Murder Case: ಹಾವೇರಿಯಲ್ಲಿ ಯುವತಿಯ ಹತ್ಯೆ; ಆರೋಪಿ ನಯಾಜ್ ಅರೆಸ್ಟ್
Murder Case: ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಎಂಬ ಯುವತಿ ಹತ್ಯೆಯಾಗಿರುವುದು ದೃಢಪಟ್ಟಿದೆ. ಪ್ರಕರಣ ಸಂಬಂಧ ಆರೋಪಿ ನಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಹಾವೇರಿ: ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಹತ್ಯೆಯಾಗಿದ್ದು (Murder Case), ಮೂವರ ಮೇಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು, ಆರೋಪಿಯನ್ನು ನಯಾಜ್ ಎಂದು ಗುರುತಿಸಲಾಗಿದೆ. ಹತ್ಯೆಯಾದ ಯುವತಿಯನ್ನು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ್ ಬ್ಯಾಡಗಿ (22) (Swathi Ramesh Byadagi) ಎಂದು ಗುರುತಿಸಲಾಗಿದೆ. ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢಪಟ್ಟಿದೆ.
ಮಾ.6 ರಂದು ಯುವತಿಯ ಮೃತದೇಹ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಪತ್ತೆಯಾಗಿತ್ತು. ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಬಳಿಕ ವಾರಸುದಾರರು ಯಾರೂ ಇಲ್ಲದ ಹಿನ್ನೆಲೆ ಮರಣೋತ್ತರ ಪರೀಕ್ಷೆ ನಡೆಸಿ ಕಾನೂನು ಪ್ರಕಾರ ಸ್ವಾತಿ ಶವವನ್ನು ಹೂತು ಹಾಕಲಾಗಿತ್ತು.
ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢಪಟ್ಟಿದೆ. ಬಳಿಕ ತನಿಖೆ ತೀವ್ರಗೊಳಿಸಿದ ಹಲಗೇರಿ ಪೊಲೀಸರು, ಮಾ.3 ರಂದು ಕಾಣೆಯಾಗಿದ್ದ ಯುವತಿಯ ಗುರುತನ್ನು ಪತ್ತೆಹಚ್ಚಿದ್ದರು. ಮತ್ತೊಂದೆಡೆ ಸ್ವಾತಿ ಪೋಷಕರು, ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನೂ ಓದಿ | Assault Case: ವೃದ್ಧ ಅತ್ತೆ-ಮಾವನ ಮೇಲೆ ಸೊಸೆ, ಮಕ್ಕಳಿಂದ ಬರ್ಬರ ಹಲ್ಲೆ
ಸ್ವಾತಿ ತಂದೆ ಮೃತಪಟ್ಟಿದ್ದು, ಆಕೆ ತಾಯಿ ಜತೆ ವಾಸವಿದ್ದಲು. ಸದ್ಯ ಮೂವರ ಮೇಲೆ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಹಲಗೇರಿ ಪೊಲೀಸರು ತೀವ್ರಗೊಳಿಸಿದ್ದಾರೆ. ಹಿಂದು ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ ಆರಂಭಿಸಿದ್ದು, ಹಂತಕರನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಕೊಡಗು: ವಸತಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ (Student Death) ಸಾವನ್ನಪ್ಪಿದ್ದಾಳೆ. ಕೊಡಗು (Coorg news) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಈಕೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ವಿದ್ಯಾರ್ಥಿನಿ ಸಾವಿನ ಬಗ್ಗೆ ಬಂಧುಗಳು ಅನುಮಾನ (Suspiciously) ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿ ಪೂರ್ವಿಕ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರೋಗ್ಯವಾಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಮೃತಪಟ್ಟ ಹಿನ್ನೆಲೆಯಲ್ಲಿ ಪೂರ್ವಿಕ ಸಾವು ಅನುಮಾನ ಮೂಡಿಸಿದೆ. ಶವವನ್ನು ಸದ್ಯ ಶವಾಗಾರದಲ್ಲಿಡಲಾಗಿದೆ. ಘಟನೆ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.