ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

-

Prabhakara R
Prabhakara R Jul 7, 2026 7:50 PM

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕಾಗಿದೆ. ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಅನೇಕ ಕಡೆ ಉತ್ತಮ ಮಳೆಯಾಗಿದೆ. ಇದೇ ರೀತಿ ಮುಂದಿನ ಮೂರು ದಿನ ರಾಜ್ಯದಲ್ಲಿ ಭರ್ಜರಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ. ಹೀಗಾಗಿ ಜುಲೈ 8ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ನೀಡಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ನಿರಂತರ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ಗಂಟೆಗೆ 50-60 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಅಥವಾ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಮಂಡ್ಯ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ, ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆಯಿದೆ.

ಜುಲೈ 9ರಂದು ಕೂಡ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇನ್ನು ಜುಲೈ 10ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಸಾಧ್ಯತೆ

ರಾಜ್ಯದ ಘಟ್ಟ ಪ್ರದೇಶಗಳಲ್ಲಿ ಜುಲೈ 7 ರಿಂದ 11 ರವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭೂಕುಸಿತ (Landslide Warning) ಸಂಭವಿಸುವ ಸಾಧ್ಯತೆಯಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.

Haveri Rain: ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಮಳೆ; ಬರದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಸಂತಸ

ಮೀನುಗಾರರಿಗೆ ಎಚ್ಚರಿಕೆ:

ಜುಲೈ 9ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.