#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Hubballi News: ಹುಬ್ಬಳ್ಳಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ; ಮೃತರ ಆತ್ಮಕ್ಕೆ ಶಾಂತಿ ಕೋರಿ ಸಾಮೂಹಿಕ ಹೋಮ

ಡಿ. 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೊನಿಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಆತ್ಮಕ್ಕೆ ಶಾಂತಿ ಕೋರಿ ಸಾಮೂಹಿಕ ಹೋಮ ನಡೆಸಲಾಗಿದೆ.

ಹುಬ್ಬಳ್ಳಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ; ಮೃತರ ಆತ್ಮಕ್ಕೆ ಶಾಂತಿ ಕೋರಿ ಸಾಮೂಹಿಕ ಹೋಮ

ಹುಬ್ಬಳ್ಳಿಯಲ್ಲಿ ಸಾಮೂಹಿಕ ಹೋಮ.

Profile Ramesh B Jan 28, 2025 1:14 PM

ಹುಬ್ಬಳ್ಳಿ: ಡಿ. 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೊನಿಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟ(Cylinder Blast)ಗೊಂಡು 8 ಮಂದಿ ಅಯ್ಯಪ್ಪ ಸ್ವಾಮಿ (Ayyappa swamy) ಮಾಲಾಧಾರಿಗಳು ಮೃತಪಟ್ಟ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು (Hubballi News). ಹೀಗಾಗಿ ಘಟನೆ ನಡೆದ ಅಚ್ಚವ್ವನ ಕಾಲೊನಿಯಲ್ಲಿ ಶಾಂತಿಗಾಗಿ ಹೋಮ ನಡೆಸಲಾಗಿದೆ. ಹಿಂದೂ ಸಂಪ್ರದಾಯದ ಪ್ರಕಾರ ಹೋಮ, ನವಗ್ರಹ ಶಾಂತಿ, ಗಣಹೋಮ ಹವನ ಕೈಗೊಳ್ಳಲಾಗಿದೆ. ಈ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಲಾಗಿದೆ.

ಡಿ. 22ರ ಘಟನೆಯಲ್ಲಿ ಒಟ್ಟು 9 ಮಾಲಾಧಾರಿಗಳ ಪೈಕಿ 8 ಮಂದಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಈ ನಿಟ್ಟಿನಲ್ಲಿ 2 ದಿನಗಳ ಕಾಲ ಶಾಂತಿಗಾಗಿ, ಮೃತರ ಆತ್ಮಕ್ಕೆ ಶಾಂತಿಕೋರುವ ಹಿನ್ನಲೆಯಲ್ಲಿ ಸಾಮೂಹಿಕ ಹೋಮ ಹವನ ನಡೆಸಲಾಗಿದೆ.



ಘಟನೆ ವಿವರ

ಅಯ್ಯಪ್ಪ ಮಾಲೆ ಧರಿಸಿ ವ್ರತ ಆಚರಿಸುತ್ತಿದ್ದ 9 ಮಂದಿ ಈಶ್ವರ ದೇವಸ್ಥಾನದಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಘಟನೆ ನಡೆದ ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ತಾಗಿ ಸಿಲಿಂಡರ್‌ ಉರುಳಿದೆ. ಪರಿಣಾಮ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿ, ದೇವಸ್ಥಾನದಲ್ಲಿ ಹಚ್ಚಿದ್ದ ದೀಪಕ್ಕೆ ತಗುಲಿದೆ. ಆಗ ಒಮ್ಮೆಲೆ ದೇವಸ್ಥಾನದ ಪ್ರಾಂಗಣದಲ್ಲಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಧ್ಯರಾತ್ರಿ ಬೆಂಕಿ ಬಿದ್ದಿರುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳು ಕಿರುಚಾಡುತ್ತಿದ್ದುದನ್ನು ಗಮನಿಸಿದ ನೆರೆ ಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿದರೆ, ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಲು ನೆರವಾಗಿದ್ದರು.

ಈ ಸುದ್ದಿಯನ್ನೂ ಓದಿ: Cylinder Blast: ಸಿಲಿಂಡರ್‌ ಸ್ಫೋಟದಲ್ಲಿ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಸುದ್ದಿ ತಿಳಿಯುತ್ತಿದ್ದಂತೆಯೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಚನ್ನು ಹೊಸಮನಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು. ಕೆಲವು ದಿನಗಳ ಹಿಂದೆ ಮಾಲಾಧಾರಿಗಳಾಗಿದ್ದ ತಂಡ ಡಿಸೆಂಬರ್‌ ಕೊನೆಯ ವಾರ ಶಬರಿಮಲೆಗೆ ಹೋಗಲು ತಯಾರಿ ಮಾಡಿಕೊಂಡಿತ್ತು. ಈ ವೇಳೆ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು.