ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Rains: ರಾಜಧಾನಿಯಲ್ಲಿ ಮುಂದುವರಿದ ಮಳೆಯ ಅಬ್ಬರ; ಸಂಚಾರ ದಟ್ಟಣೆಗೆ ಸವಾರರು ಹೈರಾಣ!

Bengaluru Rains: ಬೆಂಗಳೂರಿನ ಟೌನ್​ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್​, ಕೆಂಗೇರಿ, ಜ್ಞಾನಭಾರತಿ ಸುತ್ತಮುತ್ತ ಬುಧವಾರ ಸಂಜೆ ಜೋರು ಮಳೆಯಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಕೆಂಗೇರಿ ರಿಂಗ್‌ ರೋಡ್‌ನಲ್ಲಿ ಬುಧವಾರ ಸಂಜೆ ಭಾರಿ ಮಳೆ ಸುರಿಯಿತು. (ಚಿತ್ರಗಳು: ಸುಧಾಕರ್‌ ದೇವರಾಜ್‌, ವಿಶ್ವವಾಣಿ)
1/8

ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಬಿಡುವು ಕೊಟ್ಟಿದ್ದ ಮುಂಗಾರು ಮಳೆ, ಮತ್ತೆ ತನ್ನ ಆರ್ಭಟ ಶುರುಮಾಡಿದೆ. ಬೆಂಗಳೂರು ನಗರದಲ್ಲಿ ಮಂಗಳವಾರ ರಾತ್ರಿ ಭರ್ಜರಿ ಮಳೆಯಾಗಿತ್ತು. ಅದೇ ರೀತಿ ಬುಧವಾರ ಸಂಜೆಯಾಗುತ್ತಿದ್ದಂತೆ ರಾಜಧಾನಿಯ ಹಲವೆಡೆ ಜೋರು ಮಳೆಯಾಗಿದೆ.

2/8

ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದವರು ಧಾರಾಕಾರ ಮಳೆಯಿಂದ ತೊಂದರೆಗೆ ಸಿಲುಕುವಂತಾಯಿತು. ಅಲ್ಲದೇ ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ದಟ್ಟಣೆಯಿಂದ ಸವಾರರು ಹೈರಾಣಾದರು.

3/8

ಬೆಂಗಳೂರಿನ ಟೌನ್​ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್​, ಕೆಂಗೇರಿ, ಜ್ಞಾನಭಾರತಿ ಸುತ್ತಮುತ್ತ ಜೋರು ಮಳೆಯಾಗಿದೆ. ಎಂ.ಜಿ ರೋಡ್, ಬ್ರಿಗೇಡ್ ರೋಡ್, ಕಬ್ಬನ್ ಪಾರ್ಕ್, ವಿಧಾನಸೌಧ, ಕಸ್ತೂರಿ ಬಾ ರಸ್ತೆ, ಮಲ್ಯ ರಸ್ತೆಯಲ್ಲೂ ವರಣನ ಆರ್ಭಟವಿತ್ತು. ಸಂಜೆಯ ಮಳೆ ಹಾಗೇ ರಾತ್ರಿ ಕೂಡ ಮುಂದುವರೆಯುವ ಸಾಧ್ಯತೆ ಇದೆ.

4/8

ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಕೊಡಗಿನ ಅಂಗನವಾಡಿಗಳಿಗೆ ಜೂನ್‌ 12ರಂದು ರಜೆ ಘೋಷಣೆ ಮಾಡಲಾಗಿದೆ.

5/8

ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ (Karnataka Rains) ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್ 12 ರಿಂದ 15 ರವರೆಗೆ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆಭಾರತ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ.

6/8

ಜೂನ್‌ 12ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಹಾಸನ ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ಕೋಲಾರ ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

7/8

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

8/8

ಜೂನ್‌ 13ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.