Health Benefits: ಖಾಲಿ ಹೊಟ್ಟೆಗೆ ತುಳಸಿ ರಸ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ?

Health tips: ತುಳಸಿ ಎಲೆಯಲ್ಲಿ ವಿವಿಧ ರೀತಿಯ ಔಷಧೀಯ ಗುಣ ಇರಲಿದ್ದು  ನಿಮ್ಮ ಆಹಾರ ಪದ್ಧತಿಯಲ್ಲಿ ತುಳಸಿ ಎಲೆಗಳನ್ನು ಸೇರಿಸಿ ಸೇವಿಸುವುದು ಬಹಳ ಒಳ್ಳೆಯದು. ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಬಹಳಷ್ಟು  ಆರೋಗ್ಯ ಪ್ರಯೋಜನ ಇರಲಿದ್ದು ಏನೆಲ್ಲಾ ಲಾಭ ಇದೆ ಎನ್ನುವ  ಮಾಹಿತಿ ಇಲ್ಲಿದೆ.

image-1a88c07f-eba6-4956-ab4c-a30a8d3b92d1.jpg
Profile Pushpa Kumari January 11, 2025
ನವದೆಹಲಿ: ಪುರಾತನ ಕಾಲದಿಂದಲೂ ತುಳಸಿಗೆ ಎಷ್ಟು ಪೂಜ್ಯನೀಯ ಗೌರವ ಇದೆಯೋ(Tulsi) ಅಷ್ಟೇ ಅದನ್ನು ಔಷಧಿಯಾಗಿ ಬಳಕೆ ಮಾಡಲಾತ್ತಿದೆ. ಹಾಗಾಗಿ ನಿಮ್ಮ ಆಹಾರದಲ್ಲಿ ತುಳಸಿ ರಸ ಅಥವಾ ಎಲೆ ಸೇರಿಸಿಕೊಳ್ಳುವುದರಿಂದ ನಿಮ್ಮ ದೇಹಕ್ಕೆ ಉಂಟಾಗುವ ಸಣ್ಣಪುಟ್ಟ ಕಾಯಿಲೆಯಿಂದ ನೀವು  ಮುಕ್ತಿ ಪಡೆಯಬಹುದು(Health Benefits). ತುಳಸಿ ಎಲೆಯಲ್ಲಿ ವಿವಿಧ ರೀತಿಯ ಔಷಧೀಯ ಗುಣ ಇರಲಿದ್ದು ನಿಮ್ಮ ಆಹಾರ ಪದ್ಧತಿಯಲ್ಲಿ ತುಳಸಿ ಎಲೆಗಳನ್ನು ಸೇರಿಸಿ ಸೇವಿಸುವುದು ಬಹಳ ಒಳ್ಳೆಯದು. ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಬಹಳಷ್ಟು  ಆರೋಗ್ಯ ಪ್ರಯೋಜನ ಇರಲಿದ್ದು ಏನೆಲ್ಲಾ ಲಾಭ ಇದೆ ಎನ್ನುವ  ಮಾಹಿತಿ ಇಲ್ಲಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ತುಳಸಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಾಮರ್ಥ್ಯ ಇದ್ದು, ಇದು ವಿವಿಧ ಸೋಂಕುಗಳಿಂದ ದೂರವಿರಿಸಲು ಸಹಾಯ ಮಾಡುತ್ತದೆ. ನಿಮಗೆ ಬರುವಂತಹ ಸಾಮಾನ್ಯ ಶೀತ, ಜ್ವರ ಮತ್ತು ಇತರ ಉಸಿರಾಟದ ಸೋಂಕುಗಳಂತಹ ಸಾಮಾನ್ಯ ಕಾಯಿಲೆಗಳಿಂದ ಇದರ ಸೇವನೆಯಿಂದ ರಕ್ಷಿಸಬಹುದು. ತುಳಸಿ ರೋಗನಿರೋಧಕವಾಗಿ ಕೆಲಸ ಮಾಡಲಿದ್ದು ತುಳಸಿ ಎಲೆಗಳು ವಿಟಮಿನ್ ಎ, ಸಿ, ಕೆ ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಕಬ್ಬಿಣ ಮತ್ತು ಪೊಟ್ಯಾಸಿಯಮ್‌ನಂತಹ ಖನಿಜಗಳಿಂದ ಕೂಡಿದೆ. image-bb6b2f10-1257-44c5-81a1-aef834d07b47.jpg ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ: ತುಳಸಿ ಸೇವನೆಯು ಅಜೀರ್ಣ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ‌‌ ಜೀರ್ಣಕ್ರಿಯೆಯನ್ನು ಉತ್ತೇಜಿಸಲು, ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳನ್ನು ಹೋಗಲಾಡಿಸಲು ತುಳಸಿ ಸೇವನೆ ಬಹಳ ಉತ್ತಮ.ನೀವು ಖಾಲಿ ಹೊಟ್ಟೆಯಲ್ಲಿ  ತುಳಸಿ ರಸ  ಸೇವಿಸುವ ಮೂಲಕ, ನೀವು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಗಮವಾಗಿ ಉತ್ತೇಜಿಸುವಂತೆ ಮತ್ತು ದಿನವಿಡೀ ಸರಿಯಾದ ಜೀರ್ಣಕ್ರಿಯೆ ಖಚಿತ ಪಡಿಸಿಕೊಳ್ಳಬಹುದು. