Heart Attack: ರಾಜ್ಯದಲ್ಲಿ ಮುಂದುವರಿದ ಹೃದಯಾಘಾತ ಸರಣಿಗೆ 5 ಮಂದಿ ಸೇರ್ಪಡೆ: ಡ್ಯಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ವ್ಯಕ್ತಿ
Heart Attack: ಮೈಸೂರಿನಲ್ಲಿ ಇಂದು ಬೆಳಿಗ್ಗೆ ಬಸ್‌ನಲ್ಲಿ ಸಂಚರಿಸುವಾಗ ಸರ್ಕಾರಿ ನೌಕರರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ಮತ್ತೊಂದು ಘಟನೆ ವರದಿಯಾಗಿದ್ದು, ದೇವಸ್ಥಾನದ ಪ್ರಧಾನ ಅರ್ಚಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಒಬ್ಬರು ಕುಸಿದು ಬಿದ್ದು ಮೃತರಾಗಿದ್ದಾರೆ.


ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತಗಳ (Heart Attack) ಸರಣಿ ಮುಂದುವರಿದಿದೆ. ಬೆಂಗಳೂರು, ಮೈಸೂರು, ದಾವಣಗೆರೆಯಲ್ಲಿ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ (Bengaluru) ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ (Heart Fauilure) ವೇದಿಕೆ ಮೇಲೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಸರ್ಜಾಪುರದ ಬಸವರಾಜ್ ಎಂದು ಗುರುತಿಸಲಾಗಿದೆ. ಬಸವರಾಜ್ ಖಾಸಗಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತರ ಜೊತೆಗೆ ರೆಸಾರ್ಟ್‌ಗೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಇಂದು ಬೆಂಗಳೂರಿನಿಂದ ಸರ್ಜಾಪುರ ಗ್ರಾಮಕ್ಕೆ ಬಸವರಾಜ್ ಶವವನ್ನು ಶಿಫ್ಟ್ ಮಾಡಲಾಗಿದೆ.
ಗದಗದಲ್ಲಿ ಓರ್ವ ಮಹಿಳೆ ಹಾರ್ಟ್ ಅಟ್ಯಾಕ್‌ಗೆ ಬಲಿಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಿವಾಸಿ ಶೋಭಾ ವಡಕಣ್ಣವರ್ (42) ಸಾವನ್ನಪ್ಪಿದ್ದಾರೆ. ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆ ಫಲಕಾರಿ ಆಗದೆ ಶೋಭಾ ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿ ಇಂದು ಬೆಳಿಗ್ಗೆ ಬಸ್‌ನಲ್ಲಿ ಸಂಚರಿಸುವಾಗ ಸರ್ಕಾರಿ ನೌಕರರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ಮತ್ತೊಂದು ಘಟನೆ ವರದಿಯಾಗಿದ್ದು, ದೇವಸ್ಥಾನದ ಪ್ರಧಾನ ಅರ್ಚಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಟಿ. ನರಸೀಪುರ ದೇಗುಲದ ಪ್ರಧಾನ ಅರ್ಚಕ ಸಂಪತ್ ಕುಮಾರ್ ಸಾವನ್ನಪ್ಪಿದ್ದಾರೆ. ಸಂಪತ್ ಗುಂಜನರಸಿಂಹ ಸ್ವಾಮಿ ದೇವಸ್ಥಾನದ ಪ್ರದಾನ ಅರ್ಚಕರಾಗಿದ್ದು, ಇವರು ಮೂಲತಃ ರಾಮನಗರ ಜಿಲ್ಲೆಯ ನಿವಾಸಿ. ತಡರಾತ್ರಿ ತೀವ್ರ ಎದೆ ನೋವಿನಿಂದ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ದಾವಣಗೆರೆಯಲ್ಲಿ ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಅನಿಲ್ ಕುಮಾರ್ (40) ಮೃತ ಉದ್ಯಮಿ. ದಾವಣಗೆರೆ ನಗರದ ಶಕ್ತಿ ನಗರದ ನಿವಾಸಿಯಾಗಿರುವ ಅನಿಲ್ ಕುಮಾರ್ ಎಸ್‌ಎಸ್ ರಸ್ತೆ ಪಕ್ಕದ ಡಿಆರ್ ಸರ್ಕಲ್ ದಾರಿಯಲ್ಲಿ ವಾಕ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅನಿಲ್ ಕುಮಾರ್ ಕುಸಿದು ಬೀಳುವ ದೃಶ್ಯ ಪಕ್ಕದ ಶಾಪ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: Heart Attack Case: ಶಾಲೆಯಲ್ಲಿ ಪಾಠ ಮಾಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದ ಶಿಕ್ಷಕ; ವಿಡಿಯೊ ವೈರಲ್!