ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains:‌ ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ನಾಳೆ ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Profile Prabhakara R Jun 21, 2025 6:26 PM

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ಜೂನ್‌ 26ರವರೆಗೆ ಹವಾಮಾನ ಇಲಾಖೆಯು (Karnataka Rains) ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜೂನ್‌ 22ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು ಸೇರಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಈ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಕೋಲಾರ, ಮಂಡ್ಯ, ದಾವಣಗೆರೆ, ತುಮಕೂರು ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಫಲವಂತಿಕೆ ಹೆಚ್ಚಿಸಲು ಯೋಗ ನೆರವಾಗಬಲ್ಲದು; ಗೊತ್ತೇ?

ಜೂನ್‌ 23ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಯಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಕೋಲಾರ, ಮಂಡ್ಯ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಹಾಸನ, ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 25ರಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 26 ಮತ್ತು 27ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.