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಅನುಕೂಲವಾಗಿದೆ ಎಂದು ಹೇಳಿದರು.
ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟಿರುವ ನರೇಂದ್ರಮೋದಿ ಅವರು ತಮ್ಮ ಸಂಪುಟದಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕನಸಿನ ವಿಕಸಿತ ಭಾರತ್ ಸೇರಿದಂತೆ ಅನೇಕ ಯೋಜನೆಗಳನ್ನು ಸಾಕಾರಗೊಳಿಸಬೇಕು. ಆ ನಿಟ್ಟಿನಲ್ಲಿ ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್, ಕಾಫಿ ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದರು.
ಈ ಸುದ್ದಿಯನ್ನೂ ಓದಿ | DHL QR CODE: ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡೋ ಮುನ್ನ ಎಚ್ಚರ…ಎಚ್ಚರ…! ಸ್ವಲ್ಪ ಯಾಮಾರಿದ್ರೂ ನಿಮ್ಮ ಹಣ ಮಂಗಮಾಯ
ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಮೋಟಮ್ಮ, ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷ ಡಾ.ಎಚ್.ಟಿ. ಮೋಹನ್ ಕುಮಾರ್, ಸಂಸದರಾದ ತೇಜಸ್ವಿ ಸೂರ್ಯ, ಶ್ರೇಯಸ್ ಪಟೇಲ್, ಶಾಸಕರಾದ ಎಸ್.ಮಂಜುನಾಥ್, ಎಚ್.ಕೆ. ಸುರೇಶ್, ಮಂಥರ್ ಗೌಡ, ಸ್ವರೂಪ್ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷ ಡಿ.ಜೆ.ದಿನೇಶ್ ಸೇರಿದಂತೆ ಅನೇಕ ಗಣ್ಯರು, ಕಾಫಿ ಬೆಳೆಗಾರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?