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ: ತುಳಸಿ ನೈಸರ್ಗಿಕ ಅಡಾಪ್ಟೋಜೆನ್ ಅಂಶ ಹೊಂದಿದ್ದು ಒತ್ತಡದ ಹಾರ್ಮೋನ್ ಮಟ್ಟವನ್ನು ಕಡಿಮೆ ಮಾಡಲಿದೆ. ತುಳಸಿ ಎಲೆ ತಿನ್ನುವುದರಿಂದ  ಖಿನ್ನತೆಯ ಸಮಸ್ಯೆಯನ್ನು ದೂರ ಮಾಡಬಹುದು. ತುಳಸಿಯಲ್ಲಿರುವ ಪೊಟ್ಯಾಶಿಯಮ್ ಅಂಶವು ಮೆದುಳಿನಲ್ಲಿರುವ ಸಿರೋಟೋನಿಕ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡಲಿದೆ. image-63312492-1233-483e-ab84-600e62320104.jpg ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ: ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಆರೋಗ್ಯಕ್ಕೆ ಮಾತ್ರವಲ್ಲದೆ  ಚರ್ಮಕ್ಕೂ ಪ್ರಯೋಜನ ಕಾರಿಯಾಗಿದೆ.  ತುಳಸಿಯ ನಿಯಮಿತ ಸೇವನೆಯು ಮೊಡವೆ, ಕಲೆಗಳು ಮತ್ತು ಇತರ ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುವ ಮೂಲಕ  ಕಾಂತಿಯುತ ಚರ್ಮವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. image-ecd484b0-25ec-4a2d-9b0c-1d60f550b98a.jpg ಹೃದ್ರೋಗಗಳನ್ನು ತಡೆಯುತ್ತದೆ: ತುಳಸಿಯಲ್ಲಿ ಹೆಚ್ಚಿನ ಪ್ರಮಾಣದ ಆ್ಯಂಟಿ ಆ್ಯಕ್ಸಿಡೆಂಟ್‌  ಹೃದ್ರೋಗದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಇದರಿಂದ  ರಕ್ತದ ಪರಿಚಲನೆಯು ಸುಗಮವಾಗುತ್ತದೆ. ಇದರಿಂದ ಹೃದಯ ಸಂಬಂಧಿತ ಕಾಯಿಲೆಗಳು  ದೂರವಾಗಲಿದೆ. ತುಳಸಿ ಸೇವನೆ  ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನಿಮ್ಮ ಬೆಳಗಿನ ದಿನಚರಿಯಲ್ಲಿ ತುಳಸಿಯನ್ನು ಸೇರಿಸುವುದು ಹೃದಯದ ಆರೋಗ್ಯವನ್ನು ವೃದ್ದಿಸಲು ಪರಿಣಾಮಕಾರಿ ಮಾರ್ಗವಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ: ತುಳಸಿ ಮಧುಮೇಹವನ್ನು ತಡೆಗಟ್ಟಲು ಪ್ರಮುಖ ಪಾತ್ರ ವಹಿಸಲಿದೆ. ಇದು ಕಾರ್ಬೋಹೈಡ್ರೇಟ್‌ ಮತ್ತು ಕೊಬ್ಬಿನ ದೇಹದ ಚಯಾಪಚಯವನ್ನು ಸುಧಾರಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  ಪ್ರತಿದಿನ ಬೆಳಿಗ್ಗೆ ತುಳಸಿ ಸೇವನೆಯು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡಲಿದೆ. image-e898282e-94d3-44b2-bc95-bdec810e84f5.jpg ಶ್ವಾಸಕೋಶದ ಕಾಯಿಲೆ ತಡೆಯುವುದು: ತುಳಸಿ ಎಲೆಗಳಲ್ಲಿ ಕ್ಯಾಂಪೇನ್, ವಿಟಮಿನ್ ಸಿ, ಸಿನೋಲ್ ಮತ್ತು ಯುಜೆನಾಲ್  ಅಂಶ ಇರಲಿದ್ದು ಶ್ವಾಸಕೋಶದ ಸೋಂಕನ್ನು ನಿವಾರಣೆ ಮಾಡಲು ನೆರವಾಗುವುದು ಮತ್ತು ಉಸಿರುಗಟ್ಟುವ ಸಮಸ್ಯೆ ನಿವಾರಣೆ ಮಾಡಲಿದೆ‌. ದೇಹ ಶುದ್ದೀಕರಣ ಮಾಡಲಿದೆ: ತುಳಸಿ ಎಲೆ  ರಕ್ತವನ್ನು ಶುದ್ಧೀಕರಿಸಲು ಮತ್ತು ವಿಷವನ್ನು ಹೊರಹಾಕುವ ಮೂಲಕ ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ.ಇದರ ಉತ್ಕರ್ಷಣ ನಿರೋಧಕ ಅಂಶವು ಹಾನಿಕಾರಕ ಸ್ವತಂತ್ರ ರಾಡಿಕಲ್ ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ. ಈ ಸುದ್ದಿಯನ್ನೂ ಓದಿ:Neem Leaf: ಕಹಿಯೆಂದು ಬೇವಿನ ಎಲೆಯನ್ನು ದೂರ ಎಸೆಯಬೇಡಿ; ಆರೋಗ್ಯಕ್ಕೆ ಎಷ್ಟೆಲ್ಲ ಪ್ರಯೋಜನವಿದೆ ನೋಡಿ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