ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಇಂದು ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಭಾರಿ ಮಳೆ ನಿರೀಕ್ಷೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಇಂದು ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Profile Prabhakara R May 29, 2025 6:00 AM

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (ಜೂನ್-ಸೆಪ್ಟೆಂಬರ್) – 2025 ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather) ಈಗಾಗಲೇ ತಿಳಿಸಿದೆ. ಅದರಂತೆ ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸುತ್ತಿದ್ದಾನೆ. ಇನ್ನು ಮೇ 29ರಂದು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಹಾಗೆಯೇ ಮೈಸೂರು ಉಡುಪಿ, ದಾವಣಗೆರೆ, ರಾಯಚೂರು, ಯಾದಗಿರಿ, ಕಲಬುರಗಿ ಬೀದರ್‌ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಸಿನ ಮಳೆಯಾಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯೊಂದಿಗೆ ನಿರಂತರ ಗಾಳಿ (ಗಾಳಿಯ ವೇಗ ಗಂಟೆಗೆ 40-50 ಕಿ.ಮೀ.) ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ರಾಜ್ಯದ ಕರಾವಳಿ ತೀರದಲ್ಲಿ ಮೇ 31 ರವರೆಗೆ, ಜೋರಾದ ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಪ್ರತಿ ಗಂಟೆಗೆ 60 ಕಿ.ಮೀ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳಲಿದೆ. ಆದ್ದರಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.



ಮೇ 30ರಂದು ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಇನ್ನು ಮೇ 30ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅದೇ ರೀತಿ ಮೇ 31ರಂದು ರಾಜ್ಯ ಎಲ್ಲ 31 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಇನ್ನು ಜೂನ್‌ 1ರಂದು ಕರಾವಳಿ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ | Health Tips: ಜೀರ್ಣಾಂಗ ಆರೋಗ್ಯ ದಿನ: ಹೊಟ್ಟೆ ಕೆಡಿಸಿಕೊಳ್ಳಬೇಡಿ